Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತ್ರಿವರ್ಣ ಧ್ವಜ ಭಾರತದ ಹೆಮ್ಮೆ, ಸ್ವಾಭಿಮಾನದ ಸಂಕೇತ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ತ್ರಿವರ್ಣ ಧ್ವಜ ಭಾರತದ ಹೆಮ್ಮೆ, ಸ್ವಾಭಿಮಾನದ ಸಂಕೇತ: ಸಿದ್ದರಾಮಯ್ಯ

Belgaum

ತ್ರಿವರ್ಣ ಧ್ವಜ ಭಾರತದ ಹೆಮ್ಮೆ, ಸ್ವಾಭಿಮಾನದ ಸಂಕೇತ: ಸಿದ್ದರಾಮಯ್ಯ

Public TV
Last updated: December 9, 2025 2:56 pm
Public TV
Share
3 Min Read
Siddaramaiah Khadi Nationala Flag Suvarna Soudha Belagavi
SHARE

ಬೆಳಗಾವಿ: ಭಾರತದ ತ್ರಿವರ್ಣ ಧ್ವಜ ಕೇವಲ ಖಾದಿ ವಸ್ತ್ರವಾಗಿರದೇ ಭಾರತದ ಹೆಮ್ಮೆ ಮತ್ತು ಸ್ವಾಭಿಮಾನದ ಸಂಕೇತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು.

ಬೆಳಗಾವಿಯ ಸುವರ್ಣ ಸೌಧದ (Suvarna Soudha) ಪಶ್ಚಿಮ ದಿಕ್ಕಿನ ಮೆಟ್ಟಿಲುಗಳ ಮೇಲೆ ಜಗತ್ತಿನ ಎರಡನೇ ಅತೀ ದೊಡ್ಡ ಖಾದಿ ತ್ರಿವರ್ಣ ಧ್ವಜವನ್ನು (Khadi National Flag) ಅನಾವರಣ ಮಾಡಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಇದನ್ನೂ ಓದಿ: ಸುವರ್ಣಸೌಧದಲ್ಲಿ ಬೃಹತ್ ತ್ರಿವರ್ಣ ಧ್ವಜ – ಮುಂದಿನ ಪೀಳಿಗೆಗೆ ದೇಶಭಕ್ತಿಯ ಸಂದೇಶ ರವಾನಿಸುವ ಕೆಲಸ: ಡಿಕೆಶಿ

Siddaramaiah Khadi Nationala Flag Suvarna Soudha Belagavi 1

ಇಂದು ಬೆಳಗಾವಿಯ ಸುವರ್ಣಸೌಧದ ಪಶ್ಚಿಮ ದಿಕ್ಕಿನ ಮೆಟ್ಟಿಲುಗಳ ಮೇಲೆ ಜಗತ್ತಿನ ಎರಡನೇ ಅತಿ ದೊಡ್ಡ ಖಾದಿ ತ್ರಿವರ್ಣ ಧ್ವಜವನ್ನು ಅನಾವರಣಗೊಳಿಸಲಾಗಿದ್ದು, ಇದಕ್ಕೆ ಕಾರಣರಾದ ವಿಧಾನಸಭಾ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರಿಗೆ ಮತ್ತು ಕಲಬುರಗಿ ಜಿಲ್ಲೆಯ ಕಮಲಾಪುರದ ವಿನೋದ್ ಕುಮಾರ್ ರೇವಪ್ಪ ಬಮ್ಮಣ್ಣ ಅವರ ಕುಟುಂಬಸ್ಥರಿಗೂ ಸರ್ಕಾರದಿಂದ ಮುಖ್ಯಮಂತ್ರಿಗಳು ಅಭಿನಂದಿಸಿದರು. ಇದನ್ನೂ ಓದಿ: ಸುವರ್ಣ ಸೌಧ ಮುತ್ತಿಗೆಗೆ ಹೊರಟ ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ

Siddaramaiah Khadi Nationala Flag Suvarna Soudha Belagavi 4

ಸ್ವಾತಂತ್ರ‍್ಯ ಚಳವಳಿಯ ಸಂದರ್ಭದಲ್ಲಿ ತ್ರಿವರ್ಣ ಧ್ವಜವನ್ನು ಜಾರಿಗೆ ತಂದರು. ತ್ರಿವರ್ಣ ಧ್ವಜ ಕೇವಲ ಖಾದಿ ವಸ್ತ್ರವಲ್ಲ, ಇದು ಭಾರತದ ಹೆಮ್ಮೆ ಮತ್ತು ಸ್ವಾಭಿಮಾನದ ಸಂಕೇತ. ಈ ಧ್ವಜದಲ್ಲಿ ಮೂರು ವರ್ಣ ಮತ್ತು ಅಶೋಕ ಚಕ್ರವನ್ನು ಒಳಗೊಂಡಿದೆ. ಕೇಸರಿ, ಬಿಳಿ ಮತ್ತು ಹಸಿರು ಬಣ್ಣಗಳಿದ್ದು, ದೇಶದ ಸ್ವಾಭಿಮಾನ, ಆರ್ಥಿಕತೆ ಮತ್ತು ತ್ಯಾಗಬಲಿದಾನ ಹಾಗೂ ಶಾಂತಿಯ ಸಂದೇಶವನ್ನು ಸಾರುವ ಹಾಗೂ ಭಾರತೀಯರಿಗೆ ರಾಷ್ಟ್ರಭಕ್ತಿಯನ್ನು ಸಾರುವ ಸಂದೇಶವನ್ನು ನೀಡುತ್ತದೆ. ಬಿಳಿಬಣ್ಣ ಶಾಂತಿ ಮತ್ತು ಸತ್ಯವನ್ನು ಪ್ರತಿನಿಧಿಸಿದರೆ, ಹಸಿರು ಸಮೃದ್ಧಿಯನ್ನು ಬಿಂಬಿಸುತ್ತದೆ. ಅಶೋಕ ಚಕ್ರ ನಿರಂತರವಾಗಿ ದೇಶದ ಆರ್ಥಿಕತೆಯನ್ನು, ಹಾಗೂ ಎಲ್ಲರಿಗೂ ಸಮಾನ ಅವಕಾಶಗಳನ್ನು ಕಲ್ಪಿಸುವುದರ ಸಂಕೇತವಾಗಿದೆ ಎಂದು ವಿವರಿಸಿದರು. ಇದನ್ನೂ ಓದಿ: ಸಿದ್ದರಾಮಯ್ಯ ಸರ್ಕಾರದಲ್ಲೇ ವಿವಾದಿತ ಟಿಪ್ಪು ಜಯಂತಿ ಮತ್ತೆ ಸದ್ದು; ಕಾಂಗ್ರೆಸ್-ಬಿಜೆಪಿ ವಾಗ್ದಾಳಿ

Siddaramaiah Khadi Nationala Flag Suvarna Soudha Belagavi 2

ನಮ್ಮ ರಾಷ್ಟ್ರದ ತ್ರಿವರ್ಣ ಧ್ವಜವನ್ನು ಗೌರವಿಸಿ ಹೆಮ್ಮೆಯಿಂದ ಕಾಣಬೇಕು. ಪ್ರತಿಯೊಬ್ಬರೂ ರಾಷ್ಟ್ರಪ್ರೇಮವನ್ನು ಬೆಳೆಸಿಕೊಳ್ಳಬೇಕು. ಈ ಸಂದರ್ಭದಲ್ಲಿ ರಾಷ್ಟ್ರಕ್ಕಾಗಿ ತ್ಯಾಗಬಲಿದಾನ, ಹೋರಾಟ ಮಾಡಿದವರನ್ನು ಸ್ಮರಿಸುವುದು ಅಗತ್ಯ. ಮಹಾತ್ಮ ಗಾಂಧೀಜಿಯವರ ನೇತೃತ್ವದಲ್ಲಿ ಸ್ವಾತಂತ್ರ ಹೋರಾಟ ನಡೆಯಿತು. ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆಯನ್ನು ಗಾಂಧೀಜಿ ವಹಿಸಿದ್ದರು. ಇದು ನಡೆದು ನೂರು ವರ್ಷಗಳಾದ ಹಿನ್ನೆಲೆ ಕಳೆದ ವರ್ಷ ಬೆಳಗಾವಿಯಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ಸುವರ್ಣ ಸೌಧದ ಪಕ್ಕದಲ್ಲಿ ಸ್ಥಾಪಿಸಲಾಗಿದೆ ಎಂದರು. ಇದನ್ನೂ ಓದಿ: ಮಹಿಳಾ ನೌಕರರಿಗೆ ಋತುಚಕ್ರ ರಜೆ – ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ

