ನವದೆಹಲಿ: ದೇಶದ ರಾಜಧಾನಿ ದೆಹಲಿ ಸೇರಿದಂತೆ ಉತ್ತರ ಭಾರತದಾದ್ಯಂತ ಸೋಮವಾರ ರಾತ್ರಿ 10.35ರ ಸುಮಾರಿಗೆ ಪ್ರಬಲ ಭೂಕಂಪ ಸಂಭವಿಸಿದೆ.
ಸುಮಾರು 30 ಸೆಕೆಂಡ್‍ಗಳ ಭೂಮಿ ಕಂಪಿಸಿದ ಅನುಭವವಾಯಿತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಉತ್ತರಾಖಂಡದ ಪಿಥೌರಾಗಢ ಭೂಕಂಪನದ ಕೇಂದ್ರ ಬಿಂದು ಎನ್ನಲಾಗಿದ್ದು, ರಿಕ್ಟರ್ ಮಾಪಕದಲ್ಲಿ 5.8ರಷ್ಟು ತೀವ್ರತೆ ದಾಖಲಾಗಿದೆ.
Advertisement
ನವದೆಹಲಿ, ಎನ್‍ಸಿಆರ್, ಪಂಜಾಬ್, ಹರ್ಯಾಣ, ಚಂಡೀಗಢ, ಡೆಹ್ರಾಡೂನ್, ಸಹರಾನ್‍ಪುರ, ಮುಸ್ಸೋರಿ, ಗಾಜಿಯಾಬಾದ್, ಚಂಡೀಗಢದಲ್ಲೂ ಭೂಕಂಪನದ ಅನುಭವವಾಗಿದೆ. ಭೂಕಂಪ ಪ್ರಬಲವಾಗಿದ್ದರೂ ಇದುವರೆಗೆ ಯಾವುದೇ ಹಾನಿ ಅಥವಾ ಸಾವು ನೋವಿನ ವರದಿಯಾಗಿಲ್ಲ.