Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಂಘಟನೆ ಕೆಲಸದಲ್ಲಿ ತೊಡಗಿಸಿಕೊಂಡು ರಾಜ್ಯಾದ್ಯಂತ ಪ್ರವಾಸ ಮಾಡ್ತೇನೆ: ಜಗದೀಶ್ ಶೆಟ್ಟರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಂಘಟನೆ ಕೆಲಸದಲ್ಲಿ ತೊಡಗಿಸಿಕೊಂಡು ರಾಜ್ಯಾದ್ಯಂತ ಪ್ರವಾಸ ಮಾಡ್ತೇನೆ: ಜಗದೀಶ್ ಶೆಟ್ಟರ್

Bengaluru City

ಸಂಘಟನೆ ಕೆಲಸದಲ್ಲಿ ತೊಡಗಿಸಿಕೊಂಡು ರಾಜ್ಯಾದ್ಯಂತ ಪ್ರವಾಸ ಮಾಡ್ತೇನೆ: ಜಗದೀಶ್ ಶೆಟ್ಟರ್

Public TV
Last updated: January 26, 2024 4:33 pm
Public TV
Share
2 Min Read
Jagadish Shettar 1
SHARE

– ಹೈಕಮಾಂಡ್‌ನವ್ರು ಸೂಕ್ತ ಗೌರವ, ಸ್ಥಾನ ಕೊಡೋದಾಗಿ ಹೇಳಿದ್ದಾರೆ ಎಂದ ಮಾಜಿ ಸಿಎಂ

ಬೆಂಗಳೂರು: ಬಿಜೆಪಿ (BJP) ಕಳೆದ ಲೋಕಸಭಾ ಚುನಾವಣೆಯಲ್ಲಿ (Lok Sabha Election) 25 ಸ್ಥಾನ ಗೆದ್ದಿತ್ತು. ಅದಕ್ಕಿಂತ ಹೆಚ್ಚು ಸ್ಥಾನ ಗೆಲ್ಲಲು ಪ್ರಯತ್ನ ಮಾಡುವೆ. ಅದಕ್ಕಾಗಿ ಇಡೀ ರಾಜ್ಯದಲ್ಲಿ ಪ್ರವಾಸ ಮಾಡುವೆ. ಪಕ್ಷದ ಸೂಚನೆಯಂತೆ ಸಂಘಟನಾತ್ಮಕ ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ (Jagadish Shettar) ತಿಳಿಸಿದರು.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನಕ್ಕೆ ಇಂದು ಭೇಟಿ ನೀಡಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕಾರ್ಯಕರ್ತರ ಆಶಯ, ಧ್ವನಿ, ರಾಜ್ಯ ನಾಯಕರ ಕರೆ, ರಾಷ್ಟ್ರೀಯ ನಾಯಕರ ಕರೆಗೆ ಸ್ಪಂದಿಸಿ ಬಿಜೆಪಿಗೆ ಮರಳಿದ್ದೇನೆ. ನೀವು ಹಿರಿಯ ನಾಯಕರು, ನಿಮಗೆ ಬಿಜೆಪಿಯಲ್ಲಿ ಸೂಕ್ತ ಸ್ಥಾನಮಾನ, ಗೌರವ ನೀಡುತ್ತೇವೆ ಎಂದು ಪಕ್ಷದ ಹಿರಿಯರು ತಿಳಿಸಿದ್ದಾರೆ ಎಂದರು. ಇದನ್ನೂ ಓದಿ: ಗಣೇಶ್ ಭಟ್ ಕೆತ್ತಿರೋ ವಿಗ್ರಹವನ್ನು ರಾಮದೇವರ ಬೆಟ್ಟಕ್ಕೆ ನೀಡುವಂತೆ ಇಕ್ಬಾಲ್ ಹುಸೇನ್ ಪತ್ರ

bjp flag e1665156864461

ಕಾಂಗ್ರೆಸ್ (Congress) ಪಕ್ಷ, ವಿಧಾನಪರಿಷತ್ ಸ್ಥಾನಕ್ಕೂ ರಾಜೀನಾಮೆ ಕೊಟ್ಟು ನಿನ್ನೆ ದೆಹಲಿಯ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಪುನರ್ ಸೇರ್ಪಡೆ ಆಗಿದ್ದೇನೆ. ರಾಷ್ಟ್ರೀಯ ನಾಯಕರು, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರನ್ನು ಭೇಟಿ ಮಾಡಿದ್ದೇನೆ. ನನ್ನ ಜೊತೆ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಇತರ ನಾಯಕರು ಇದ್ದರು ಎಂದು ಹೇಳಿದರು. ಇದನ್ನೂ ಓದಿ: ಶಂಕಿತ ಉಗ್ರನ ಜೊತೆ ಭಟ್ಕಳದ ವಿಚ್ಛೇದಿತ ಮಹಿಳೆ ಲಿಂಕ್‌ – ಲವ್‌ ಕಹಾನಿ ಶುರುವಾಗಿದ್ದೇ ರೋಚಕ!

ಇದು ನಮ್ಮ ಮನೆ, ನಾವು ಕಟ್ಟಿ ಬೆಳೆಸಿದ ಮನೆ. ನಮ್ಮ ಕುಟುಂಬ ಬಿಜೆಪಿ ಜೊತೆ ಆತ್ಮೀಯತೆ ಹೊಂದಿದೆ. ಅಸೆಂಬ್ಲಿ ಚುನಾವಣೆ ವೇಳೆ ಕೆಲವೊಂದು ಘಟನೆಗಳ ಕಾರಣ ಕಾಂಗ್ರೆಸ್ ಸೇರಿದ್ದೆ. ಆಮೇಲೆ ಎಂಎಲ್‌ಸಿ ಆದೆ. ನರೇಂದ್ರ ಮೋದಿಯವರು 10 ವರ್ಷಗಳ ದೇಶದ ಆಡಳಿತ, ಉತ್ತಮ ಕೆಲಸ ಕಾರ್ಯ ಮಾಡಿದ್ದಾರೆ. ಅವರು ಮತ್ತೊಮ್ಮೆ ಪ್ರಧಾನಿ ಆಗಬೇಕೆಂಬ ದೃಷ್ಟಿಯಿಂದ ಹಾಗೂ ನಮ್ಮ ದೇಶವು ಆರ್ಥಿಕವಾಗಿ ಇನ್ನಷ್ಟು ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮಬೇಕೆಂಬ ನಮ್ಮೆಲ್ಲರ, ಭಾರತದ ನೂರಾರು ಕೋಟಿ ಜನರ ಅಭಿಲಾಷೆಯಿದೆ. ಹೀಗಾಗಿ ನಾನು ಬಿಜೆಪಿಗೆ ಬಂದಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: ಅಳಿಯನ ಪರೀಕ್ಷೆಯ ಫಲಿತಾಂಶಕ್ಕಾಗಿ ಸಿಎಂ ಬಳಿ ನುಗ್ಗಿದ ಮಾವ- ಮಾಣಿಕ್ ಷಾ ಗ್ರೌಂಡ್‌ನಲ್ಲಿ ಭದ್ರತಾ ಲೋಪ

ಹುಬ್ಬಳ್ಳಿಗೆ ರಥಯಾತ್ರೆ ಬಂದಾಗ ಅದರ ಪೂರ್ತಿ ನಿರ್ವಹಣೆ ಮಾಡಿದ್ದೆ. ರಾಮಮಂದಿರ ನಿರ್ಮಾಣ, ಅಯೋಧ್ಯೆ ಹೋರಾಟದಲ್ಲಿ ಭಾಗವಹಿಸಿದ್ದೆ. ರಾಮಮಂದಿರ ನಿರ್ಮಾಣ ಧನಸಂಗ್ರಹ ಕಾರ್ಯದಲ್ಲಿ ಪಾಲ್ಗೊಂಡು 2 ಕೋಟಿ ರೂ. ಹಣ ಸಂಗ್ರಹಿಸಿದ್ದು ಎಲ್ಲರಿಗೂ ಗೊತ್ತಿದೆ. ಭವ್ಯ ರಾಮಮಂದಿರ ನಿರ್ಮಾಣದ ಕನಸು ಮೋದಿಯವರ ನೇತೃತ್ವದಲ್ಲಿ ನನಸಾಗಿದೆ ಎಂದು ವಿವರಿಸಿದರು. ಇದನ್ನೂ ಓದಿ: ಕರ್ತವ್ಯ ಪಥದಲ್ಲಿ ಮಿಂಚಿದ ʻರಾಕೆಟ್‌ ಗರ್ಲ್‌ʼ – ಚಂದ್ರಯಾನ-3 ಸಕ್ಸಸ್‌ನಲ್ಲಿ ಮಹಿಳಾ ವಿಜ್ಞಾನಿಗಳ ಕೊಡುಗೆ ನೆನಪಿಸಿದ ಟ್ಯಾಬ್ಲೊ