ನಾವೆಲ್ಲರೂ ದೇಶಪ್ರೇಮಿಗಳಾಗಬೇಕು. ದೇಶದಲ್ಲಿ ಅನೇಕ ಜಾತಿ, ಧರ್ಮಗಳಿದ್ದು, ನಾವೆಲ್ಲರೂ ಜಾತ್ಯತೀತರಾಗಬೇಕಾಗಿರುವುದು ಅವಶ್ಯಕ. ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕೆ ಹೊರತು ದ್ವೇಷಿಸಬಾರದು. ಆಗ ಮಾತ್ರ ಸಮಸಮಾಜ ನಿರ್ಮಾಣ ಸಾಧ್ಯವಾಗುತ್ತದೆ. ಇಲ್ಲದಿದ್ದರೆ ಜಾತ್ಯತೀತ ರಾಷ್ಟ್ರ ನಿರ್ಮಾಣ ಕಷ್ಟವಾಗುತ್ತದೆ ಎಂದು ಅಭಿಪ್ರಾಯ ಪಟ್ಟರು. ಇದನ್ನೂ ಓದಿ: ಬೆಂಗಳೂರು ಐಟಿ ಕಾರಿಡಾರ್ ಅಭಿವೃದ್ಧಿಗೆ 400 ಕೋಟಿ ರೂ. – ಐಟಿ ವಲಯಕ್ಕೆ ಡಿಸಿಎಂ ಗುಡ್‌ನ್ಯೂಸ್

Siddaramaiah Khadi Nationala Flag Suvarna Soudha Belagavi 3

 

ಸ್ವಾತಂತ್ರ‍್ಯ ಬಂದು 79 ವರ್ಷಗಳಾಗಿವೆ. ನಾವೆಷ್ಟರಮಟ್ಟಿಗೆ ಭ್ರಾತೃತ್ವ, ದೇಶಪ್ರೇಮ, ಮನುಷ್ಯ ಸಮಾಜವನ್ನು ಈ ದೇಶದಲ್ಲಿ ಸಾಧಿಸಿದ್ದೇವೆ ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕು. ಇದಿಲ್ಲದೇ ಹೋದರೆ ಮನುಷ್ಯರಾಗಿ ಬಾಳುವುದು ಸಾಧ್ಯವಿಲ್ಲ. ಎಲ್ಲ ವಿದ್ಯಾರ್ಥಿಗಳಲ್ಲಿ, ಯುವಕರಲ್ಲಿ ಈ ಮನೋಭಾವ ಬೆಳೆಯಬೇಕು ಎಂದರು. ಇದನ್ನೂ ಓದಿ: ವಿಶ್ವದ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜ ಅನಾವರಣಗೊಳಿಸಿದ ಸಿಎಂ

ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದ ಪೀಠಿಕೆಯನ್ನು ಶಾಲಾ ಕಾಲೇಜುಗಳಲ್ಲಿ ಓದಿಸುವ ಕೆಲಸವನ್ನು ಮಾಡುತ್ತಿದ್ದೇವೆ. ಅದಕ್ಕಾಗಿಯೇ ಇಂಥ ಐತಿಹಾಸಿಕ ಕಾರ್ಯಕ್ರಮವನ್ನು ಮಾಡುತ್ತಿದ್ದೇವೆ. ವಿನೋದ್ ಕುಮಾರ್ ರೇವಪ್ಪ ಬಮ್ಮಣ್ಣ ಅವರು ಕೊಟ್ಟಿರುವ ರಾಷ್ಟ್ರಧ್ವಜಕ್ಕಾಗಿ ಮುಖ್ಯಮಂತ್ರಿಗಳು ಧನ್ಯವಾದಗಳನ್ನು ಸಲ್ಲಿಸಿದರು. ಇದನ್ನೂ ಓದಿ: ಇಂಡಿಗೋ ಎಫೆಕ್ಟ್ – ಬೆಂಗ್ಳೂರಿನ ಪಂಚತಾರಾ ಹೋಟೆಲ್‌ಗಳ ದರ 40-60% ಏರಿಕೆ

