ಭೋಪಾಲ್: 8ನೇ ತರಗತಿ ಓದುತ್ತಿದ್ದ 15 ವರ್ಷದ ಬುಡಕಟ್ಟು ಸಮುದಾಯದ ಬಾಲಕಿ ಮೇಲೆ ಇಬ್ಬರು ಕಾಮುಕರು ಅತ್ಯಾಚಾರ ಎಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಆಗಸ್ಟ್ 25ರಂದು ಈ ಘಟನೆ ನಡೆದಿದೆ. ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಓರ್ವ ಅಪ್ರಾಪ್ತನನ್ನೂ ವಶಕ್ಕೆ ಪಡೆಯಲಾಗಿದೆ. 8ನೇ ತರಗತಿ ಓದುತ್ತಿದ್ದ ಬಾಲಕಿಯು ಪರಿಚಿತ ಬಾಲಕನೊಂದಿಗೆ ಹೊರಗೆ ಹೋಗಿದ್ದ ವೇಳೆ ಘಟನೆ ನಡೆದಿದೆ. ಇಬ್ಬರ ವಿರುದ್ಧ ಪೋಕ್ಸೋ ಹಾಗೂ ಸಂಬಂಧಪಟ್ಟ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪ್ರಾಪ್ತನಿಂದಲೇ ಅತ್ಯಾಚಾರ: ಮತ್ತೊಂದು ಘಟನೆಯಲ್ಲಿ ಉತ್ತರಪ್ರದೇಶದ ಹಳ್ಳಿಯೊಂದರಲ್ಲಿ ಅಪ್ರಾಪ್ತೆಯ ಮೇಲೆ 15 ವರ್ಷದ ಬಾಲಕ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ. 5 ವರ್ಷದ ಬಾಲಕಿಯನ್ನು ಬರ್ಫಿ ನೀಡುವ ಆಮಿಷವೊಡ್ಡಿ ಬಾಲಕ ಏಕಾಂತ ಸ್ಥಳಕ್ಕೆ ಕರೆದೊಯ್ದಿದ್ದಾನೆ. ಬಳಿಕ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: 3,700 ಕೆ.ಜಿ ಸ್ಫೋಟಕ, 10 ಸೆಕೆಂಡ್- 1,200 ಕೋಟಿಯ ದೈತ್ಯ ಅವಳಿ ಕಟ್ಟಡ ಉಡೀಸ್
ಬಾಲಕಿಯ ಕಿರುಚಾಟ ಕೇಳಿ ಸ್ಥಳಕ್ಕಾಗಮಿಸಿದ ಗ್ರಾಮಸ್ಥರು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸಂತ್ರಸ್ತೆ ಮಾನಸಿಕವಾಗಿ ಅಸ್ವಸ್ಥಳಾಗಿದ್ದು, ಆಕೆಯ ಕುಟುಂಬ ಸದಸ್ಯರು ಆರೋಪಿ ಮನೆಗೆ ತೆರಳಿದಾಗ, ಆರೋಪಿಯ ತಂದೆ ಅವರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಮತ್ತು ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಘಟನೆಯ ಸಂಬಂಧ ಆರೋಪಿಯ ತಂದೆಯನ್ನೂ ಬಂಧಿಸಿರುವುದಾಗಿ ಪೊಲೀಸರು ಹೇಳಿದ್ದಾರೆ. ಇದನ್ನೂ ಓದಿ: ರಾಷ್ಟ್ರಕ್ಕಾಗಿ ಖಾದಿ, ಆದ್ರೆ ರಾಷ್ಟ್ರಧ್ವಜಕ್ಕೆ ಚೈನೀಸ್ ಪಾಲಿಸ್ಟರ್ : ಮೋದಿ ವಿರುದ್ಧ ರಾಹುಲ್ ಟೀಕೆ
ನಗರದ ಹೆಚ್ಚುವರಿ ಎಸ್ಪಿ ರಾಹುಲ್ ಭಾಟಿ, ಆರೋಪಿಗಳ ವಿರುದ್ಧ ಐಪಿಸಿಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಕ್ಯಾಂಟ್‌ನ ಇನ್ಸ್ಪೆಕ್ಟರ್ ರಾಜೀವ್ ಕುಮಾರ್ ತಿಳಿಸಿದ್ದಾರೆ.