ಬೆಂಗಳೂರು: ಎಕ್ಸ್‌ಪ್ರೆಸ್‌ವೇಯಲ್ಲಿ (Bengaluru Mysuru Expressway) ವೇಗ ನಿಯಂತ್ರಣಕ್ಕೆ ಪೊಲೀಸರು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (Artificial Intelligence) ಮೊರೆ ಹೊಗಿದ್ದು ಎಐ ಕ್ಯಾಮೆರಾ ಅಳವಡಿಕೆ ಮಾಡಿದ್ದಾರೆ.
ರಾಜ್ಯ ರಸ್ತೆ ಸುರಕ್ಷತಾ ಎಡಿಜಿಪಿ ಅಲೋಕ್ ಕುಮಾರ್ (Alok Kumar) ಆದೇಶದ ಮೇರೆಗೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ (Bengaluru-Mysuru Eexpressway) ಸ್ವಯಂಚಾಲಿತ ನಂಬರ್ ಪ್ಲೇಟ್ ಗುರುತಿಸುವ (Automatic Number Plate Recognition – ANPR) ಕ್ಯಾಮೆರಾವನ್ನು ಅಳವಡಿಕೆ ಮಾಡಲಾಗಿದೆ. ವಾಹನದ ನಂಬರ್‌ನಿಂದ ಆರ್‌ಟಿಒ ಸಂಪರ್ಕ ಪಡೆದು ಮೊಬೈಲಿಗೆ ದಂಡ ಪಾವತಿಸುವಂತೆ ನೋಟಿಸ್ ಬರಲಿದೆ. ಇದನ್ನೂ ಓದಿ: ರಾಹುಲ್‌ಗೆ ಮೊಣಕಾಲು ನೋವು – ಕೇರಳದಲ್ಲಿ ಆಯುರ್ವೇದ ಚಿಕಿತ್ಸೆ
ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿಅತಿವೇಗದ ಚಾಲನೆ ಮತ್ತು ಒನ್ ವೇ ವಾಹನ ಚಲಾಯಿಸಿದ್ರೆ ಬೀಳುತ್ತೆ ದಂಡ – ವೇಗ ನಿಯಂತ್ರಣಕ್ಕೆ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಕ್ಯಾಮೆರಾ ಅಳವಡಿಸಿದ ಪೊಲೀಸರು#Bengalurumysuruexpressway #Bengaluru #Mysuru #Expressway #Accident @alokkumar6994 pic.twitter.com/ylTP7cOiHC
— PublicTV (@publictvnews) July 28, 2023
ಈ ಸಂಬಂಧ ಟ್ವೀಟ್ ಮಾಡಿರುವ ಅಲೋಕ್ ಕುಮಾರ್, ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಕ್ಯಾಮೆರಾಗಳನ್ನು ಪ್ರಾಯೋಗಿಕವಾಗಿ ಅಳವಡಿಕೆ ಮಾಡಲಾಗಿದೆ. ಅಪಘಾತಗಳು ಮತ್ತು ಸಾವುನೋವುಗಳ ಸಂಖ್ಯೆಗಳನ್ನು ಕಡಿಮೆ ಮಾಡಲು ಈ ಉಪಕ್ರಮಗಳು ಸಹಾಯ ಮಾಡುತ್ತವೆ ಎಂದು ಭಾವಿಸುತ್ತೇವೆ. ಭಾರತದ ರಸ್ತೆಯಲ್ಲಿ ಅತಿವೇಗವೇ ಪ್ರಮುಖ ಕೊಲೆಗಾರ ಎಂದು ಹೇಳಿದ್ದಾರೆ.
ಅಪಘಾತ ಇಳಿಕೆ:
ಎಕ್ಸ್‌ಪ್ರೆಸ್‌ವೇ ಸಾವಿನ ಹೆದ್ದಾರಿ ಎಂಬ ಟೀಕೆಗಳು ವ್ಯಕ್ತವಾದ ಬೆನ್ನಲ್ಲೇ ಪೊಲೀಸರು ವಾಹನಗಳ ವೇಗದ ಮೇಲೆ ಕಣ್ಣಿಡುವ ಇಂಟರ್‌ಸೆಪ್ಟರ್‌ಗಳನ್ನು ಹೆದ್ದಾರಿಯಲ್ಲಿ ನಿಯೋಜಿಸುವ ಮೂಲಕ ಅಪಘಾತಗಳನ್ನು ನಿಯಂತ್ರಿಸುವ ಪ್ರಯತ್ನ ಮಾಡಿದ್ದರು. ಇದು ಫಲ ನೀಡಿದ್ದು, ಜುಲೈ ತಿಂಗಳಿನಲ್ಲಿ ಕೇವಲ 27 ಅವಘಡಗಳು ಸಂಭವಿಸಿದ್ದು, ಸಾವಿನ ಸಂಖ್ಯೆ ಮೂರಕ್ಕೆ ಇಳಿದಿದೆ.
ಎಕ್ಸ್‌ಪ್ರೆಸ್‌ವೇನಲ್ಲಿ ವೇಗದ ಮಿತಿಯನ್ನು ಗಂಟೆಗೆ 100 ಕಿ.ಮೀ ನಿಗದಿ ಪಡಿಸಲಾಗಿದೆ. ಅಷ್ಟೇ ಅಲ್ಲದೇ ರೆಡಾರ್ ಗನ್ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ. ವೇಗ ಮಿತಿ ದಾಟಿದರೆ 1000 ರೂ. ದಂಡ ಹಾಗೂ ಡಿಎಲ್ ರದ್ದುಪಡಿಸುವ ಕಠಿಣ ಕ್ರಮಕ್ಕೆ ಪೊಲೀಸರು ಮುಂದಾಗಿದ್ದಾರೆ. ನಿಯಮ ಉಲ್ಲಂಘನೆಯ ಫೋಟೋ ಹಾಗೂ ನೋಟಿಸ್ ನೀಡಿ ದಂಡ ವಸೂಲಿ ಮಾಡಲಾಗುತ್ತಿದೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]