ಹೈದರಾಬಾದ್: 15 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ತೆಲಂಗಾಣದ ನಿರ್ಮಲ್ ಜಿಲ್ಲೆಯ ಮುನ್ಸಿಪಲ್ ಕೌನ್ಸಿಲ್‍ನ ಉಪಾಧ್ಯಕ್ಷ ಮತ್ತು ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ನಾಯಕ ಅತ್ಯಾಚಾರವೆಸಗಿದ್ದಾರೆ.
ಒಂದು ತಿಂಗಳ ಹಿಂದೆ ಈ ಘಟನೆ ನಡೆದಿದ್ದು, ಆರೋಪಿಯನ್ನು ಸಾಜಿದ್ ಖಾನ್ ಎಂದು ಗುರುತಿಸಲಾಗಿದೆ. ಇದೀಗ ಆರೋಪಿ ವಿರುದ್ಧ ಮಕ್ಕಳ ಲೈಂಗಿಕ ಅಪರಾಧಗಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಸೈಬರ್ ಮೋಸದ ಜಾಲದಕ್ಕೆ ಸಿಕ್ಕಿ 1.48 ಲಕ್ಷ ಕಳೆದುಕೊಂಡ ನಟಿ!
ಫೆಬ್ರವರಿ 26 ರಂದು ಮಕ್ಕಳ ಕಲ್ಯಾಣ ಸಮಿತಿಗೆ ಅತ್ಯಾಚಾರ ಘಟನೆ ಕುರಿತಂತೆ ಮಾಹಿತಿ ದೊರೆತಿದ್ದು, ಬಳಿಕ ಪೊಲೀಸರಿಗೆ ವಿಚಾರ ತಿಳಿಸಿದರು. ನಂತರ ಪೊಲೀಸರು ಸ್ಥಳಕ್ಕೆ ಆಗಮಿಸಿ ಬಾಲಕಿಯಿಂದ ಹೇಳಿಕೆ ಪಡೆದರು. ಅಲ್ಲದೇ ಪ್ರಕರಣದಲ್ಲಿ ಭಾಗಿಯಾಗಿರುವ ಮಹಿಳೆ, ಕಾರು ಚಾಲಕ ಮತ್ತು ಸಾಜಿದ್ ಖಾನ್ ಮೂವರು ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (ಅತ್ಯಾಚಾರ) ಮತ್ತು ಪೋಕ್ಸೊ ಕಾಯ್ದೆಯ ಸಂಬಂಧಿತ ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸದ್ಯ ಆರೋಪಿ ಸಾಜಿದ್ ಖಾನ್ ತಲೆ ಮರೆಸಿಕೊಂಡಿದ್ದು, ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ತನಿಖೆ ವೇಳೆ ಸಮಾರಂಭವೊಂದರಲ್ಲಿ ಪಾಲ್ಗೊಳ್ಳುವ ನೆಪದಲ್ಲಿ ಮಹಿಳೆ ಬಾಲಕಿಯನ್ನು ಹೈದರಾಬಾದ್ ಕರೆದುಕೊಂಡು ಹೋಗಿದ್ದಳು. ಈ ವೇಳೆ ಮೂವರು ಆರೋಪಿಗಳು ಒಂದೇ ಹೋಟೆಲ್‍ನಲ್ಲಿ ತಂಗಿದ್ದರು. ಈ ನಡುವೆ ಸಾಜಿದ್ ಖಾನ್ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಆಹಾರ ಇಲ್ಲದೇ ಚಾಕೊಲೇಟ್ ತಿನ್ನುತ್ತ ದಿನ ಕಳೆಯುತ್ತಿದ್ದೇವೆ: ವಿದ್ಯಾರ್ಥಿಗಳ ಅಳಲು
ತನ್ನ ಆರೋಗ್ಯ ಸ್ಥಿತಿಯ ಬಗ್ಗೆ ಬಾಲಕಿ ಪೋಷಕರಿಗೆ ತಿಳಿಸಿದ ಬಳಿಕ ಲೈಂಗಿಕ ದೌರ್ಜನ್ಯ ಎಸಗಿರುವ ವಿಚಾರ ಬೆಳಕಿಗೆ ಬಂದಿದ್ದು, ನಂತರ ಈ ವಿಚಾರವಾಗಿ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.