ನವದೆಹಲಿ: ತೃಣಮೂಲ ಕಾಂಗ್ರೆಸ್ (TMC) ಸಂಸದೆ ಮಹುವಾ ಮೊಯಿತ್ರಾ(Mahua Moitra) ಅವರು ತಮ್ಮದೇ ಪಕ್ಷದ ಸಂಸದ ಮತ್ತು ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್(Yusuf Pathan) ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಬಹಿರಂಗವಾಗಿ ತೀವ್ರ ವಾಗ್ದಾಳಿ ನಡೆಸಿ ಅವರ ರಾಜಕೀಯ ನಿಷ್ಠೆಯನ್ನು ಪ್ರಶ್ನಿಸಿದ್ದಾರೆ
ಯೂಸುಫ್ ಪಠಾಣ್ ಅವರು ದೆಹಲಿಗೆ ಪ್ರಯಾಣ ಬೆಳೆಸಿರುವುದರ ಹಿಂದೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕರೆ ಇದೆ ಎಂದು ಮಹುವಾ ಮೊಯಿತ್ರಾ ಆರೋಪಿಸಿದ್ದಾರೆ.
ಯೂಸುಫ್ ಪಠಾಣ್ ಅವರೇ, ಅಮಿತ್ ಶಾ ಕರೆದಿದ್ದಾರೆ ಎಂದು ನೀವು ದೆಹಲಿಗೆ ಓಡುತ್ತಿದ್ದೀರಾ? ಸ್ವಲ್ಪ ಧೈರ್ಯ ತೋರಿಸಿ, ನಿಮ್ಮಲ್ಲಿ ಸ್ವಲ್ಪ ಬೆನ್ನೆಲುಬು ಇರಲಿ ಎಂದು ಮೊಯಿತ್ರಾ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದಿದ್ದಾರೆ.
ನೀವು ಭಾರತ ದೇಶಕ್ಕಾಗಿ ಕ್ರಿಕೆಟ್ ಆಡಿದ್ದೀರಿ. ನಮ್ಮ ಜಿಲ್ಲೆಯ ಜನ ನಿಮಗೆ ಭಾರಿ ಮತಗಳನ್ನು ನೀಡಿ ಗೆಲ್ಲಿಸಿದ್ದಾರೆ. ಮತದಾರರ ನಂಬಿಕೆಗೆ ದ್ರೋಹ ಬಗೆಯಬೇಡಿ ಎಂದು ಹೇಳಿದ್ದಾರೆ.
And @iamyusufpathan you are rushing to Delhi because @AmitShah has called you? Have some courage. You played for India. Our district voted you in with a huge margin. Have some shame & some spine.
— Mahua Moitra (@MahuaMoitra) June 8, 2026
ಒಂದು ವೇಳೆ ಪಕ್ಷದ ನಿರ್ಧಾರಗಳು ಇಷ್ಟವಿಲ್ಲದಿದ್ದರೆ, ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿ ನಂತರ ಬಿಜೆಪಿ ಟಿಕೆಟ್‌ನಿಂದ ಸ್ಪರ್ಧಿಸಿ ಗೆದ್ದು ತೋರಿಸಿ ಎಂದು ಬಂಡಾಯ ನಾಯಕರಿಗೆ ಮಹುವಾ ಮೊಯಿತ್ರಾ ಸವಾಲು ಹಾಕಿದ್ದಾರೆ.
ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ನಂತರ ತೃಣಮೂಲ ಕಾಂಗ್ರೆಸ್ ಪಕ್ಷದಲ್ಲಿ ದೊಡ್ಡ ಮಟ್ಟದ ಆಂತರಿಕ ಭಿನ್ನಾಭಿಪ್ರಾಯ ಶುರುವಾಗಿದೆ. ಟಿಎಂಸಿಯ ಸುಮಾರು 20 ಲೋಕಸಭಾ ಸಂಸದರು ಪ್ರತ್ಯೇಕ ಗುಂಪು ಮಾಡಿಕೊಂಡು, ಬಿಜೆಪಿ ನೇತೃತ್ವದ ಎನ್‌ಡಿಎ (NDA) ಒಕ್ಕೂಟಕ್ಕೆ ಬೆಂಬಲ ನೀಡಲು ಮುಂದಾಗಿದ್ದಾರೆ ಎಂಬ ಸುದ್ದಿಗಳ ಬೆನ್ನಲ್ಲೇ ಈ ರಾಜಕೀಯ ಕಿತ್ತಾಟ ಜೋರಾಗಿದೆ.
