ಹಾವೇರಿ: ಜಿಲ್ಲೆಯ ಹಲವೆಡೆ ಸಂಜೆ 1 ಗಂಟೆ ಕಾಲ ಧಾರಾಕಾರ ಮಳೆಯಾಗಿದೆ. ಬಿರುಗಾಳಿ ಸಹಿತ ಮಳೆಗೆ 20ಕ್ಕೂ ಹೆಚ್ಚು ಮರಗಳು ಧರೆಗುರುಳಿದ ಪರಿಣಾಮ 4 ಕಾರುಗಳು ಜಖಂ ಆಗಿವೆ.
ಹಾವೇರಿ (Haveri) ನಗರದ ಮಾತ್ರವಲ್ಲದೇ ತಾಲೂಕಿನ ಹಲವೆಡೆ ವರುಣರಾಯ ಅಬ್ಬರಿಸಿದ್ದಾನೆ. ನಗರದಲ್ಲಿ 20ಕ್ಕೂ ಅಧಿಕ ಮರಗಳು ಧರೆಗೆ ಉರುಳಿವೆ. ಭಾರೀ ಗಾಳಿಗೆ ತಾಲೂಕಿನ ಕಳ್ಳಿಹಾಳ ಗ್ರಾಮದಲ್ಲಿ ಮನೆಯ ಮೇಲ್ಛಾವಣಿಗೆ ಹಾಕಿದ್ದ ತಗಡುಗಳು ಹಾರಿ ಹೋಗಿ ವಿದ್ಯುತ್ ತಂತಿಗಳ ಮೇಲೆ ಬಿದ್ದಿದೆ. ಇದನ್ನೂ ಓದಿ: ಜಾತಿಗಣತಿ ವಿರುದ್ಧ ಸಿಡಿದ ಒಕ್ಕಲಿಗರು- ವರದಿ ಜಾರಿಯಾದ್ರೆ ಸರ್ಕಾರ ಪತನದ ಎಚ್ಚರಿಕೆ
ತಗಡುಗಳು ವಿದ್ಯುತ್ ತಂತಿಗಳ ಮೇಲೆ ಬಿದ್ದಿದ್ದರಿಂದ ಕೆಲಕಾಲ ಸ್ಥಳೀಯರಲ್ಲಿ ಆತಂಕ ಉಂಟಾಗಿತ್ತು. ಆದರೆ ಗಾಳಿ ಮಳೆಯ ಅಬ್ಬರ ಆರಂಭ ಆಗುತ್ತಿದ್ದಂತೆ ಮುಂಜಾಗ್ರತಾ ಕ್ರಮವಾಗಿ ಹೆಸ್ಕಾಂ ಸಿಬ್ಬಂದಿ ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸಿದ್ದರು. ಇದನ್ನೂ ಓದಿ: ಚಿಲ್ಲರೆ ಹಣದುಬ್ಬರ| 2019ರ ಬಳಿಕ ಕನಿಷ್ಠ ಮಟ್ಟಕ್ಕೆ ಇಳಿಕೆ
ಸ್ಥಳಕ್ಕೆ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮ ಮತ್ತು ನಗರಸಭೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.