Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತ್ರಿಪುರ ಸ್ಥಳೀಯ ಸಂಸ್ಥೆಗಳ ಚುನಾವಣೆ: 334ಕ್ಕೆ 329 ಸ್ಥಾನಗಳಲ್ಲಿ ಬಿಜೆಪಿ ಗೆಲುವು, ಎಎಂಸಿಯಲ್ಲಿ ʼಕಮಲʼ ಕ್ಲೀನ್‌ಸ್ವೀಪ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ತ್ರಿಪುರ ಸ್ಥಳೀಯ ಸಂಸ್ಥೆಗಳ ಚುನಾವಣೆ: 334ಕ್ಕೆ 329 ಸ್ಥಾನಗಳಲ್ಲಿ ಬಿಜೆಪಿ ಗೆಲುವು, ಎಎಂಸಿಯಲ್ಲಿ ʼಕಮಲʼ ಕ್ಲೀನ್‌ಸ್ವೀಪ್‌

Latest

ತ್ರಿಪುರ ಸ್ಥಳೀಯ ಸಂಸ್ಥೆಗಳ ಚುನಾವಣೆ: 334ಕ್ಕೆ 329 ಸ್ಥಾನಗಳಲ್ಲಿ ಬಿಜೆಪಿ ಗೆಲುವು, ಎಎಂಸಿಯಲ್ಲಿ ʼಕಮಲʼ ಕ್ಲೀನ್‌ಸ್ವೀಪ್‌

Public TV
Last updated: November 28, 2021 7:18 pm
Public TV
Share
2 Min Read
tripura
SHARE

ಅಗರ್ತಲಾ: ತ್ರಿಪುರಾದ ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಇಂದು ನಡೆದಿದ್ದು, ಆಡಳಿತಾರೂಢ ಬಿಜೆಪಿ ಜಯಭೇರಿ ಸಾಧಿಸಿದೆ. ಅಗರ್ತಲಾ ನಗರ ಪಾಲಿಕೆ (ಎಎಂಸಿ) 51 ವಾರ್ಡ್‌ಗಳಲ್ಲೂ ಗೆಲುವು ಸಾಧಿಸುವ ಮೂಲಕ ಬಿಜೆಪಿ ಕ್ಲೀನ್‌ಸ್ವೀಪ್‌ ಮಾಡಿದೆ.

ಎಎಂಸಿ 51 ವಾರ್ಡ್‌ಗಳಲ್ಲೂ ಬಿಜೆಪಿಯ ಅಭ್ಯರ್ಥಿಗಳೇ ಗೆಲುವು ಸಾಧಿಸಿದ್ದಾರೆ. ವಾರ್ಡ್‌ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಹಾಗೂ ಸಿಪಿಐ(ಎಂ) ಪಕ್ಷಗಳು ಖಾತೆ ತೆರೆಯುವಲ್ಲಿಯೂ ವಿಫಲವಾಗಿವೆ. ಇದನ್ನೂ ಓದಿ: 140ಕ್ಕೂ ಹೆಚ್ಚು ಕ್ಷೇತ್ರ ಗೆದ್ದು ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕು: BSY ಸಂಕಲ್ಪ

BJP Flag Final 6

15 ಸದಸ್ಯ ಬಲದ ಖೋವೈ ಮುನ್ಸಿಪಲ್‌ ಕೌನ್ಸಿಲ್‌, 17 ಸದಸ್ಯ ಬಲದ ಬೆಲೋನಿಯಾ ಮುನ್ಸಿಪಲ್‌ ಕೌನ್ಸಿಲ್‌, 15 ಸದಸ್ಯ ಬಲದ ಕುಮಾರ್‌ಘಾಟ್‌ ಮುನ್ಸಿಪಲ್‌ ಕೌನ್ಸಿಲ್‌ ಮತ್ತು 9 ಸದಸ್ಯ ಬಲದ ಸಬ್‌ರೂಮ್‌ ನಗರ್‌ ಪಂಚಾಯತ್‌ನಲ್ಲಿ ಬಿಜೆಪಿ ಗೆಲುವು ಸಾಧಿಸಿದೆ ಎಂದು ರಾಜ್ಯ ಚುನಾವಣೆ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.

