ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಬಾಬರಿ ಮಸೀದಿ ನಿರ್ಮಿಸುವ ಯೋಜನೆ ಘೋಷಿಸಿ ದೊಡ್ಡ ವಿವಾದ ಹುಟ್ಟುಹಾಕಿದ್ದ ಶಾಸಕ ಹುಮಾಯೂನ್ ಕಬೀರ್‌ನನ್ನ (Humayun Kabir) ಆಡಳಿತರೂಢ ತೃಣಮೂಲ ಕಾಂಗ್ರೆಸ್ (TMC) ಅಮಾನತುಗೊಳಿಸಿದೆ.
ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಕಬೀರ್ ಬಾಬರಿ ಮಸೀದಿ (Babri Masjid) ಧ್ವಂಸ ವಾರ್ಷಿಕೋತ್ಸವ ದಿನವಾದ ಡಿಸೆಂಬರ್ 6ರಂದೇ ಬೆಲ್ದಂಗಾದಲ್ಲಿ ಮಸೀದಿಗೆ ಅಡಿಪಾಯ ಹಾಕುವುದಾಗಿ ಘೋಷಿಸಿದ್ದರು. ಇದನ್ನೂ ಓದಿ: ಬಾಬರಿ ಮಸೀದಿ ನಿರ್ಮಾಣಕ್ಕೆ ನೆಹರು ಸರ್ಕಾರಿ ಹಣ ಬಳಲು ಮುಂದಾಗಿದ್ರು: ರಾಜನಾಥ್ ಸಿಂಗ್ ಹೇಳಿಕೆಗೆ ʻಕೈʼ ಖಂಡನೆ
ಈ ಕುರಿತು ಪ್ರತಿಕ್ರಿಯೆ ನೀಡಿರುವ ಟಿಎಂಸಿ ನಾಯಕ ಮತ್ತು ಕೋಲ್ಕತ್ತಾ ಮೇಯರ್ ಫಿರ್ಹಾದ್ ಹಕೀಮ್ (Firhad Hakim), ಕಬೀರ್ ಬಿಜೆಪಿ ಬೆಂಬಲದೊಂದಿಗೆ ಕೋಮುವಾದ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ. ಪಕ್ಷವೂ ಈ ಹಿಂದೆ ಹಲವು ಬಾರಿ ಎಚ್ಚರಿಕೆ ನೀಡಿತ್ತು. ಆದ್ರೂ ಪದೇ ಪದೇ ವಿವಾದಿತ ಹೇಳಿಕೆ ನೀಡುತ್ತಲೇಬಂದಿದ್ದಾರೆ. ಅದಕ್ಕಾಗಿ ಕಬೀರ್‌ನನ್ನ ಪಕ್ಷ ಅಮಾನತುಗೊಳಿಸಿದೆ. ಇನ್ಮುಂದೆ ಪಕ್ಷಕ್ಕೂ ಅವರಿಗೂ ಯಾವುದೇ ಸಂಬಂಧ ಇರಲ್ಲ ಎಂದು ಹಕೀಮ್ ಹೇಳಿದ್ದಾರೆ.
ಕಬೀರ್ ಹೇಳಿದ್ದೇನು?
ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಹುಮಾಯೂನ್ ಕಬೀರ್, ಬಾಬರಿ ಮಸೀದಿ ಧ್ವಂಸ ವಾರ್ಷಿಕೋತ್ಸವ ದಿನವಾದ ಡಿಸೆಂಬರ್ 6ರಂದು ಬೆಲ್ದಂಗಾದಲ್ಲಿ ಮಸೀದಿಗೆ ಅಡಿಪಾಯ ಹಾಕುವುದಾಗಿ ಘೋಷಿಸಿದ್ದರು. ಈಗ ತಮ್ಮ ಯೋಜನೆಯಲ್ಲಿ ಹಸ್ತಕ್ಷೇಪ ಮಾಡದಂತೆ ಆಡಳಿತಕ್ಕೇ ಎಚ್ಚರಿಕೆ ನೀಡಿದ್ದರು. ಇದನ್ನೂ ಓದಿ: ಪುಟಿನ್ ಜೊತೆ ಸಭೆಗೆ ನನಗೆ ಅವಕಾಶ ನೀಡಿಲ್ಲ: ರಾಹುಲ್ ಅಸಮಾಧಾನ
ಪೊಲೀಸರು ಮತ್ತು ಆಡಳಿತವು ನನ್ನನ್ನ ತಡೆಯಲು ಪ್ರಯತ್ನಿಸಿದರೆ, ರೆಜಿನಗರದಿಂದ ಬಹರಾಮ್‌ಪುರದವರೆಗಿನ ರಾಷ್ಟ್ರೀಯ ಹೆದ್ದಾರಿಯ 30 ಕಿ.ಮೀ ಉದ್ದದ ರಸ್ತೆಯನ್ನು ತಡೆದು ಪ್ರತಿಭಟನೆ ನಡೆಸುತ್ತೇವೆ. ನಾನು ಅವರಿಗೆ ಬಹಿರಂಗ ಸವಾಲು ನೀಡುತ್ತಿದ್ದೇನೆ. ಅವರು ನನಗೆ ಸವಾಲು ಹಾಕಿದರೆ, ನಾನು ಅವರ ವಿರುದ್ಧ ಮಾತನಾಡುತ್ತೇನೆ. ನಾವು ಈಗಾಗಲೇ ಭೂಮಿಯನ್ನ ಗುರುತಿಸಿ ಒಪ್ಪಂದ ಮಾಡಿಕೊಂಡಿದ್ದೇವೆ. ಆದರೆ ಈ ಭೂಮಿ ಆರು ಮಾಲೀಕರ ನಡುವೆ ಹಂಚಿಕೆಯಾಗಿದ್ದು, ಈ ಪೈಕಿ ನಾಲ್ವರು ಭೂಮಿಯನ್ನು ಕೊಡಲು ಸಿದ್ಧರಿದ್ದಾರೆ. ಇನ್ನಿಬ್ಬರು ಮಾಲೀಕರನ್ನು ಒಪ್ಪಿಸಿದ ಮೇಲೆಯೇ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುತ್ತೇವೆ ಎಂದು ಹೇಳಿದ್ದರು.
ಮುರ್ಷಿದಾಬಾದ್‌ನಲ್ಲಿ ಬಾಬರಿ ಮಸೀದಿ ಶಿಲಾನ್ಯಾಸ ಕಾರ್ಯಕ್ರಮದ ವಿವಾದವು, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಮಾಲ್ಡಾ ಮುರ್ಷಿದಾಬಾದ್ ಭೇಟಿಗೆ ಮುಂಚಿತವಾಗಿ ಭುಗಿಲೆದ್ದಿತ್ತು. ಈ ವಿವಾದ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಟಿಎಂಸಿ ಪಕ್ಷದೊಳಗಿನ ಬಿರುಕುಗಳನ್ನ ಸೂಚಿಸಿದೆ. ಇದನ್ನೂ ಓದಿ: ಇಂಡಿಗೋದಲ್ಲಿ ಭಾರೀ ಅಡಚಣೆ – ಬೆಂಗಳೂರಲ್ಲಿ 73 ಸೇರಿ ದೇಶಾದ್ಯಂತ 100ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು



