ತಿರುಪತಿ: ಹಿಂದೂಯೇತರ ಉದ್ಯೋಗಿಗಳ ವಿರುದ್ಧ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿ ಕೊನೆಗೂ ಕ್ರಮ ತೆಗೆದುಕೊಂಡಿದೆ.
ಕರ್ತವ್ಯದಲ್ಲಿದ್ದಾಗ ಹಿಂದೂ (Hindu) ಧರ್ಮದ ಆಚರಣೆಗಳನ್ನು ಪಾಲನೆ ಮಾಡದ 18 ಹಿಂದೂಯೇತರ ಸಿಬ್ಬಂದಿಯನ್ನು ಇತರೆ ಇಲಾಖೆಗಳಿಗೆ ವರ್ಗ ಮಾಡಿ ಆದೇಶ ಹೊರಡಿಸಿದೆ. ಸ್ವಯಂ ನಿವೃತ್ತಿ ತೆಗೆದುಕೊಳ್ಳುವುದಾದರೆ ತೆಗೆದುಕೊಳ್ಳಬಹುದು ಎಂದು ಸೂಚಿಸಿದೆ. ಈ ಆದೇಶವನ್ನು ಪಾಲಿಸಲು ವಿಫಲವಾದರೆ ಮುಂದಿನ ಕ್ರಮ ಕೈಗೊಳ್ಳಬೇಕಾಗುವುದು ಎಂದು ಸೂಚಿಸಿದೆ.
Advertisement
ಈ 18 ಸಿಬ್ಬಂದಿ ಟಿಟಿಡಿ ಉತ್ಸವಗಳು ಮತ್ತು ಆಚರಣೆಗಳಲ್ಲಿ ಭಾಗವಹಿಸಿದ್ದರೂ ಹಿಂದೂ ಧರ್ಮದ ಆಚರಣೆಗಳನ್ನು ಪಾಲನೆ ಮಾಡದ್ದಕ್ಕೆ ಈ ಕ್ರಮವನ್ನು ಕೈಗೊಳ್ಳಲಾಗಿದೆ. ದೇವಾಲಯಗಳು ಮತ್ತು ಧಾರ್ಮಿಕತೆಯ ಆಧ್ಯಾತ್ಮಿಕ ಪಾವಿತ್ರ್ಯವನ್ನು ಕಾಪಾಡಲು ಈ ನಿರ್ಧಾರ ಕೈಗೊಳ್ಳಾಗಿದೆ ಎಂದು ಟಿಟಿಡಿ ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿದೆ.
Advertisement
Advertisement
ಹಲವು ವರ್ಷಗಳಿಂದ ದೇವಸ್ಥಾನ ಮಂಡಳಿ ಮತ್ತು ಅದರ ಅಂಗ ಸಂಸ್ಥೆಗಳಲ್ಲಿ ಹಿಂದೂಗಳಿಗೆ ಮಾತ್ರ ಉದ್ಯೋಗ ನೀಡಬೇಕು ಎಂದು ಟಿಟಿಡಿ ಕಾಯ್ದೆಯನ್ನು ಮೂರು ಬಾರಿ ತಿದ್ದುಪಡಿ ಮಾಡಲಾಗಿದೆ. 1989 ರಲ್ಲಿ ಹೊರಡಿಸಲಾದ ಸರ್ಕಾರಿ ಆದೇಶವು ಟಿಟಿಡಿ-ಆಡಳಿತದ ಹುದ್ದೆಗಳಿಗೆ ನೇಮಕಾತಿಗಳನ್ನು ಹಿಂದೂಗಳಿಗೆ ಸೀಮಿತಗೊಳಿಸಬೇಕೆಂದು ಆದೇಶಿಸಿತ್ತು.