TAGGED:belagavicongressKhadi National FlagsiddaramaiahSuvarna Soudhaಕಾಂಗ್ರೆಸ್ಖಾದಿ ಧ್ವಜಬೆಳಗಾವಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Rajinikanth Padayappa 2
ಪಡೆಯಪ್ಪ ಪಾರ್ಟ್-2 ಬಗ್ಗೆ ತಲೈವಾ ಹೇಳಿದ್ದೇನು?
Cinema Latest Top Stories
V. Shantaram Biopic Tamannaah Bhatia
ನಟಿ ಜಯಶ್ರೀಯಾದ ತಮನ್ನಾ ಭಾಟಿಯಾ
Cinema Latest Top Stories
Toxic teaser yash
ಟಾಕ್ಸಿಕ್‌ ಬಿಡುಗಡೆಯಾಗುವ ಸಮಯದಲ್ಲೇ ಬರಲಿದೆ ಐದು ಬಿಗ್‌ ಬಜೆಟ್‌ ಸಿನಿಮಾಗಳು!
Cinema Latest Sandalwood
Actress Yamuna Srinidhi becomes the villain of Yajamana
ಯಜಮಾನನಿಗೆ ವಿಲನ್ ಆದ ನಟಿ ಯಮುನಾ ಶ್ರೀನಿಧಿ
Cinema Latest TV Shows

You Might Also Like

Vijayapura Office
Districts

ರಾ.ಹೆದ್ದಾರಿ ಅಗಲೀಕರಣಕ್ಕಾಗಿ ಜಮೀನು ವಶಕ್ಕೆ ಪಡೆದು ಅನ್ಯಾಯ – 3 ವರ್ಷ ಕಳೆದ್ರೂ ಪರಿಹಾರ ನೀಡದ್ದಕ್ಕೆ ಎಸಿ ಕಚೇರಿ ಜಪ್ತಿ

Public TV
By Public TV
11 minutes ago
Mantralaya Hundi Counting
Districts

ಕೋಟಿ ಒಡೆಯರಾದ ರಾಯರು – 21 ದಿನದಲ್ಲಿ 3.06 ಕೋಟಿ ಕಾಣಿಕೆ ಸಂಗ್ರಹ

Public TV
By Public TV
47 minutes ago
Manish Tewari
Latest

ಲೋಕಸಭೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಚರ್ಚೆ – ಬ್ಯಾಲೆಟ್ ಪೇಪರ್ ವ್ಯವಸ್ಥೆಗೆ ಮರಳಲು ವಿಪಕ್ಷಗಳ ಪಟ್ಟು

Public TV
By Public TV
1 hour ago
Rahul Gandhi Lok Sabha
Latest

ಮತ ಕಳ್ಳತನಕ್ಕಿಂತ ದೊಡ್ಡ ರಾಷ್ಟ್ರ ವಿರೋಧಿ ಕೃತ್ಯ ಇನ್ನೊಂದಿಲ್ಲ: ರಾಹುಲ್‌

Public TV
By Public TV
1 hour ago
Amit Shah Rajya Sabha
Latest

ಕಾಂಗ್ರೆಸ್ ವಂದೇ ಮಾತರಂ ವಿಭಜಿಸದಿದ್ದರೆ ದೇಶ ವಿಭಜನೆಯಾಗುತ್ತಿರಲಿಲ್ಲ: ಅಮಿತ್ ಶಾ

Public TV
By Public TV
1 hour ago
Yadagiri Protest 1
Districts

ಹೆರಿಗೆ ವೇಳೆ ಹೊಟ್ಟೆಯಲ್ಲಿಯೇ ಮಗು ಸಾವು – ವೈದ್ಯರ ವಿರುದ್ಧ ಕುಟುಂಬಸ್ಥರ ಆಕ್ರೋಶ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?