ಸನ್ ರೈಸರ್ಸ್ ಹೈದರಾಬಾದ್ (SunRisers Hyderabad) ತಂಡದ ಸ್ಟಾರ್ ಪ್ಲೇಯರ್ ಟ್ರಾವಿಸ್ ಹೆಡ್‌ಗೆ (Travis Head) ಕೋವಿಡ್ -19 (Covid-19) ಸೋಂಕು ದೃಢಪಟ್ಟಿದೆ. ಇದರಿಂದ ಮೇ 19ರಂದು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ನಡೆಯುವ ಪಂದ್ಯದಿಂದ ಅವರು ಹೊರಗುಳಿಯಲಿದ್ದಾರೆ.
ಟ್ರಾವಿಸ್ ಹೆಡ್‌ಗೆ ಕೋವಿಡ್ ಸೋಂಕು ಕಾಣಿಸಿಕೊಂಡಿರುವ ಬಗ್ಗೆ ಎಸ್ಆರ್‌ಹೆಚ್ ತಂಡದ ಕೋಚ್ ಡೇನಿಯಲ್ ವೆಟ್ಟೋರಿ ಅಧಿಕೃತ ಮಾಹಿತಿ ನೀಡಿದ್ದಾರೆ.
ಸದ್ಯ ಅವರು ಆಸ್ಟ್ರೇಲಿಯಾದಲ್ಲಿದ್ದು, ಸೋಮವಾರ ಬೆಳಗ್ಗೆ ಭಾರತಕ್ಕೆ ಆಗಮಿಸಲಿದ್ದಾರೆ. ಅವರ ಆರೋಗ್ಯದ ಸ್ಥಿತಿ ನೋಡಿ ಉಳಿದ ಎರಡು ಪಂದ್ಯಗಳಿಗೆ ಅವರು ಲಭ್ಯರಿರುತ್ತಾರೆಯೇ ಎಂಬುದನ್ನು ನಿರ್ಧರಿಸಲಾಗುತ್ತದೆ.
ಸನ್‌ರೈಸರ್ಸ್ ಹೈದರಾಬಾದ್ ತಂಡ ಪ್ರಸ್ತುತ ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ. ಸೋಮವಾರ ಏಕಾನಾದಲ್ಲಿ ಲಕ್ನೋ ವಿರುದ್ಧದ ಪಂದ್ಯದ ನಂತರ, ಹೈದರಾಬಾದ್ ಇನ್ನೂ ಎರಡು ಲೀಗ್ ಪಂದ್ಯಗಳನ್ನು ಆಡಲಿದೆ. ಒಂದು ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಮೇ 23) ಮತ್ತೊಂದರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (ಮೇ 25) ತಂಡವನ್ನು ಎದುರಿಸಲಿದೆ.
ಸನ್‌ರೈಸರ್ಸ್ ತಂಡವು ಪ್ರಸ್ತುತ 11 ಪಂದ್ಯಗಳಿಂದ 11 ಅಂಕಗಳನ್ನು ಪಡೆದು, ಪ್ಲೇಆಫ್‌ನಿಂದ ಹೊರಬಿದ್ದಿದೆ. ಇನ್ನೂ ಹೆಡ್ ಪ್ರಸ್ತುತ ನಡೆಯುತ್ತಿರುವ ಐಪಿಎಲ್ 2025 ಋತುವಿನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿಲ್ಲ.