– ಫೆಬ್ರವರಿ 18, 19ರಂದು ನಿಷೇಧಾಜ್ಞೆ ಜಾರಿ
– ಅಹಿತಕರ ಘಟನೆ ತಡೆಗೆ ಸಿಟಿಟಿವಿ, ಡ್ರೋನ್ ಕಣ್ಗಾವಲು
– ಅಹಿತಕರ ಘಟನೆ ತಡೆಗೆ ಸಿಟಿಟಿವಿ, ಡ್ರೋನ್ ಕಣ್ಗಾವಲು
ಕಲಬುರಗಿ: ಇಲ್ಲಿನ ಆಳಂದ ಪಟ್ಟಣದ ಲಾಡ್ಲೇ ಮಶಾಕ್ ದರ್ಗಾದಲ್ಲಿ (Dargah) ಸ್ಥಾಪನೆಯಾಗಿರುವ ಶ್ರೀ ರಾಘವ ಚೈತನ್ಯ ಶಿವಲಿಂಗಕ್ಕೆ ಪೂಜೆ ಸಲ್ಲಿಸುವ ವಿಚಾರದಲ್ಲಿ ಹಿಂದೂಗಳಿಗೆ ಮತ್ತೊಂದು ಗೆಲುವು ಸಿಕ್ಕಿದೆ.
ಶಿವಲಿಂಗಕ್ಕೆ ಪೂಜೆ ಸಲ್ಲಿಸುವ ವಿಚಾರವಾಗಿ ವಕ್ಫ್ ಟ್ರಿಬುನಲ್ (Karnataka Wakf Tribunal) ಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಗಾ ಸಮಿತಿಗೆ ಸೋಲಾಗಿದೆ. ಇದನ್ನೂ ಓದಿ: ಕರಾಚಿಯಲ್ಲಿ ಪೊಲೀಸ್ ಮುಖ್ಯಸ್ಥರ ಕಚೇರಿಗೆ ನುಗ್ಗಿದ ಉಗ್ರರು – ಗುಂಡಿನ ದಾಳಿ
Advertisement
Advertisement
ಶಿವರಾತ್ರಿ (MahaShivaratri) ದಿನದಂದೇ ದರ್ಗಾದಲ್ಲಿ ಉರುಸ್ ಕೂಡ ನಡೆಯಬೇಕಿತ್ತು. ಈ ಹಿನ್ನೆಲೆ ಬೆಳಗ್ಗೆ ಮುಸ್ಲಿಮರು, ಮಧ್ಯಾಹ್ನ 2 ಗಂಟೆ ನಂತರ ಹಿಂದೂಗಳು ಪೂಜೆ ನೆರವೇರಿಸುವಂತೆ ಕಳೆದ 4 ದಿನಗಳ ಹಿಂದೆ ಕಲಬುರಗಿ ವಕ್ಫ್ ಟ್ರಿಬುನಲ್ ಕೋರ್ಟ್ ಆದೇಶಿಸಿತ್ತು. ಆದರೆ ದರ್ಗಾ ಸಮಿತಿ ಇದನ್ನ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿತ್ತು. ಇದನ್ನೂ ಓದಿ: ಕಾಡ್ಗಿಚ್ಚಿಗೆ ಸಿಲುಕಿ ಬೆಂದು ಹೋಗಿದ್ದ ಫಾರೆಸ್ಟ್ ಗಾರ್ಡ್ ಸಾವು
Advertisement
Advertisement
ನ್ಯಾಯಮೂರ್ತಿ ಜೆ.ಎಮ್ ಖಾಜಿ ನೇತೃತ್ವದ ಏಕಸದಸ್ಯ ಪೀಠವು ಟ್ರಿಬುನಲ್ ಕೋರ್ಟ್ ಆದೇಶ ಪಾಲಿಸುವಂತೆ ಆಳಂದ ಲಾಡ್ಲೇ ಮಶಾಕ್ ದರ್ಗಾ ಸಮಿತಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ವಿವಾದಿತ ದರ್ಗಾ ಆವರಣದಲ್ಲಿ ಮುಸ್ಲಿಮರು ಶನಿವಾರ (ಫೆ.18) ಬೆಳಗ್ಗೆ 8 ರಿಂದ ಮಧ್ಯಾಹ್ನ 2ರ ವರೆಗೆ ಉರುಸ್ ಆಚರಿಸಲಿದ್ದಾರೆ. ನಂತರ ಮಧ್ಯಾಹ್ನ 2 ಗಂಟೆಯಿಂದ ಸಂಜೆ 6 ಗಂಟೆವರೆಗೆ ಹಿಂದೂಗಳು ದರ್ಗಾ ಆವರಣದಲ್ಲಿರುವ ಶಿವಲಿಂಗಕ್ಕೆ ಪೂಜೆ ಸಲ್ಲಿಸಲಿದ್ದಾರೆ.
ಕೇಂದ್ರ ಸಚಿವ ಭಗವಂತ್ ಖೂಬಾ (Bhagwanth Khuba) ನೇತೃತ್ವದಲ್ಲಿ ಶ್ರೀರಾಮಸೇನೆ (Sri Ram Sena) ರಾಜ್ಯಾಧ್ಯಕ್ಷ ಶ್ರೀ ಸಿದ್ದಲಿಂಗ ಸ್ವಾಮೀಜಿ, ಶಾಸಕರಾದ ಬಸವರಾಜ್ ಮತ್ತಿಮೂಡ್, ರಾಜಕುಮಾರ ಪಾಟೀಲ್ ತೆಲ್ಕೂರ್, ಸುಭಾಷ್ ಗುತ್ತೆದಾರ್ ಸೇರಿ ಪೂಜೆ ಸಲ್ಲಿಸಲಿದ್ದಾರೆ.
ನಿಷೇಧಾಜ್ಷೆ ಜಾರಿ: ಶನಿವಾರ ಮತ್ತು ಭಾನುವಾರ ಮಧ್ಯರಾತ್ರಿ ವರೆಗೆ ಆಳಂದ ಪಟ್ಟಣದಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದೆ. ಒಬ್ಬರು ಎಸ್ಪಿ, 9 ಡಿವೈಎಸ್ಪಿ, 73 ಪಿಎಸ್‌ಐ, 26 ಸಿಪಿಐ, 90 ಎಎಸ್‌ಐ, 11 ಕೆಎಸ್‌ಆರ್‌ಪಿ ತುಕಡಿ, 4 ಕ್ವಿಕ್ ರೆಸ್ಪಾನ್ಸ್ ಟೀಂ, 5 ಡಿಎಆರ್ ತುಕಡಿ ಸೇರಿದಂತೆ ಸಾವಿರಕ್ಕೂ ಅಧಿಕ ಪೊಲೀಸರನ್ನ ನಿಯೋಜನೆ ಮಾಡಲಾಗಿದೆ. ಅಲ್ಲದೇ ದರ್ಗಾ ಸುತ್ತ ಅತ್ಯಾಧುನಿಕ ಸಿಸಿ ಕ್ಯಾಮೆರಾ, 10 ಡ್ರೋನ್ ಕ್ಯಾಮೆರಾಗಳ ಮೂಲಕ ಚಲನವಲನ ವೀಕ್ಷಣೆ ಮಾಡಲಾಗುತ್ತಿದೆ.
LIVE TV
[brid partner=56869869 player=32851 video=960834 autoplay=true]
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k