ಮುಂಬೈ: ಮಹಾರಾಷ್ಟ್ರದ ಸಚಿವ ಆದಿತ್ಯ ಠಾಕ್ರೆ ಶಿವಸೇನೆಯ ಬಂಡಾಯ ಶಾಸಕರಿಗೆ ಸರ್ಕಾರದಿಂದ ಏನು ತಪ್ಪಾಗಿದೆ ಎಂದು ನೇರವಾಗಿ ಉತ್ತರಿಸುವಂತೆ ಸವಾಲು ಎಸೆದಿದ್ದಾರೆ.
ಆದಿತ್ಯ ಠಾಕ್ರೆ ತಂದೆ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರದ ಹಿರಿಯ ನಾಯಕ ಏಕನಾಥ್ ಶಿಂಧೆ ನೇತೃತ್ವದಲ್ಲಿ 40 ಶಾಸಕರು ಬಂಡಾಯ ಎದ್ದಿರುವ ಹಿನ್ನೆಲೆಯಲ್ಲಿ ಆದಿತ್ಯ ಠಾಕ್ರೆ ಸವಾಲು ಎಸೆದಿದ್ದಾರೆ. ಇದನ್ನೂ ಓದಿ: ಉದ್ಧವ್ ಠಾಕ್ರೆ ಸರ್ಕಾರ ಬಹುತೇಕ ಪತನ – ಸುಪ್ರೀಂ ಕೋರ್ಟ್‍ನಲ್ಲಿ ಬಹುಮತ ಕಳೆದುಕೊಂಡಿದೆ ಎಂದ ಬಂಡಾಯ ಶಾಸಕರು
Advertisement
Advertisement
ಬಂಡಾಯ ಶಾಸಕರನ್ನು ಟೀಕಿಸಿದ ಆದಿತ್ಯ ಠಾಕ್ರೆ, ಅವರು ಬಂಡುಕೋರರಲ್ಲ, ದೇಶದ್ರೋಹಿಗಳು. ದೇಶ ದ್ರೋಹಿಗಳು ಎಂದಿಗೂ ಗೆಲ್ಲುವುದಿಲ್ಲ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಇರೋದು ಮೂರಾಬಟ್ಟೆ ಸರ್ಕಾರ: ಕಾರಜೋಳ
Advertisement
ಮಹಾರಾಷ್ಟ್ರದ ರಾಜಕೀಯ ಹೈಡ್ರಾಮಾದ ನಡುವೆ ಬಂಡಾಯ ಶಾಸಕರು ಉಪಸಭಾಪತಿ ಹೊರಡಿಸಿದ್ದ ಅನರ್ಹತೆಯ ನೋಟಿಸ್‌ಗೆ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಈ ಹಿನ್ನೆಲೆಯಲ್ಲಿ ಉದ್ಧವ್ ಠಾಕ್ರೆ, ಸಂಜಯ್ ರಾವತ್ ಸೇರಿದಂತೆ ಶಿವಸೇನೆಯ ಹಿರಿಯ ರಾಜಕಾರಣಿಗಳು ವಾಗ್ದಾಳಿ ನಡೆಸಿದ್ದಾರೆ