ಆದಿವಾಸಿಗಳ ಶೆಡ್ ತೆರವುಗೊಳಿಸಿದ ಅರಣ್ಯ ಇಲಾಖೆ

Public TV
1 Min Read
Ramanagara Tribal 2

-ಹಕ್ಕುಪತ್ರಗಳಿಗಾಗಿ ಹೋರಾಟ

ರಾಮನಗರ: ಬನ್ನೇರುಘಟ್ಟ ರಾಷ್ಟ್ರೀಯ ಅರಣ್ಯ ವ್ಯಾಪ್ತಿಯಲ್ಲಿನ ಕನಕಪುರ ತಾಲೂಕಿನ ಬುಡಗಯ್ಯನದೊಡ್ಡಿ ಅರಣ್ಯ ಪ್ರದೇಶದಲ್ಲಿ ಆದಿವಾಸಿಗಳ ಶೆಡ್ ಗಳನ್ನು ತೆರವುಗೊಳಿಸಲಾಗಿದೆ.

Ramanagara Tribal 3

2006ರ ಅರಣ್ಯ ಕಾಯ್ದೆಯಡಿ ಕಳೆದ ಮೂರು ತಿಂಗಳಿನಿಂದ ಅರಣ್ಯದಲ್ಲಿ ಶೆಡ್ ಗಳನ್ನು ಹಾಕಿಕೊಂಡು ಪ್ರತಿಭಟನೆ ನಡೆಸುತ್ತಿದ್ದರು. ಆದಿವಾಸಿಗಳ 76 ಕ್ಕೂ ಹೆಚ್ಚು ಶೆಡ್ ಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ತೆರವುಗೊಳಿಸಿದ್ದಾರೆ. ಅರಣ್ಯ ಪ್ರದೇಶದಲ್ಲಿ ಬುಡುಗಯ್ಯನ ದೊಡ್ಡಿ ಗ್ರಾಮದ ಇರುಳಿಗ ಬುಡಕಟ್ಟು ಸಮುದಾಯದವರು ಕಳೆದ ಮೂರು ತಿಂಗಳಿನಿಂದ ಹಕ್ಕುಪತ್ರಗಳಿಗಾಗಿ ಹೋರಾಟ ನಡೆಸುತ್ತಿದ್ದರು.

Ramanagara Tribal 1

ಹಕ್ಕುಪತ್ರ ಸಿಗುವ ತನಕ ಅರಣ್ಯ ಬಿಟ್ಟು ಹೊರಬರವುದಿಲ್ಲವೆಂದು ಅರಣ್ಯದಲ್ಲಿಯೇ ಶೆಡ್ ಗಳನ್ನು ಕಟ್ಟಿಕೊಂಡು ವಾಸ ಮಾಡುತ್ತಿದ್ದರು. ಕೊರೊನಾ ವೈರಸ್ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಪ್ರತಿಭಟನೆ ಕೈ ಬಿಟ್ಟಿದ್ದ ಆದಿವಾಸಿಗಳು ಶೆಡ್ ಗಳಲ್ಲಿ ವಾಸವಾಗಿದ್ದರು. ಬುಧವಾರ ಬೆಳಗ್ಗೆ 100 ಜನ ಸಿಬ್ಬಂದಿ ಜೊತೆ ಹೋಗಿ ಶೆಡ್ ಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ತೆರವುಗೊಳಿಸಿದ್ದಾರೆ.

ಕಳೆದ ಮೂರು ತಿಂಗಳಿನಿಂದ ಸುಮ್ಮನಿದ್ದ ಅರಣ್ಯ ಇಲಾಖೆ ಅಧಿಕಾರಿ ಏಕಾಏಕಿ ಅರಣ್ಯ ಇಲಾಖೆ ಅಧಿಕಾರಿಗಳು ಶೆಡ್ ಗಳನ್ನು ತೆರವುಗೊಳಿಸಿ, ಧ್ವಂಸಗೊಳಿಸಿರುವುದು ಇರುಳಿಗರ ಆಕ್ರೋಶಕ್ಕೆ ಕಾರಣವಾಗಿದೆ.

Share This Article
Leave a Comment

Leave a Reply

Your email address will not be published. Required fields are marked *