And the Saffron Tsunami continues in Tripura under the leadership of PM @narendramodi ✌️✌️✌️ pic.twitter.com/TEbfAbYTar

— Ravi C T 🇮🇳 ರವಿ ಸಿ ಟಿ (@CTRavi_BJP) November 28, 2021

ಧರ್ಮನಗರ ಮುನ್ಸಿಪಲ್‌ ಕೌನ್ಸಿಲ್‌ನ 25 ವಾರ್ಡ್‌ ಹಾಗೂ 15 ಸದಸ್ಯ ಬಲದ ತೆಲಿಯಾಮುರ ಮುನ್ಸಿಪಲ್‌ ಕೌನ್ಸಿಲ್‌ ಮತ್ತು 13 ಸದಸ್ಯ ಬಲದ ಅಮರ್‌ಪುರ್‌ ನಗರ ಪಂಚಾಯಿತಿಯ ಎಲ್ಲಾ ಸ್ಥಾನಗಳನ್ನೂ ಗೆಲ್ಲುವ ಮೂಲಕ ಬಿಜೆಪಿ ಕ್ಲೀನ್‌ಸ್ವೀಪ್‌ ಸಾಧಿಸಿದೆ.

Modi victory speech

ಸೊನಾಮುರ ನಗರ ಪಂಚಾಯಿತಿ ಮತ್ತು ಮೆಲಘರ್‌ ನಗರ ಪಂಚಾಯಿತಿ 13 ಸ್ಥಾನಗಳನ್ನೂ ಬಿಜೆಪಿ ತನ್ನದಾಗಿಸಿಕೊಂಡಿದೆ. ಜಿರಾನಿಯಾ ನಗರ ಪಂಚಾಯಿತಿಯ 11 ಸ್ಥಾನಗಳಲ್ಲೂ ಬಿಜೆಪಿ ಜಯದ ನಗೆಬೀರಿದೆ. ಇದನ್ನೂ ಓದಿ: ಸಿದ್ದರಾಮಯ್ಯ, ಡಿಕೆಶಿ, ಬೊಮ್ಮಾಯಿ ನಾಮಪತ್ರ ವಾಪಸ್ ಪಡೆಯುವಂತೆ ಒತ್ತಡ ಹಾಕಿದ್ದಾರೆ: ಮಲ್ಲಿಕಾರ್ಜುನ ಲೋಣಿ

ಅಂಬಸ್ಸ ಮುನ್ಸಿಪಲ್‌ ಕೌನ್ಸಿಲ್‌ನಲ್ಲಿ 12 ಸೀಟ್‌ಗಳನ್ನು ಬಿಜೆಪಿ ಗೆದ್ದಿದೆ. ಇಲ್ಲಿ ಮಾತ್ರ ಟಿಎಂಸಿ ಮತ್ತು ಸಿಪಿಐ(ಎಂ) ತಲಾ ಒಂದು ಸ್ಥಾನ ಗೆಲ್ಲಲಷ್ಟೇ ಶಕ್ತವಾಗಿವೆ. ಇಲ್ಲಿ ಪಕ್ಷೇತರ ಅಭ್ಯರ್ಥಿಯೊಬ್ಬರು ಗೆಲುವು ಸಾಧಿಸಿದ್ದಾರೆ. ಕೈಲಾಶಹರ್‌ ಮುನ್ಸಿಪಲ್‌ ಕೌನ್ಸಿಲ್‌ನಲ್ಲಿ ಬಿಜೆಪಿ 16 ಸ್ಥಾನಗಳನ್ನು ಗೆದ್ದಿದೆ. ಸಿಪಿಐ(ಎಂ) ಒಂದು ಸ್ಥಾನ ಗೆದ್ದಿದೆ. ಪಣಿಸಗರ್‌ ನಗರ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ 12 ಸ್ಥಾನಗಳಲ್ಲಿ ಜಯ ಸಾಧಿಸಿದೆ. ಸಿಪಿಐ(ಎಂ) ಒಂದು ಸ್ಥಾನವನ್ನು ಮಾತ್ರ ತನ್ನದಾಗಿಸಿಕೊಂಡಿದೆ. ಒಟ್ಟು 334 ವಾರ್ಡ್‌ಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 329, ಸಿಪಿಐ(ಎಂ) 3, ಟಿಎಂಸಿ 1, ತಿಪ್ರ 1 ಸ್ಥಾನಗಳಲ್ಲಿ ಜಯ ಸಾಧಿಸಿವೆ.

Mamata

51 ವಾರ್ಡ್‌ಗಳು, 13 ಮುನ್ಸಿಪಲ್‌ ಕೌನ್ಸಿಲ್‌ಗಳು ಮತ್ತು 6 ನಗರ ಪಂಚಾಯತ್‌ಗಳನ್ನು ಹೊಂದಿರುವ ಎಎಂಸಿ ಸೇರಿದಂತೆ ತ್ರಿಪುರಾದ ಸ್ಥಳೀಯ ಸಂಸ್ಥೆಗಳ ಒಟ್ಟು 334 ಸ್ಥಾನಗಳಿಗೆ ಮತದಾನ ನಡೆದಿತ್ತು. ಈ ಎಲ್ಲಾ ಸ್ಥಾನಗಳಲ್ಲೂ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಒಟ್ಟು ಸ್ಥಾನಗಳ ಪೈಕಿ 112 ಸ್ಥಾನಗಳಲ್ಲಿ ಬಿಜೆಪಿ ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದರು. 2018ರಲ್ಲಿ ತ್ರಿಪುರಾದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಮೊದಲ ಬಾರಿಗೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸಿತ್ತು.

TAGGED:bjpTMCtripura civic body electionsಟಿಎಂಸಿತ್ರಿಪುರ ಸ್ಥಳೀಯ ಸಂಸ್ಥೆ ಚುನಾವಣೆಬಿಜೆಪಿ
Share This Article
Facebook Whatsapp Whatsapp Telegram

Cinema news

rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories

You Might Also Like

Priyank Kharge
Bengaluru City

ಚೀನಾಗೆ ಭೂಮಿ ಕೊಟ್ಟಾಗ ದೇಶದ ಮರ್ಯಾದೆ ಹಾಳಾಗ್ಲಿಲ್ವಾ? – ಎಲ್ಲದಕ್ಕೂ ರಾಹುಲ್ ಗಾಂಧಿನೇ ಹೊಣೆನಾ? – ಪ್ರಿಯಾಂಕ್‌ ಖರ್ಗೆ ಪ್ರಶ್ನೆ

Public TV
By Public TV
19 minutes ago
Elephant Woman Death
Chikkamagaluru

ಕಾಡಾನೆ ದಾಳಿಗೆ ಮಹಿಳೆ ಬಲಿ – ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

Public TV
By Public TV
21 minutes ago
Gangabai Siddaramappa Patil
Karnataka

ಸಚಿವ ಶಿವಾನಂದ ಪಾಟೀಲ್‌ಗೆ ಮಾತೃ ವಿಯೋಗ

Public TV
By Public TV
24 minutes ago
Chandru Lamani BJP MLA
Bengaluru City

ಶಾಸಕ ಚಂದ್ರು ಲಮಾಣಿಗೆ ಮಾ.2ರ ತನಕ ನ್ಯಾಯಾಂಗ ಬಂಧನ

Public TV
By Public TV
42 minutes ago
Injection 2
Crime

ದಾವಣಗೆರೆ | ಓವರ್‌ ಡೋಸ್‌ ಇಂಜೆಕ್ಷನ್ ಚುಚ್ಚಿಕೊಂಡು ವೈದ್ಯ ವಿದ್ಯಾರ್ಥಿ ಆತ್ಮಹತ್ಯೆ

Public TV
By Public TV
44 minutes ago
Fire accident at Nelamangala godown
Bengaluru City

ನೆಲಮಂಗಲ | ಪರ್ಫ್ಯೂಮ್ ಗೋಡೌನ್‍ನಲ್ಲಿ ಅಗ್ನಿ ಅವಘಡ – ಮುಗಿಲೆತ್ತರಕ್ಕೆ ಹಬ್ಬಿದ ಜ್ವಾಲೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?