ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ (Mysuru Dasara) ಸಂಭ್ರಮದಲ್ಲಿರುವ ಮೈಸೂರು ರಾಜವಂಶಸ್ಥ ಕುಟುಂಬಕ್ಕೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ರಾಜವಂಶಸ್ಥ ಯದುವೀರ್ ಒಡೆಯರ್ ಅವರ ಪತ್ನಿ ತ್ರಿಷಿಕಾ ಕುಮಾರಿ ಒಡೆಯರ್ (Trishikha Kumari Wadiyar) ಅವರು 2ನೇ ಮಗುವಿಗೆ ಜನ್ಮ ನೀಡಿದ್ದಾರೆ.
ವಿಜಯದಶಮಿಗೆ (Vijayadashami) ಒಂದು ದಿನ ಬಾಕಿಯಿದ್ದು, ದಸರಾ ಜಂಬೂ ಸವಾರಿಗೆ ಸಕಲ ತಯಾರಿಗಳು ಭರದಿಂದ ಸಾಗುತ್ತಲೇ ಇವೆ. ಈಗಲೂ ಅರಮನೆಯಲ್ಲಿ ಆಯುಧಪೂಜೆಯ ಕೈಂಕರ್ಯಗಳು ನೆರವೇರುತ್ತಲೇ ಇವೆ. ಈ ಹೊತ್ತಿನಲ್ಲೇ ಸಂಸದ ಹಾಗೂ ರಾಜವಂಶಸ್ಥ ಯದುವೀರ್‌ಗೆ 2ನೇ ಮಗುವಿನ ಜನನವಾಗಿದೆ. ಮೊದಲ ಮಗು ʻಆದ್ಯವೀರ್ʼ. ಇದನ್ನೂ ಓದಿ: ನವರಾತ್ರಿಯ 9ನೇ ದಿನ ಆಯುಧ ಪೂಜೆ – ಖಾಸಾ ಆಯುಧಗಳಿಗೆ ರಾಜವಂಶಸ್ಥ ಯದುವೀರ್ ಪೂಜೆ
ಯದುವೀರ್ ಅವರು ಖಾಸಗಿ ದರ್ಬಾರ್ ಚಟುವಟಿಕೆಗಳಲ್ಲಿ ಒಂದು ವಾರದಿಂದ ಭಾಗಿಯಾಗಿದ್ದು. ಶುಕ್ರವಾರ ಆಯುಧಪೂಜೆ ಸಂಭ್ರಮದಲ್ಲಿದ್ದರು. ಈ ವೇಳೆ ಖುಷಿಯ ವಿಚಾರ ಬಂದಿದೆ. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೆರಿಗೆ ಆಗಿದ್ದು, ತಾಯಿ ಹಾಗೂ ಮಗು ಆರೋಗ್ಯವಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಇದನ್ನೂ ಓದಿ: ನವರಾತ್ರಿ ವಿಶೇಷ: ಆಯುಧ ಪೂಜೆ ಯಾಕೆ ಮಾಡಲಾಗುತ್ತದೆ? ಏನಿದರ ಮಹತ್ವ?
ಇಡೀ ಕುಟುಂಬ ದಸರಾದ ಸಡಗರದಲ್ಲಿದೆ. ಈಗಾಗಲೇ 8 ದಿನ ಖಾಸಗಿ ದರ್ಬಾರ್ ನಡೆಸಿರುವ ಯದುವೀರ್ ಅವರು ಶನಿವಾರ ವಿಜಯದಶಮಿಗೆ ಅಣಿಯಾಗುತ್ತಿದ್ದರು. ಇದರ ನಡುವೆ ಗುರುವಾರ ರಾತ್ರಿಯೇ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತ್ರಿಷಿಕಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬೆಳಗ್ಗಿನ ಜಾವ ನವರಾತ್ರಿ ದಿನವೇ ತ್ರಿಷಿಕಾ ಅವರು ಗಂಡು ಮಗುವಿಗೆ ಜನ್ಮ ನೀಡಿದ ಸುದ್ದಿ ಅರಮನೆಯಲ್ಲಿದ್ದ ಯದುವೀರ್ ಒಡೆಯರ್ ಅವರಿಗೆ ತಲುಪಿತು. ಇದರಿಂದ ಅವರು ಖುಷಿಗೊಂಡಿದ್ದಾರೆ.
ಖಾಸಗಿ ದರ್ಬಾರ್ ಇರುವ ಕಾರಣದಿಂದ ಕಂಕಣಧಾರಿಯಾಗಿರುವ ಯದುವೀರ್ ಅರಮನೆಯಿಂದ ಹೊರಗೆ ಹೋಗುವುದಿಲ್ಲ. ಇಂದು ಖಾಸಗಿ ದರ್ಬಾರ್ ಮುಗಿದ ಬಳಿಕ ಹೊರ ಬರಲಿದ್ದಾರೆ. ಇದನ್ನೂ ಓದಿ: ಬಾಂಗ್ಲಾದೇಶದ ಕಾಳಿ ದೇವಸ್ಥಾನಕ್ಕೆ ಮೋದಿ ಉಡುಗೊರೆಯಾಗಿ ನೀಡಿದ್ದ ಕಿರೀಟ ಕಳವು
2016 ಜೂನ್ 27ರಂದು ತ್ರಿಷಿಕಾ ಕುಮಾರಿ ಜೊತೆ ಮದುವೆ ಮಾಡಲಾಗಿತ್ತು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತ್ರಿಷಿಕಾ ಅವರು ಮೊದಲ ಮಗುವಿಗೆ ಜನ್ಮ ನೀಡಿದ್ದರು.