ಬೆಂಗಳೂರು: ಸಾರಿಗೆ ನೌಕರರ (Transport Employees) ಬಹುದಿನಗಳ ಬೇಡಿಕೆಗೆ ಸರ್ಕಾರ (Congress Government) ಸ್ವಲ್ಪ ಸಂದನೆ ಮಾಡಿದೆ. 38 ತಿಂಗಳ ಹಿಂಬಾಕಿ ಪೈಕಿ 26 ತಿಂಗಳ ಹಿಂಬಾಕಿ ನೀಡಲು ಸರ್ಕಾರ ಒಪ್ಪಿಗೆ ನೀಡಿದೆ.
ಶಾಂತಿನಗರದಲ್ಲಿರುವ ಕೆಎಸ್‌ಆರ್‌ಟಿಸಿ (KSRTC) ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ರಾಮಲಿಂಗಾ ರೆಡ್ಡಿ, 26 ತಿಂಗಳ ಹಿಂಬಾಕಿಗೆ ಬಜೆಟ್ ನಂತರ 1,271 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.
ಸಾರಿಗೆ ನೌಕರರ ಬೇಡಿಕೆ ಬಹಳ ದಿನಗಳಿಂದ ಇತ್ತು. ವೇತನ ಪರಿಷ್ಕರಣೆ ಸಂಬಂಧಿಸಿದಂತೆ ಸಾರಿಗೆ ಸಂಘಟನೆಗಳೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ. ಏ.1 ರಿಂದ ಜಾರಿಗೆ ಬರುವಂತೆ ವೇತನ ಪರಿಷ್ಕರಣೆ ಮಾಡುತ್ತೇವೆ ಎಂದು ಹೇಳಿದರು.
ಬಿಜೆಪಿ ಸರ್ಕಾರ ಇದ್ದಾಗ ಸಾಕಷ್ಟು ಬಾಕಿ ಉಳಿಸಿದ್ದರು. ಆದರೆ ನಮ್ಮ ಸರ್ಕಾರ ಬಹಳ ಕೆಲಸ ಮಾಡಿದೆ ಎಂದು ನುಡಿದರು. ಇದನ್ನೂ ಓದಿ: ಅಸಹಜ ಲೈಂಗಿಕ ದೌರ್ಜನ್ಯ ಕೇಸ್ – ಆರೋಪ ಮುಕ್ತಗೊಳಿಸುವಂತೆ ಸೂರಜ್ ರೇವಣ್ಣ ಸಲ್ಲಿಸಿದ್ದ ಅರ್ಜಿ ವಜಾ
ಪ್ರಮುಖ ಬೇಡಿಕೆಗಳು ಏನು?
38 ತಿಂಗಳ ಹಿಂಬಾಕಿ ಹಣ ನೀಡಬೇಕು, ಸರ್ಕಾರಿ ನೌಕರರಿಗೆ ನೀಡುವ ವೇತನಕ್ಕೆ ಸರಿಸಮಾನ ವೇತನ ನೀಡಬೇಕು, ಕಾರ್ಮಿಕರ ಕಿರುಕುಳ ನಿಲ್ಲಬೇಕು ಹಾಗೂ 1-1-2024 ರಿಂದ ವೇತನ ಜಾರಿಗೊಳಿಸಬೇಕು ಎನ್ನುವುದು ಪ್ರಮುಖ ಬೇಡಿಕೆಯಾಗಿದೆ.

