ಬೆಂಗಳೂರು: ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಟ್ರಾನ್ಸ್ ಫಾರ್ಮರ್ ಸ್ಫೋಟಗೊಂಡು ಅಮಾಯಕ ಬಡಜೀವ ಬಲಿಯಾಗಿರುವ ದುರ್ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.
58 ವರ್ಷದ ಶಿವರಾಜು ಮೃತ ದುರ್ದೈವಿ. ಶಿವರಾಜು ವೃತ್ತಿಯಲ್ಲಿ ಸೆಕ್ಯೂರಿಟಿಯಾಗಿದ್ದು, ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದರು. ಮನೆಯಲ್ಲಿ ಮದುವೆ ಕಾರ್ಯಕ್ರಮವಿದ್ದ ಕಾರಣ ಬಟ್ಟೆ ಖರೀದಿಗೆ ಮಗಳೊಂದಿಗೆ ಉಲ್ಲಾಳ ಉಪನಗರಕ್ಕೆ ಬಂದು ಬಟ್ಟೆ ಖರೀದಿ ಮಾಡಿಕೊಂಡು ಅಪ್ಪ-ಮಗಳು ಬೈಕ್‍ನಲ್ಲಿ ಮನೆಗೆ ಹೋಗುತ್ತಿದ್ದರು. ಇದನ್ನೂ ಓದಿ: ಆಂಡ್ರಾಯ್ಡ್ ಬಳಕೆದಾರಿಗೆ ಮೋಸ ಮಾಡಿ ಸಿಕ್ಕಿಬಿದ್ದ ಗೂಗಲ್
ಈ ವೇಳೆ ಅವರಿಬ್ಬರು ಹೋಗುತ್ತಿದ್ದ ಮಂಗನಹಳ್ಳಿ ಬ್ರಿಡ್ಜ್ ಬಳಿ ಸಡನ್ ಆಗಿ ಟ್ರಾನ್ಸ್ ಫಾರ್ಮರ್ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಬೈಕ್ ಸಂಪೂರ್ಣ ಭಸ್ಮವಾಗಿದ್ದು, ತಂದೆ ಶಿವರಾಜು, ಮಗಳು ಚೈತನ್ಯ ಗಂಭೀರವಾಗಿ ಸುಟ್ಟು ಹೋಗಿದ್ದಾರೆ. ಕೂಡಲೇ ಸ್ಥಳೀಯರ ಸಹಾಯದಿಂದ ತಂದೆ ಮಗಳನ್ನ ವಿಕ್ಟೋರಿಯಾ ಆಸ್ಪತ್ರೆ ರವಾನಿಸಿದ್ದಾರೆ.
ಚಿಕಿತ್ಸೆ ಫಲಕಾರಿಯಾಗದೆ ತಂದೆ ಶಿವರಾಜು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಮಗಳು ಚೈತನ್ಯ ಸ್ಥಿತಿ ಗಂಭೀರವಾಗಿದೆ. ಘಟನೆ ಸಂಬಂಧ ಶಿವರಾಜು ಸಂಬಂಧಿಕರು ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಬೆಸ್ಕಾಂ ನಿರ್ಲಕ್ಷ್ಯದ ಆರೋಪದ ಮೇಲೆ ದೂರು ದಾಖಲಿಸಿಕೊಂಡಿರೋ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಹುಡುಗಿ ಎಂದು ಅಪ್ಪನ ಜೊತೆಗೆ ಚಾಟ್ ಮಾಡಿ ಸಿಕ್ಕಿಬಿದ್ದ ಖ್ಯಾತ ನಿರ್ಮಾಪಕ!
ಘಟನ ಸ್ಥಳಕ್ಕೆ ಆಗಮಿಸಿದ ಸಚಿವ ಎಸ್.ಟಿ.ಸೋಮಶೇಖರ್ ಘಟನೆಯಲ್ಲಿ ಗಾಯಗೊಂಡಿರುವವರ ಚಿಕಿತ್ಸೆ ವೆಚ್ಚ ಭರಿಸುವುದಾಗಿ ಭರವಸೆ ನೀಡಿದ್ದಾರೆ.