ಬೆಂಗಳೂರು: ಇಂದು ತುಮಕೂರು ಸಿದ್ದಗಂಗಾ ಮಠದ ಶಿವೈಕ್ಯ ಶಿವಕುಮಾರ ಸ್ವಾಮೀಜಿಗಳ 113ನೇ ಜನ್ಮ ದಿನವಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಗೌರವ ನಮನ ಸಲ್ಲಿಸಿದ್ದಾರೆ.
ಈ ಕುರಿತು ಕನ್ನಡದಲ್ಲೇ ಟ್ವೀಟ್ ಮಾಡಿರುವ ಪ್ರಧಾನಿ, ಪರಮಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜಯಂತಿ ಅಂಗವಾಗಿ ಅವರಿಗೆ ಗೌರವ ನಮನಗಳು. ಸಮಾಜಕ್ಕೆ ಸ್ವಾಮೀಜಿ ನೀಡಿರುವ ಉತ್ಕೃಷ್ಟ ಕೊಡುಗೆ ಸದಾ ಸ್ಮರಣೀಯ ಎಂದು ಬರೆದುಕೊಂಡಿದ್ದಾರೆ.
Tributes to His Holiness Dr. Sree Sree Sree Sivakumara Swamigalu on his Jayanti. His rich contribution to society continues to inspire.
ಪರಮಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜಯಂತಿ ಅಂಗವಾಗಿ ಅವರಿಗೆ ಗೌರವ ನಮನಗಳು. ಸಮಾಜಕ್ಕೆ ಸ್ವಾಮೀಜಿ ನೀಡಿರುವ ಉತ್ಕೃಷ್ಟ ಕೊಡುಗೆ ಸದಾ ಸ್ಮರಣೀಯ.
— Narendra Modi (@narendramodi) April 1, 2020
2019ರ ಜನವರಿ 21ರಂದು ಶಿವೈಕ್ಯರಾದಾಗ ಮೋದಿಯವರು ಆಗಮಿಸುತ್ತಿದ್ದಾರೆ ಎಂದು ಹೇಳಲಾಗಿತ್ತಾದರೂ ಕಾರಣಾಂತರಗಳಿಂದ ಬಂದಿರಲಿಲ್ಲ. ಆದರೆ ಇದೇ ವರ್ಷ ಜನವರಿ 2ರಂದು ಆಗಮಿಸಿದ್ದ ಮೋದಿ, ಶಿವಕುಮಾರ ಸ್ವಾಮೀಜಿಗಳ ಗದ್ದುಗೆ ದರ್ಶನ ಪಡೆದು, ಸ್ವಾಮೀಜಿ ಹೆಸರಿನ ವಸ್ತು ಸಂಗ್ರಹಾಲಯಕ್ಕೆ ಶಂಕು ಸ್ಥಾಪನೆ ನೆರವೇರಿಸಿದ್ದರು.
ಇತ್ತ ಸಿದ್ದಗಂಗಾ ಮಠದ ಆಡಳಿತ ಮಂಡಳಿ ಜಯಂತಿ ಆಚರಣೆ ರದ್ದು ಮಾಡಿದೆ. ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಇಡೀ ದೇಶವೇ ಲಾಕ್ ಡೌನ್ ಹಿನ್ನೆಲೆಯಲ್ಲಿ ರದ್ದು ಮಾಡಲಾಗಿದೆ. ಪ್ರತಿವರ್ಷ ಏಪ್ರಿಲ್ 1 ರಂದು ಶ್ರೀಗಳ ಜನ್ಮ ದಿನವನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಗುತಿತ್ತು. ಆದರೆ ಇಂದು ಎಂದಿನಂತೆ ಶ್ರೀಗಳ ಗದ್ದುಗೆಗೆ ರುದ್ರಾಭಿಷೇಕ ಹಾಗೂ ಪೂಜೆ ಮಾಡಲಾಗಿದೆ. ಬಳಿಕ ಮಧ್ಯಾಹ್ನ ಮಠದ ವಿದ್ಯಾರ್ಥಿಗಳಿಗೆ ಸಿಹಿ ಊಟ ವಿತರಿಸಲು ನಿರ್ಧರಿಸಲಾಗಿದೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.