ಕೋಲಾರ: ಗಾಳಿ ಮಳೆಯಿಂದ ವಿದ್ಯುತ್ ಕಂಬ ನೆಲಕ್ಕುರಳಿದ್ದನ್ನು ಗಮನಿಸದೇ ಬೈಕ್ ಚಾಲನೆ ಮಾಡಿದ ಸಾರಿಗೆ ನೌಕರ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ.
ಕೋಲಾರ ಜಿಲ್ಲೆಯ ಮುಳಬಾಗಿಲು (Mulabagilu) ತಾಲೂಕಿನ ರಾಜೇಂದ್ರ ಹಳ್ಳಿಯಲ್ಲಿಂದು ಮುಂಜಾನೆ ಈ ಘಟನೆ ನಡೆದಿದ್ದು, ಗ್ರಾಮದ ರೆಡ್ಡಪ್ಪ (58) ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದಾರೆ. ಕಳೆದ ರಾತ್ರಿ ಬಿರುಗಾಳಿ ಮಳೆಯಿಂದ ವಿದ್ಯುತ್ ಕಂಬಗಳು ನೆಲಕ್ಕುರುಳಿ ಬಿದ್ದಿದ್ದವು. ತಂತಿಗಳು ರಸ್ತೆಗೆ ಅಡ್ಡಲಾಗಿ ಬಿದ್ದಿತ್ತು. ಇಂದು ಮುಂಜಾನೆ ಎದ್ದು ಎಂದಿನಂತೆ ತೋಟಕ್ಕೆ ತೆರಳುವ ವೇಳೆ ಬೈಕ್‌ಗೆ ತಂತಿ ಸ್ಪರ್ಶವಾಗಿ ರೆಡ್ಡಪ್ಪ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಡಿಕೆಶಿಗೆ ಮಾನ, ಮರ್ಯಾದೆ ಇದ್ರೆ ಕೂಡ್ಲೇ ಮಂಜುನಾಥ್ ಉಚ್ಚಾಟಿಸಿ: ಶರಣು ಸಲಗರ್
ರೆಡ್ಡಪ್ಪ ಮುಳಬಾಗಿಲು ಕೆಎಸ್‌ಆರ್‌ಟಿಸಿ ಘಟಕದಲ್ಲಿ ಸಂಚಾರಿ ನಿಯಂತ್ರಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಸ್ಥಳಕ್ಕೆ ಬೆಸ್ಕಾಂ ಇಲಾಖೆ ಸಿಬ್ಬಂದಿ ಭೇಟಿ ನೀಡಿದ್ದು, ವಿದ್ಯುತ್ ತಂತಿಗಳ ತೆರವು ಕಾರ್ಯ ಮಾಡಲಾಗಿದೆ. ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದಾರೆ ಎಂದು ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕೊತ್ತೂರು ಮಂಜುನಾಥ್ ಅಬ್‌ನಾರ್ಮಲ್ ಪರ್ಸನ್, ಕಾಂಗ್ರೆಸ್ ಸಸ್ಪೆಂಡ್ ಮಾಡ್ಬೇಕು: ಎನ್.ಮಹೇಶ್ ಆಗ್ರಹ