ಲಕ್ನೋ: ಕುಡಿದ ಮತ್ತಿನಲ್ಲಿದ್ದ ವೈದ್ಯ ನೀಡಿದ ಚಿಕಿತ್ಸೆಯಿಂದಾಗಿ ಒಂದೂವರೆ ವರ್ಷದ ಬಾಲಕಿ ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದ (Uttar Pradesh) ಬಾರಾಬಂಕಿಯ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.
ಗಂಟಲಿನಲ್ಲಿ ಜೋಳ ಸಿಲುಕಿದೆ ಎಂದು ಬಾಲಕಿಯನ್ನು ಸಿರೌಲಿ ಗೌಸ್‌ಪುರ ಪ್ರದೇಶದ ಆಸ್ಪತ್ರೆಗೆ ಕರೆತಂದು ದಾಖಲಿಸಲಾಗಿತ್ತು. ರಾತ್ರಿ ಕರ್ತವ್ಯದ ವೇಳೆ ಡಾ.ಧರ್ಮೇಂದ್ರ ಗುಪ್ತಾ ಅವರು ಆಸ್ಪತ್ರೆಯಲ್ಲಿ ಇರಲಿಲ್ಲ ಎಂದು ಕುಟುಂಬದವರು ಆರೋಪಿಸಿದ್ದಾರೆ. ವೈದ್ಯ ಒಂದು ಗಂಟೆಯ ನಂತರ ಅಮಲೇರಿದ ಸ್ಥಿತಿಯಲ್ಲಿ ಆಸ್ಪತ್ರೆಗೆ ಬಂದಿದ್ದು, ಮಗುವಿಗೆ ಚಿಕಿತ್ಸೆ ನೀಡಿದ್ದಾರೆ. ಪರಿಣಾಮವಾಗಿ ಮಗು ಸಾವಿಗೀಡಾಗಿದೆ ಎಂದು ಕುಟುಂಬದವರು ಗಂಭೀರ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಆರ್ಡರ್ ಮಾಡಿದ್ದು ಡ್ರೋನ್ ಕ್ಯಾಮೆರಾ, ಬಂದಿದ್ದು ಆಲೂಗಡ್ಡೆ- ಗ್ರಾಹಕ ಕಕ್ಕಾಬಿಕ್ಕಿ!
Advertisement
Advertisement
ಸಿರೌಲಿ ಗೌಸ್‌ಪುರ್‌ನ ಮುಖ್ಯ ವೈದ್ಯಕೀಯ ಅಧೀಕ್ಷಕ (ಸಿಎಂಎಸ್) ಡಾ. ನೀಲಂ ಗುಪ್ತಾ ಅವರು ಧರ್ಮೇಂದ್ರ ಗುಪ್ತಾ ಅವರನ್ನು ಕರ್ತವ್ಯದಿಂದ ತೆಗೆದುಹಾಕಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವೈದ್ಯರ ತಂಡವು ತನಿಖೆ ನಡೆಸುತ್ತಿದೆ.
Advertisement
ಘಟನೆಗೆ ಖಂಡನೆ ವ್ಯಕ್ತಪಡಿಸಿದ್ದಕ್ಕೆ, ಮೃತ ಬಾಲಕಿ ತಾಯಿಗೆ ಇನ್ನೊಂದು ಮಗುವಿಗೆ ಜನ್ಮ ನೀಡುವಂತೆ ಡಾ.ಧರ್ಮೇಂದ್ರ ಗುಪ್ತಾ ಅವರು ಅವಮಾನಿಸಿರುವ ದೃಶ್ಯದ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ತಹಸಿಲ್ ಸಿರೌಲಿ ಗೌಸ್ಪುರದಲ್ಲಿ ಪೋಸ್ಟ್ ಮಾಡಲಾದ ವೀಡಿಯೋ ಡಾ.ಗುಪ್ತಾ ಅವರದ್ದು ಎಂದು ಮುಖ್ಯ ವೈದ್ಯಾಧಿಕಾರಿ ಅವಧೇಶ್ ಕುಮಾರ್ ಯಾದವ್ ಮಂಗಳವಾರ ಹೇಳಿದ್ದಾರೆ. ಇದನ್ನೂ ಓದಿ: ಬುರ್ಖಾ ಧರಿಸದಿದ್ದಕ್ಕಾಗಿ ಪತ್ನಿಯನ್ನೇ ಚಾಕುವಿನಿಂದ ಇರಿದು ಕೊಂದ ಪತಿ
Advertisement
ಘಟನೆ ಬಗ್ಗೆ ನಮಗೆ ಮಾಹಿತಿ ಬಂದಿದೆ. ಆದರೆ ಈ ಬಗ್ಗೆ ಇನ್ನೂ ಯಾವುದೇ ದೂರು ಬಂದಿಲ್ಲ ಎಂದು ಬಡೋಸರೈ ಪೊಲೀಸ್ ಠಾಣೆ ಪ್ರಭಾರಿ ಅಮಿತ್ ಮಿಶ್ರಾ ಹೇಳಿದ್ದಾರೆ.