ಅಹಮದಾಬಾದ್: ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತದ ವಿರುದ್ಧ ಶತಕ ಸಿಡಿಸಿ ದಿಗ್ಗಜರ ಎಲೈಟ್ ಪಟ್ಟಿ ಸೇರಿದ ಆಸ್ಟ್ರೇಲಿಯಾ (Australia) ಕ್ರಿಕೆಟಿಗ ಟ್ರಾವಿಸ್ ಹೆಡ್ (Travis Head), ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಅವರನ್ನು ವಿಶ್ವದ ಅತ್ಯಂತ ನತದೃಷ್ಟ ವ್ಯಕ್ತಿ ಎಂದು ಕರೆದಿದ್ದಾರೆ.
Advertisement
ಟೀಂ ಇಂಡಿಯಾ (Team India) ವಿರುದ್ಧ 241 ರನ್‌ಗಳ ಗುರಿ ಬೆನ್ನತ್ತಿದ್ದ ಆಸ್ಟ್ರೇಲಿಯಾ ಪರ ಟ್ರಾವಿಸ್ ಹೆಡ್ 95 ಎಸೆತಗಳಲ್ಲಿ 14 ಬೌಂಡರಿ, 1 ಸಿಕ್ಸರ್‌ನೊಂದಿಗೆ ಶತಕ ಸಿಡಿಸಿದರು. ಒಟ್ಟು ಈ ಪಂದ್ಯದಲ್ಲಿ 120 ಎಸೆತಗಳನ್ನು ಎದುರಿಸಿದ ಟ್ರಾವಿಸ್ ಹೆಡ್ 137 ರನ್ (4 ಸಿಕ್ಸರ್, 15 ಬೌಂಡರಿ) ಗಳಿಸಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಪಾತ್ರರಾದರು. ಪಂದ್ಯದ ಬಳಿಕ ಪೋಸ್ಟ್ ಪ್ರೆಸೆಂಟೇಷನ್‌ನಲ್ಲಿ ಮಾತನಾಡಿದ ಟ್ರಾವಿಸ್ ಹೆಡ್, ರೋಹಿತ್ ಶರ್ಮಾರನ್ನು ವಿಶ್ವದ ಅತ್ಯಂತ ನತದೃಷ್ಟ ವ್ಯಕ್ತಿ ಎಂದು ಕರೆದಿದ್ದಾರೆ.
Advertisement
Advertisement
ನಿರೀಕ್ಷೆಯೇ ಮಾಡಿರಲಿಲ್ಲ: ಇದೊಂದು ಅನಿರೀಕ್ಷಿತ ದಿನವಾಗಿದೆ, ನಾವ್ಯಾರೂ ಕೂಡ ಕಪ್ ಗೆಲ್ಲುತ್ತೇವೆ ಎಂದು ನಿರೀಕ್ಷೆ ಮಾಡಿರಲಿಲ್ಲ. ಆದ್ರೆ ನಿಜಕ್ಕೂ ಇದೊಂದು ಅಸಾಧಾರಣ ದಿನವಾಗಿದೆ. ಕೆಮ್ಮು ಬಂದು ಮನೆಯಲ್ಲಿ ಕುಳಿತುಕೊಳ್ಳುವುದಕ್ಕಿಂತ ತಂಡದ ಗೆಲುವಿನಲ್ಲಿ ಕೈಜೋಡಿಸಿರುವುದು ನಿಜಕ್ಕೂ ಹೆಮ್ಮೆ ಎನಿಸುತ್ತಿದೆ. ನಾನು ಎದುರಿಸಿದ ಮೊದಲ 20 ಎಸೆತಗಳು ನನ್ನಲ್ಲಿ ಆತ್ಮವಿಶ್ವಾಸ ಮೂಡಿಸಿತ್ತು. ಅದನ್ನು ಪಂದ್ಯದ ಕೊನೆಯವರೆಗೂ ತೆಗೆದುಕೊಂಡು ಹೋಗಿದ್ದೇನೆ ಅಷ್ಟೇ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: World Cup 2023: ನಾವು ಯಾವಾಗಲೂ ನಿಮ್ಮೊಂದಿಗಿರುತ್ತೇವೆ – ಟೀಂ ಇಂಡಿಯಾಕ್ಕೆ ಮೋದಿ ಅಭಯ
Advertisement
ಮಿಚೆಲ್ ಮಾರ್ಷ್ ಅವರು ಬ್ಯಾಟಿಂಗ್‌ಗೆ ಇಳಿದು ತಂಡವನ್ನು ಗೆಲುವಿನ ಹಾದಿಯಲ್ಲಿ ತೆಗೆದುಕೊಂಡು ಹೋಗುವಾಗ ವಿಕೆಟ್ ಪಿಚ್ ಬ್ಯಾಟಿಂಗ್ ನಡೆಸಲು ಸುಲಭವಾಗಿಲ್ಲ ಅನ್ನಿಸಿತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರ ಕುರಿತು ತಮ್ಮ ಅಭಿಪ್ರಾಯ ಕೇಳಿದಾಗ ಅವರು ವಿಶ್ವದ ಅತ್ಯಂತ ನತದೃಷ್ಟ ವ್ಯಕ್ತಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕೋಚ್ ಆಗಿ ಮುಂದುವರಿಯೋ ನಿರ್ಧಾರ ಕೈಗೊಳ್ಳಲು ಸಮಯಬೇಕು: ರಾಹುಲ್ ದ್ರಾವಿಡ್