– ಕಣ್ಣಿನ ಆಸ್ಪತ್ರೆ ಸ್ಥಾಪನೆಗೂ ನಿರ್ಧಾರ
ಚಾಮರಾಜನಗರ: ಕರುನಾಡಿನ ರಾಜರತ್ನ ಪುನೀತ್, ತಮ್ಮ ಎರಡು ಕಣ್ಣುಗಳನ್ನು ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಅಪ್ಪು ಪ್ರೇರಣೆಯಿಂದ ಅನೇಕ ಜನರು ನಮ್ಮ ನೇತ್ರಗಳನ್ನು ದಾನ ಮಾಡುತ್ತಿದ್ದಾರೆ. ಅಪ್ಪು ಆದರ್ಶಗಳನ್ನು ಇನ್ನಷ್ಟು ಸಾರ್ಥಕತೆಗೊಳಿಸಲು ಚಾಮರಾಜನಗರ ಜಿಲ್ಲಾಡಳಿತ ಮಹತ್ತರ ಅಭಿಯಾನವನ್ನು ಕೈಗೊಂಡಿದೆ.
Advertisement
ಪವರ್‍ಸ್ಟಾರ್ ಪುನೀತ್ ರಾಜ್ ಕುಮಾರ್ ಆದರ್ಶಗಳು ಇಡೀ ಸಮಾಜಕ್ಕೆ ಮಾದರಿಯಾಗಿವೆ. ತವರು ಜಿಲ್ಲೆ ಚಾಮರಾಜನಗರದ ಪ್ರವಾಸೋದ್ಯಮ ಅಭಿವೃದ್ಧಿಗೆ ಅಪ್ಪು ರಾಯಭಾರಿಯಾಗಿದ್ರು. ಹೀಗಾಗಿ ಅಪ್ಪು ಆದರ್ಶಗಳನ್ನು ಮತ್ತಷ್ಟು ಸಾರ್ಥಕಗೊಳಿಸಲು ಚಾಮರಾಜನಗರ ಜಿಲ್ಲಾಡಳಿತ ಮಹತ್ವದ ಹೆಜ್ಜೆ ಇಟ್ಟಿದೆ. ಇದನ್ನೂ ಓದಿ: ಅಪ್ಪು ನಟನೆಯ ಚಿತ್ರದ ಶೀರ್ಷಿಕೆಗಳಲ್ಲೇ ಗೀತೆ ರಚನೆ ಮಾಡಿದ ತಂದೆ, ಜೀವ ತುಂಬಿದ ಮಗಳು
Advertisement
Advertisement
ಈ ನಿಟ್ಟಿನಲ್ಲಿ ಚಾಮರಾಜನಗರ ಜಿಲ್ಲಾಡಳಿತ ಅಪ್ಪುರವರ ನೇತ್ರದಾನದ ಆದರ್ಶ ಇಟ್ಟುಕೊಂಡು, ಮಹತ್ವದ ಅಭಿಯಾನಕ್ಕೆ ಅಡಿ ಇಟ್ಟಿದೆ. ಪುನೀತ್ 46ನೇ ವಯಸ್ಸಿನಲ್ಲಿ ನಿಧನ ಹೊಂದಿದ್ದಾರೆ. ಹೀಗಾಗಿ, ನವೆಂಬರ್ ಮಾಸಾಂತ್ಯದೊಳಗೆ 46 ಸಾವಿರ ಜನರನ್ನು ನೇತ್ರದಾನಕ್ಕೆ ನೋಂದಾಯಿಸುವ ಉದ್ದೇಶ ಹೊಂದಿದೆ. ಇದಕ್ಕಾಗಿ ರೆಡ್‍ಕ್ರಾಸ್ ಸಂಸ್ಥೆ ಹಾಗೂ ಜಿಲ್ಲಾಸ್ಪತ್ರೆ ಸಹಯೋಗದಲ್ಲಿ, ನೇತ್ರದಾನ ಶಿಬಿರಗಳನ್ನು ಆಯೋಜಿಸಲು ನಿರ್ಧರಿಸಿದೆ.
Advertisement
ನೇತ್ರದಾನ ಅಭಿಯಾನವಷ್ಟೇ ಅಲ್ಲ, ಜಿಲ್ಲೆಯಲ್ಲಿ ನಿರ್ಮಿಸಲಾಗುವ ಕಣ್ಣಿನ ಅಸ್ಪತ್ರೆಗೆ ಪುನೀತ್ ರಾಜ್‍ಕುಮಾರ್ ಹೆಸರನ್ನೇ ಇಡುವ ಮೂಲಕ ಗೌರವ ಸಲ್ಲಿಸಲು ಜಿಲ್ಲಾಡಳಿತ ತೀಮಾನಿಸಿದೆ.