ಮೈಸೂರು: ಅಪಘಾತವಾದ ಬಳಿಕ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಕಾರು ಬಚ್ಚಿಟ್ಟಿದ್ದ ಪೊಲೀಸರಿಗೆ ಈಗ ಸಂಕಷ್ಟ ಶುರುವಾಗಿದೆ.
ಗಸ್ತಿನಲ್ಲಿದ್ದ ಹೈವೇ ಪೆಟ್ರೋಲ್ ಪೊಲೀಸರ ಮೇಲೆ ಅನುಮಾನ ಹೆಚ್ಚಿದೆ. ದರ್ಶನ್ ಅವರ ಕಾರು ಅಪಘಾತವಾದ ಸಂದರ್ಭದಲ್ಲಿ ಸ್ಥಳಕ್ಕೆ ಧಾವಿಸಿದ್ದ ಪೊಲೀಸರ ಮೇಲೆ ಅನುಮಾನ ಶುರುವಾಗಿದೆ. ಅಪಘಾತಕ್ಕೆ ಒಳಗಾದ ಕಾರನ್ನು ಗುಪ್ತವಾದ ಸ್ಥಳಕ್ಕೆ ಕಳುಹಿಸಲು ಪೊಲೀಸರು ನೆರವಾಗಿದ್ದರು. ಸದ್ಯ ಪ್ರತ್ಯಕ್ಷದರ್ಶಿಗಳ ಮಾಹಿತಿ ಆಧರಿಸಿ ಗಸ್ತಿನಲ್ಲಿದ್ದ ಪೊಲೀಸರ ಮೇಲೆ ಕ್ರಮಕೈಗೊಳ್ಳಲು ಪೊಲೀಸ್ ಆಯುಕ್ತರು ಮುಂದಾಗಿದ್ದಾರೆ. ಇದನ್ನೂ ಓದಿ: ವೈದ್ಯರಿಂದ ದರ್ಶನ್, ದೇವರಾಜ್ X-RAY ಬಿಡುಗಡೆ: ಎಲ್ಲೆಲ್ಲಿ ಗಾಯವಾಗಿದೆ?
ಸದ್ಯ ಕಾರು ಅಪಘಾತಕ್ಕೀಡಾಗಿ ಗಾಯಗೊಂಡಿರುವ ನಟ ದರ್ಶನ್ ಅವರಿಗೆ ನಗರದ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ದರ್ಶನ್ ಜೊತೆಗೆ ನಟ ದೇವರಾಜ್, ಪ್ರಜ್ವಲ್ ಹಾಗೂ ಅಂತೋನಿ ಅವರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ನಾಲ್ವರನ್ನು ಸ್ಪೆಷಲ್ ವಾರ್ಡ್‍ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ದರ್ಶನ್ ಸೇಫ್ ಆಗಿದ್ದು, ಯಾರಾದ್ರು ರೂಮರ್ಸ್ ಹಬ್ಬಿಸಿದ್ರೆ ನಂಬಬೇಡಿ: ಸೃಜನ್ ಲೋಕೇಶ್
ದರ್ಶನ್, ದೇವರಾಜ್, ಅಂತೋನಿಯವರಿಗೆ ಸೋಮವಾರ ಶಸ್ತ್ರ ಚಿಕಿತ್ಸೆ ನಡೆದಿದೆ. ಇಂದು ಸಂಜೆಯೊಳಗೆ ನಟ ದೇವರಾಜ್, ಪುತ್ರ ಪ್ರಜ್ವಲ್ ದೇವರಾಜ್ ಡಿಸ್ಚಾರ್ಜ್ ಆಗಲಿದ್ದಾರೆ. ಆದ್ರೆ ದರ್ಶನ್ ಅವರು ಇನ್ನೂ ಒಂದು ದಿನ ಆಸ್ಪತ್ರೆಯಲ್ಲೇ ಉಳಿಯಲಿದ್ದಾರೆ ಎಂಬುದಾಗಿ ಆಸ್ಪತ್ರೆಯ ಮೂಲಗಳಿಂದ ತಿಳಿದುಬಂದಿದೆ. ಗಾಯಾಳುಗಳನ್ನು ನೋಡಲು ಅಭಿಮಾನಿಗಳು ಬರುತ್ತಿರುವ ಹಿನ್ನೆಲೆಯಲ್ಲಿ ಆಸ್ಪತ್ರೆ ಆವರಣದಲ್ಲಿ ಪೊಲೀಸ್ ಭದ್ರತೆ ಮುಂದುವರಿದಿದೆ. ಸಿ.ಆರ್.ಪಿ.ಎಫ್ ತುಕಡಿ ಪೊಲೀಸ್ ಸಿಬ್ಬಂದಿಯನ್ನು ಕೂಡ ನಿಯೋಜಿಸಲಾಗಿದೆ. ಇದನ್ನೂ ಓದಿ: ಬಲಗೈಗೆ ರಾಡ್ ಅಳವಡಿಸಿ 24 ಹೊಲಿಗೆ- ಯಜಮಾನನ ಶಸ್ತ್ರಚಿಕಿತ್ಸೆ ಯಶಸ್ವಿ
ಘಟನೆಯೇನು?:
ಶನಿವಾರ ನಟರಾದ ದರ್ಶನ್, ಸೃಜನ್ ಲೋಕೇಶ್ ಹಾಗೂ ದೇವರಾಜ್ ಕುಟುಂಬ ಮೈಸೂರು ಮೃಗಾಲಯಕ್ಕೆ ತೆರಳಿ ಪ್ರಾಣಿಗಳನ್ನು ದತ್ತು ತೆಗೆದುಕೊಂಡಿದ್ದರು. ಆ ಬಳಿಕ ಮೈಸೂರಿನಲ್ಲೇ ಉಳಿದುಕೊಂಡು ಸೋಮವಾರ ಮುಂಜಾನೆ ಅಲ್ಲಿಂದ ಹೊರಟಿದ್ದರು. ಹೀಗೆ ಕಾರ್ ನಲ್ಲಿ ಬರುತ್ತಿದ್ದ ಸಂದರ್ಭದಲ್ಲಿ ಮೈಸೂರು ಹೊರವಲಯದ ಹಿನಕಲ್ ಬಳಿ ಕಾರ್ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ದರ್ಶನ್ ಅವರ ಬಲಗೈನ ಮೂಳೆ ಮುರಿದಿದ್ದು, ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಸದ್ಯ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ. ಬಲಗೈಗೆ ರಾಡ್ ಅಳವಡಿಸಲಾಗಿದ್ದು, 24 ಹೊಲಿಗೆ ಹಾಕಲಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದರು. ಇದನ್ನೂ ಓದಿ: ದರ್ಶನ್ ಅಪಘಾತವಾಗಿದ್ದ ಕಾರ್ ಮಿಸ್ಸಿಂಗ್ ಸ್ಟೋರಿಯ ಇನ್‍ಸೈಡ್ ಸ್ಟೋರಿ ಇಲ್ಲಿದೆ
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv