ರಾಮನಗರ: ಆಹಾರ ಅರಸಿ ಕಾಡಿನಿಂದ ನಾಡಿಗೆ ಬರಲು ಯತ್ನಿಸಿದ ಕಾಡಾನೆಯೊಂದು(Wild Elephant) ರೈಲ್ವೆ ಹಳಿಗಳ ಬ್ಯಾರಿಕೇಡ್ ಕಬ್ಬಿಣದ ಕಂಬಗಳ ನಡುವೆ ಸಿಲುಕಿ ತೀವ್ರವಾಗಿ ಪರದಾಡಿರುವ ಹೃದಯವಿದ್ರಾವಕ ಘಟನೆ ಕನಕಪುರ (Kanakapura) ತಾಲೂಕಿನ ಅರೆಕೊಪ್ಪ ಗ್ರಾಮದ ಬಳಿ ನಡೆದಿದೆ.
ಅರೆಕೊಪ್ಪ ಗ್ರಾಮವು ಕಾವೇರಿ ವನ್ಯಜೀವಿ ವಲಯದ ಮುಗ್ಗೂರು ಅರಣ್ಯದ ಕಾಡಂಚಿನಲ್ಲಿದೆ. ಇತ್ತೀಚಿನ ದಿನಗಳಲ್ಲಿ ಆಹಾರ (Food) ಮತ್ತು ನೀರನ್ನು (Water) ಹುಡುಕುತ್ತಾ ವನ್ಯಜೀವಿಗಳು ನಾಡಿಗೆ ಬರುವುದು ಸಾಮಾನ್ಯವಾಗಿದೆ. ಅದೇ ರೀತಿ ಮುಗ್ಗೂರು ಅರಣ್ಯ ಪ್ರದೇಶದಿಂದ ಹೊರಬರಲು ಯತ್ನಿಸಿದ ಕಾಡಾನೆಯೊಂದು ಆನೆಗಳು ನಾಡಿಗೆ ಬರದಂತೆ ತಡೆಯಲು ನಿರ್ಮಿಸಲಾಗಿದ್ದ ರೈಲ್ವೆ ಬ್ಯಾರಿಕೇಡ್‌ನ (Railway Barricade) ಕಬ್ಬಿಣದ ಕಂಬಗಳ ಮಧ್ಯೆ ಸಿಲುಕಿಕೊಂಡಿದೆ.

ಕಬ್ಬಿಣದ ಕಂಬಗಳ ನಡುವೆ ದೇಹ ಸಿಲುಕಿಕೊಂಡಿದ್ದರಿಂದ ಆನೆಗೆ ಮುಂದೆ ಹೋಗಲು ಅಥವಾ ಹಿನ್ನೆಡೆಯಲು ಸಾಧ್ಯವಾಗದೆ ತೀವ್ರವಾಗಿ ನರಳಾಡಿದೆ. ಆನೆಯ ಕಿರುಚಾಟವನ್ನು ಕೇಳಿ ಸ್ಥಳೀಯ ಗ್ರಾಮಸ್ಥರು ಧಾವಿಸಿದ್ದು, ತಕ್ಷಣವೇ ಕಾವೇರಿ ವನ್ಯಜೀವಿ ವಿಭಾಗದ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಜೆಸಿಬಿ ಘರ್ಜನೆ; ಫುಟ್‌ಪಾತ್ ಒತ್ತುವರಿ ತೆರವು