ಬಿಜೆಪಿ ಕೇಡರ್ ಆಧರಿತ ಕಾರ್ಯಕರ್ತರನ್ನು ಹೊಂದಿದೆ. ವಿಜಯೇಂದ್ರ ಅವರು ಅಧ್ಯಕ್ಷರಾದ ಬಳಿಕ ಒಂದೆರಡು ತಿಂಗಳಿನಿಂದ ಈ ಬಗ್ಗೆ ಪ್ರಯತ್ನ ಮಾಡಿದರು. ಯಡಿಯೂರಪ್ಪನವರು ಮುತುವರ್ಜಿ ವಹಿಸಿದ್ದಾರೆ ಎಂದು ಖುಷಿಯಿಂದ ವಾಪಸ್ ಬಂದಿದ್ದೇನೆ. ಪಕ್ಷಕ್ಕೆ ಮರಳಿದ್ದು 4 ತಾಸಿನ ಕಾರ್ಯ ಅಲ್ಲ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಬಲಪಡಿಸುವ ಕೆಲಸ ಮಾಡುತ್ತೇನೆ ಎಂದರು. ಇದನ್ನೂ ಓದಿ: 2015ರಲ್ಲಿ ಕೆತ್ತಿದ್ದ ಜಯಚಾಮರಾಜೇಂದ್ರ ಪ್ರತಿಮೆಯ ಬಾಕಿ ಹಣ ಬಂದಿಲ್ಲ: ಅರುಣ್ ಯೋಗಿರಾಜ್

TAGGED:bengalurubjpcongressJagadish Shettarಕಾಂಗ್ರೆಸ್ಜಗದೀಶ್ ಶೆಟ್ಟರ್ಬಿಜೆಪಿಬೆಂಗಳೂರು
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

BJP MLA Suresh Gowda
Districts

ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗುತ್ತೆ: ಸುರೇಶ್‌ ಗೌಡ ಭವಿಷ್ಯ

Public TV
By Public TV
37 minutes ago
CET Exam Janiwara
Bengaluru City

CET Exam | ಜನಿವಾರ ತೆಗೆಸಿದ ಬೆಂಗಳೂರು ಕಾಲೇಜ್‌ – ಪೋಷಕರಿಂದ ದೂರು ದಾಖಲು

Public TV
By Public TV
1 hour ago
Amit Shah 3
Latest

West Bengal Election| 152ರ ಪೈಕಿ 110ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು -ಬಿಜೆಪಿಗೆ ಅಧಿಕಾರ: ಅಮಿತ್‌ ಶಾ ವಿಶ್ವಾಸ

Public TV
By Public TV
2 hours ago
Amit Shah 2
Latest

ಕ್ಷಮಿಸಿ, ಇನ್ನು 10 ನಿಮಿಷಗಳಲ್ಲಿ ತಲುಪುತ್ತೇನೆ: ಅಭಿಮಾನಿಯ ಮನವಿಗೆ ಅಮಿತ್‌ ಶಾ ಪ್ರತಿಕ್ರಿಯೆ

Public TV
By Public TV
2 hours ago
Mojtaba Khamenei
Latest

ಸುಟ್ಟು ಹೋಗಿದೆ ತುಟಿ, ಮುಖಕ್ಕೆ ಗಾಯ – ಶೀಘ್ರವೇ ಮೊಜ್ತಾಬಾ ಖಮೇನಿಗೆ ಪ್ಲಾಸ್ಟಿಕ್‌ ಸರ್ಜರಿ

Public TV
By Public TV
3 hours ago
PM Modi At Hooghly River 1
Latest

ಚುನಾವಣಾ ಭರಾಟೆಯ ಮಧ್ಯೆ ಹೂಗ್ಲಿ ನದಿಯಲ್ಲಿ ಪ್ರಧಾನಿ ಮೋದಿ ದೋಣಿ ವಿಹಾರ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?