ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ‘ಸ್ವಾತಿ ಮುತ್ತಿನ ಮಳೆಹನಿಯೇ’ ಸಿನಿಮಾವನ್ನು ನಿರ್ಮಾಣ ಮಾಡುತ್ತಿರುವ ವಿಚಾರ ತಿಳಿದೇ ಇದೆ. ಈಗಾಗಲೇ ಬಹುತೇಕ ಚಿತ್ರೀಕರಣವನ್ನೂ ಮುಗಿಸಲಾಗಿದೆ. ಬಿಡುಗಡೆಗೂ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈ ವೇಳೆಯಲ್ಲಿ ಚಿತ್ರದ ಶೀರ್ಷಿಕೆಯ ಸಲುವಾಗಿ ವಿಘ್ನವೊಂದು ಎದುರಾಗಿದೆ. ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ಶೀರ್ಷಿಕೆ ನನ್ನದು. ನನ್ನ ಸಿನಿಮಾ ಅರ್ಧಕ್ಕೆ ನಿಂತಿದೆ. ಅದನ್ನು ಮುಂದುವರೆಸಬೇಕು. ಹಾಗಾಗಿ ಈ ಶೀರ್ಷಿಕೆಯನ್ನು ಯಾರೂ ಬಳಸದಂತೆ ಕ್ರಮ ತಗೆದುಕೊಳ್ಳಬೇಕೆಂದು ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು, ತಮ್ಮ ಲಾಯರ್ ಮೂಲಕ ವಾಣಿಜ್ಯ ಮಂಡಳಿಗೆ ಪತ್ರವೊಂದನ್ನು ಬರೆದಿದ್ದಾರೆ.
Advertisement
ವಾಣಿಜ್ಯ ಮಂಡಳಿಗೆ ಬರೆದ ಪತ್ರದಲ್ಲಿ ‘ನನ್ನ ಕಕ್ಷಿದಾರರು ನಿರ್ಮಿಸುವ ಮೇಲ್ಕಂಡ ಸ್ವಾತಿ ಮುತ್ತಿನ ಮಳೆ ಹನಿಯೆ’ ಹೆಸರಿನ ಚಿತ್ರದ ತಾರಾಗಣದಲ್ಲಿ ಅಂಬರೀಶ್, ಸುಹಾಸಿನಿ ಮತ್ತು ಇತರ ಕಲಾವಿದರು ನಟಿಸಿದ್ದು. ಶೇಕಡಾ 80ರಷ್ಟು ಚಿತ್ರೀಕರಣ ಕೂಡ ಮುಗಿದಿದೆ. ಮೇಲ್ಕಂಡ ಚಿತ್ರದ ನಾಯಕ ನಟ ಅಂಬರೀಶ್ ನಿಧನ ಹೊಂದಿ ನಂತರ ಚಿತ್ರದ ಚಿತ್ರೀಕರಣವು ಕಾರಣಾಂತರಗಳಿಂದ ನಿಂತಿದೆ. ನನ್ನ ಕಕ್ಷಿದಾರರು ಹೇಳುವ ಹಾಗೆ ಮೇಲ್ಕಂಡ ಚಿತ್ರ ಶೀರ್ಷಿಕೆ ಅವರೇ ನಿರ್ದೇಶಿಸಿರುವ ಬಣ್ಣದ ಗೆಜ್ಜೆ ಚಿತ್ರದ ಹಾಡಿನ ಶೀರ್ಷಿಕೆಯಾಗಿರುತ್ತದೆ’ ಎಂದು ಸಿಂಗ್ ಬಾಬು ಪರ ವಕೀಲ ಎಸ್.ಆರ್. ಶ್ರೀನಿವಾಸ್ ಮೂರ್ತಿ ಪತ್ರ ಬರೆದಿದ್ದಾರೆ. ಇದನ್ನೂ ಓದಿ: ರವಿಚಂದ್ರನ್ ಪುತ್ರ ವಿಕ್ರಮ್ ನಟನೆಯ ಎರಡನೇ ಸಿನಿಮಾಗೆ ಮುಹೂರ್ತ
Advertisement
Advertisement
ಅಲ್ಲದೇ, ತಾವು ನಿರ್ಮಾಣ ಮಾಡುವ ಚಿತ್ರಕ್ಕೆ ಮೇಲ್ಕಂಡ ಶೀರ್ಷಿಕೆಯನ್ನು ಅಂದರೆ ಸ್ವಾತಿ ಮುತ್ತಿನ ಮಳೆ ಹನಿಯೇ ಶಿರ್ಷಿಕೆಯನ್ನಾಗಲಿ, ಹಾಡನ್ನಾಗಲು ಯಾವುದೇ ರೀತಿ ಉಪಯೋಗಿಸಲು ಅಥವಾ ನೋಂದಾಯಿಸಲು ನನ್ನ ಕಕ್ಷಿದಾರರ ವಿನಃ ಯಾರಿಗೂ ಯಾವುದೇ ವಿಧವಾದ ಹಕ್ಕು ಇರುವುದಿಲ್ಲ. ಒಂದು ವೇಳೆ ನಾನು ನೀಡಿರುವ ಈ ವಕೀಲರ ನೋಟಿಸಿನ ನಂತರವೂ ನೀವು ಬೇರೆ ನಿರ್ಮಾಪಕರಿಗೆ ಈ ಚಿತ್ರದ ಶೀರ್ಷಿಕೆಯನ್ನು ನೋಂದಾವಣೆ ಮಾಡಿಕೊಡಲು ಮತ್ತು ಚಿತ್ರ ನಿರ್ಮಾಣ ಮಾಡಲು ಅವಕಾಶ ಕೊಟ್ಟಿದ್ದೆ ಆದರೆ, ನನ್ನ ಕಕ್ಷಿದಾರರು ನೊಂದಾಣಿಕೆ ಮಾಡಿರುವ ಶೀರ್ಷಿಕೆಯ ಕೃತಿ ಚೌರ್ಯವಾಗುತ್ತದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.