Advertisement
ಸರ್ಕಾರದ ನಿರ್ಧಾರವನ್ನು ಸಂವಿಧಾನದ 16(5) ನೇ ವಿಧಿಯು ಬೆಂಬಲಿಸುತ್ತದೆ, ಇದು ಧಾರ್ಮಿಕ ಅಥವಾ ಪಂಗಡದ ಸ್ವರೂಪದ ಸಂಸ್ಥೆಗಳು ತಮ್ಮದೇ ಆದ ಧರ್ಮದ ಸದಸ್ಯರನ್ನು ನೇಮಿಸಿಕೊಳ್ಳಲು ಅನುವು ಮಾಡಿಕೊಡುತ್ತದೆ. ಆಂಧ್ರ ಪ್ರದೇಶ ದತ್ತಿ ಮತ್ತು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿಗಳ ಅಧೀನ ಸೇವಾ ನಿಯಮಗಳ ನಿಯಮ 3 ಧಾರ್ಮಿಕ ಸಂಸ್ಥೆಗಳ ನೌಕರರು ಹಿಂದೂ ನಂಬಿಕೆಯನ್ನು ಪ್ರತಿಪಾದಿಸಬೇಕು ಎಂದು ಹೇಳುತ್ತದೆ. ಇದನ್ನೂ ಓದಿ: ಮಹಾ ಕುಂಭಮೇಳ – ರುದ್ರಾಕ್ಷಿ ಮಾಲೆ ಧರಿಸಿ ತ್ರಿವೇಣಿ ಸಂಗಮದಲ್ಲಿ ಮೋದಿ ಪುಣ್ಯಸ್ನಾನ
ಈ ನಿಬಂಧನೆಗಳ ಹೊರತಾಗಿಯೂ, ಹಿಂದೂಯೇತರರು ದೇವಸ್ಥಾನದ ಒಳಗಡೆ ಕೆಲಸ ಮಾಡುವುದನ್ನು ಮುಂದುವರೆಸಿದ್ದರು. ನವೆಂಬರ್ 2023 ರಲ್ಲಿ ಆಂಧ್ರಪ್ರದೇಶ ಹೈಕೋರ್ಟ್ ನಿಯಮ 3 ಅನ್ನು ಎತ್ತಿಹಿಡಿದಿತ್ತು. ನೌಕರರು ಹಿಂದೂ ಧರ್ಮವನ್ನು ಅನುಸರಿಸುವ ಅವಶ್ಯಕತೆ ಸೇರಿದಂತೆ ಸೇವಾ ಷರತ್ತುಗಳನ್ನು ಕಡ್ಡಾಯಗೊಳಿಸಲು ಟ್ರಸ್ಟ್ ಮಂಡಳಿಗಳಿಗೆ ಅಧಿಕಾರವಿದೆ ಎಂದು ಮಹತ್ವದ ತೀರ್ಪು ಪ್ರಕಟಿಸಿತ್ತು.
ಹೊಸದಾಗಿ ರಚನೆಯಾಗಿರುವ ತಿರುಮಲ ತಿರುಪತಿ (Tirupati) ದೇವಸ್ಥಾನಂ ಮಂಡಳಿ ಉದ್ಯೋಗದಲ್ಲಿರುವ ಹಿಂದೂಯೇತರರು ಸ್ವಯಂ ನಿವೃತ್ತಿ ತೆಗೆದುಕೊಳ್ಳಬೇಕು (VRS) ಅಥವಾ ಆಂಧ್ರಪ್ರದೇಶದ ಇತರ ಸರ್ಕಾರಿ ಇಲಾಖೆಗಳಿಗೆ ವರ್ಗಾವಣೆಯನ್ನು ಆರಿಸಿಕೊಳ್ಳಬೇಕೆಂದು ನಿರ್ಣಯವನ್ನು ಕಳೆದ ನವೆಂಬರ್‌ನಲ್ಲಿ ಅಂಗೀಕರಿಸಿತ್ತು.
ಮಂಡಳಿಯ 7 ಸಾವಿರ ಖಾಯಂ ಉದ್ಯೋಗಿಗಳ ಪೈಕಿ ಸುಮಾರು 300 ಮಂದಿಗೆ ಈ ಕ್ರಮವು ಪರಿಣಾಮ ಬೀರಲಿದೆ ಎಂದು ಮೂಲಗಳು ತಿಳಿಸಿವೆ. ಟಿಟಿಡಿಯು ಸುಮಾರು 14,000 ಗುತ್ತಿಗೆ ಕಾರ್ಮಿಕರನ್ನು ಸಹ ನೇಮಿಸಿಕೊಂಡಿದೆ.