2024ರ ಲೋಕಸಭಾ ಚುನಾವಣೆಯಲ್ಲಿ ಗುಜರಾತ್ ಮೂಲಕ ಯೂಸುಫ್ ಪಠಾಣ್ ಅವರು ಪಶ್ಚಿಮ ಬಂಗಾಳದ ಬಹರಂಪುರ ಕ್ಷೇತ್ರದಿಂದ 85,022 ಮತಗಳ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದರು. ಯೂಸುಫ್ ಪಠಾಣ್ ಅವರ ಈ ಗೆಲುವು ಭಾರತೀಯ ರಾಜಕೀಯದಲ್ಲಿ ದೊಡ್ಡ ಇತಿಹಾಸ ಸೃಷ್ಟಿಸಿತ್ತು.
MPs won in 2024 on TMC ticket. Mandate was NOT for NDA. All the greedy self-serving traitors with yellow-stained pants can please join BJP now- resign your seats & contest on BJP ticket. Let’s see what big heroes you are.
— Mahua Moitra (@MahuaMoitra) June 8, 2026
ಬಹರಂಪುರ ಕ್ಷೇತ್ರವು ಕಾಂಗ್ರೆಸ್ ಪಕ್ಷದ ಅತ್ಯಂತ ಬಲಿಷ್ಠ ಭದ್ರಕೋಟೆಯಾಗಿತ್ತು. 1999 ರಿಂದ ಸತತ 5 ಬಾರಿ ಗೆದ್ದು ಬೀಗಿದ್ದ ಹಿರಿಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರನ್ನು ಪಠಾಣ್ ಸೋಲಿಸಿದ್ದರು.
ಯೂಸುಫ್ ಪಠಾಣ್‌ಗೆ 5,24,516 ಮತಗಳು ಸಿಕ್ಕಿದ್ದರೆ ಅಧೀರ್ ರಂಜನ್ ಚೌಧರಿ ಅವರಿಗೆ 4,39,494 ಮತಗಳು ಬಿದ್ದಿತ್ತು. ಬಿಜೆಪಿಯ ಡಾ. ನಿರ್ಮಲ್ ಕುಮಾರ್ ಸಹಾ 3,71,885 ಮತಗಳು ಪಡೆದು ಮೂರನೇ ಸ್ಥಾನ ಪಡೆದಿದ್ದರು.
ಬಹರಾಂಪುರ್ ಮತ್ತು ಮುರ್ಷಿದಾಬಾದ್ ಜಿಲ್ಲೆಗಳಲ್ಲಿ ಮುಸ್ಲಿಂ ಮತದಾರರ ಸಂಖ್ಯೆ ಹೆಚ್ಚಾಗಿದೆ. ಯೂಸುಫ್ ಪಠಾಣ್ ಅವರನ್ನು ಕಣಕ್ಕಿಳಿಸುವುದರಿಂದ ಅಲ್ಲಿನ ಅಲ್ಪಸಂಖ್ಯಾತ ಮತಗಳನ್ನು ಸುಲಭವಾಗಿ ಸೆಳೆಯಬಹುದು ಎಂಬ ಲೆಕ್ಕಾಚಾರ ಹಾಕಿ ಮಮತಾ ಬ್ಯಾನರ್ಜಿ ಟಿಕೆಟ್ ನೀಡಿದ್ದರು.
ಬಹರಾಂಪುರ್ ಮತ್ತು ಮುರ್ಷಿದಾಬಾದ್ ಜಿಲ್ಲೆಗಳಲ್ಲಿ ಮುಸ್ಲಿಂ ಮತದಾರರ ಸಂಖ್ಯೆ ಹೆಚ್ಚಾಗಿದೆ. ಯೂಸುಫ್ ಪಠಾಣ್ ಅವರನ್ನು ಕಣಕ್ಕಿಳಿಸುವುದರಿಂದ ಅಲ್ಲಿನ ಅಲ್ಪಸಂಖ್ಯಾತ ಮತಗಳನ್ನು ಸುಲಭವಾಗಿ ಸೆಳೆಯಬಹುದು ಎಂಬ ಲೆಕ್ಕಾಚಾರ ಹಾಕಿ ಮಮತಾ ಬ್ಯಾನರ್ಜಿ ಟಿಕೆಟ್ ನೀಡಿದ್ದರು.
