ಹಾಸನ: ಬಸ್‍ನಲ್ಲಿ (Bus) ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬನಿಗೆ ಮರದ ಕೊಂಬೆ ಬಡಿದು ಮೃತಪಟ್ಟ ಘಟನೆ ಬೇಲೂರಿನ (Beluru) ನಿಡಗೋಡು ಗ್ರಾಮದ ಬಳಿ ನಡೆದಿದೆ.
ಬೇಲೂರಿನಿಂದ – ಮಂಗಳೂರು (Mangaluru) ಕಡೆಗೆ ಕೆಎ-45 ಎಫ್-0033 ನಂಬರ್‌ನ ಸಾರಿಗೆ ಬಸ್ ತೆರಳುತ್ತಿತ್ತು. ಈ ವೇಳೆ ಎದುರಿನಿಂದ ಬಂದ ಟಿಪ್ಪರ್‌ಗೆ ದಾರಿ ಬಿಡುವಾಗ ಈ ದುರ್ಘಟನೆ ಸಂಭವಿಸಿದೆ. ಮೃತನ ಗುರುತು ಪತ್ತೆಯಾಗಿಲ್ಲ. ವ್ಯಕ್ತಿಯ ಮೃತದೇಹವನ್ನು ಬೇಲೂರಿನ ತಾಲೂಕು ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಇದನ್ನೂ ಓದಿ: ಬೆಂಗಳೂರು-ತುಮಕೂರು ಫ್ಲೈಓವರ್ ಭಾರೀ ವಾಹನಗಳಿಗೆ ಮುಕ್ತನಾ..?
ಗ್ರಾಮದ ರಸ್ತೆ ಬದಿಯಲ್ಲಿಯೇ ಬೃಹತ್ ಗಾತ್ರದ ಹಲವಾರು ಮರಗಳಿವೆ. ಈ ರೀತಿಯಲ್ಲಿಯೇ ಮೂರ್ನಾಲ್ಕು ಸಾವುಗಳು ಸಂಭವಿಸಿವೆ. ಮರಗಳನ್ನು ತೆರವುಗೊಳಿಸುವಂತೆ ಮನವಿ ಮಾಡಿದ್ದರು ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಕೂಡಲೇ ಮರಗಳನ್ನು ತೆರವುಗೊಳಿಸಬೇಕು ಇಲ್ಲವಾದಲ್ಲಿ ರಸ್ತೆ ಬಂದ್ ಮಾಡಿ ಮರ ತೆರವು ಮಾಡುವುದಾಗಿ ಸ್ಥಳೀಯರ ಎಚ್ಚರಿಕೆ ನೀಡಿದ್ದಾರೆ.
ಸ್ಥಳಕ್ಕೆ ಬೇಲೂರು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ರಕ್ಷಣೆ- ಟ್ರಾಫಿಕ್ ಕಾನ್ಸ್‌ಸ್ಟೇಬಲ್ ಕಾರ್ಯಕ್ಕೆ ಮೆಚ್ಚುಗೆ
Web Stories