ಲಕ್ನೋ: ಟ್ರಕ್ ಮತ್ತು ಬಸ್ ನಡುವೆ ಡಿಕ್ಕಿ ಸಂಭವಿಸಿ 13 ಮಂದಿ ಮೃತಪಟ್ಟಿದ್ದು, 30 ಮಂದಿ ಗಾಯಗೊಂಡಿರುವ ಘಟನೆ ಗುರುವಾರ ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯಲ್ಲಿ ನಡೆದಿದೆ.
ಸದ್ಯ ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿಸಲಾಗಿದೆ. ಇದೀಗ ಘಟನಾ ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಯಮುನಾ ಪ್ರಸಾದ್ ಆಗಮಿಸಿದ್ದು, ರಕ್ಷಣಾ ಕಾರ್ಯಚರಣೆ ನಡೆಯುತ್ತಿದೆ. ಇದನ್ನೂ ಓದಿ: 2023ರಲ್ಲೂ ಬೊಮ್ಮಾಯಿ ಸಿಎಂ ಆಗಿ ದಸರಾ ಉದ್ಘಾಟಿಸಲಿದ್ದಾರೆ: ಪ್ರತಾಪ್ ಸಿಂಹ
ಎರಡು ವಾಹನಗಳು ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದವು. ಈ ವೇಳೆ ರಸ್ತೆ ಮಧ್ಯೆ ಹಸು ಇತ್ತು, ಹಸುವನ್ನು ರಕ್ಷಿಸಲು ಹೋಗಿ ಎರಡು ವಾಹನಗಳು ಮುಖಾಮುಖಿ ಡಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: 12 ಲಕ್ಷ ಮೌಲ್ಯದ ಅಕ್ಕಿ, ಲಾರಿಯ ಫೈನಾನ್ಸ್ ಹಣ ವಂಚನೆಗೆ ಸಂಚು ಮಾಡಿದ್ದ ಮಾಲೀಕ ಅರೆಸ್ಟ್
9 people killed, 27 injured in collision between a truck and a passenger bus in Barabanki. The injured have been shifted to Trauma Centre, says DM Barabanki. pic.twitter.com/WqaMlPyBEv
— ANI UP (@ANINewsUP) October 7, 2021
ಈ ಸಂಬಂಧ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ ಮತ್ತು ಸಂತ್ರಸ್ಥರಿಗೆ ಅಗತ್ಯವಾದ ಸಹಾಯ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜೊತೆಗೆ ಮೃತ ಕುಟುಂಬಸ್ಥರಿಗೆ ತಲಾ ಎರಡು ಲಕ್ಷ ರೂ. ಮತ್ತು ಗಾಯಗೊಂಡವರಿಗೆ ತಲಾ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ.