ಬೆಂಗಳೂರು: ಚಾಮರಾಜನಗರ, ಚಿಕ್ಕಮಗಳೂರು ಜಿಲ್ಲಾಧಿಕಾರಿಗಳು ಸೇರಿದಂತೆ ರಾಜ್ಯಾದ್ಯಂತ 14 ಐಎಎಸ್ ಅಧಿಕಾರಿಗಳನ್ನು (IAS Officers) ಮಂಗಳವಾರ ತಡರಾತ್ರಿ ವರ್ಗಾವಣೆ (Transfer) ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಚಾಮರಾಜನಗರ ಡಿಸಿಯಾಗಿದ್ದ ರಮೇಶ್ ಡಿ.ಎಸ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬೆಂಗಳೂರು ತೋಟಗಾರಿಕಾ ಇಲಾಖೆ ನಿರ್ದೇಶಕರಾಗಿ ವರ್ಗಾಯಿಸಲಾಗಿದೆ.
Advertisement
Advertisement
ಬೆಂಗಳೂರು ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ನಿದೇಶಕರಾಗಿದ್ದ ಮೀನಾ ನಾಗರಾಜ್ ಸಿ.ಎನ್ ಅವರನ್ನು ಮುಂದಿನ ಆದೇಶದವರೆಗೆ ಚಿಕ್ಕಮಗಳೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.
Advertisement
ಕಾರ್ನಾಟಕ ವಿಪತ್ತು ನಿರ್ವಹಣೆ ಪ್ರಾಧಿಕಾರದ ಆಯುಕ್ತರಾಗಿದ್ದ ಪ್ರಭು ಜಿ ಅವರನ್ನು ತುಮಕೂರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ವರ್ಗಾಯಿಸಲಾಗಿದೆ.
Advertisement
ಐಎಎಸ್ ಅಧಿಕಾರಿ ನವೀನ್ ಸಾಗರ್ ಸಿಂಗ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಸತಿ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಇದನ್ನೂ ಓದಿ: ಕೊಪ್ಪಳದ ವಿದ್ಯಾರ್ಥಿನಿ ಪತ್ರಕ್ಕೆ ಸಿದ್ದರಾಮಯ್ಯ ಸಂತಸ – ಮರಳಿ ಪತ್ರ ಬರೆದ ಸಿಎಂ
ಕರ್ನಾಟಕ ಮುನ್ಸಿಪಲ್ ಡಾಟಾ ಸೊಸೈಟಿ ಜಂಟಿ ನಿರ್ದೇಶಕರಾಗಿದ್ದ ಡಾ. ಗೋಪಾಲ ಕೃಷ್ಣ ಹೆಚ್.ಎನ್ ಅವರನ್ನು ಬೆಂಗಳೂರು ಕಾರ್ಮಿಕ ಇಲಾಖೆ ಆಯುಕ್ತರಾಗಿ ನಿಯೋಜಿಸಲಾಗಿದೆ.
ಐಎಎಸ್ ಅಧಿಕಾರಿ ಡಾ. ಆನಂದ್ ಕೆ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಿಇಒ ಆಗಿ ವರ್ಗಾವಣೆ ಮಾಡಲಾಗಿದೆ. ಇದನ್ನೂ ಓದಿ: ಇನ್ಮುಂದೆ ಖಾಸಗಿ ಶಾಲಾ ಶಿಕ್ಷಕರಿಗೂ ರಾಷ್ಟ್ರೀಯ ಪ್ರಶಸ್ತಿ ನೀಡಲು ಕೇಂದ್ರ ನಿರ್ಧಾರ