Latest

ಟ್ರಕ್, ಬಸ್ ನಡುವಿನ ಭೀಕರ ಅಪಘಾತಕ್ಕೆ 13 ಮಂದಿ ಸಾವು, 30 ಮಂದಿಗೆ ಗಾಯ

Published

on

Truck- Bus
Share this

ಲಕ್ನೋ: ಟ್ರಕ್ ಮತ್ತು ಬಸ್ ನಡುವೆ ಡಿಕ್ಕಿ ಸಂಭವಿಸಿ 13 ಮಂದಿ ಮೃತಪಟ್ಟಿದ್ದು, 30 ಮಂದಿ ಗಾಯಗೊಂಡಿರುವ ಘಟನೆ ಗುರುವಾರ ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯಲ್ಲಿ ನಡೆದಿದೆ.

ಸದ್ಯ ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿಸಲಾಗಿದೆ. ಇದೀಗ ಘಟನಾ ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಯಮುನಾ ಪ್ರಸಾದ್ ಆಗಮಿಸಿದ್ದು, ರಕ್ಷಣಾ ಕಾರ್ಯಚರಣೆ ನಡೆಯುತ್ತಿದೆ. ಇದನ್ನೂ ಓದಿ:  2023ರಲ್ಲೂ ಬೊಮ್ಮಾಯಿ ಸಿಎಂ ಆಗಿ ದಸರಾ ಉದ್ಘಾಟಿಸಲಿದ್ದಾರೆ: ಪ್ರತಾಪ್ ಸಿಂಹ

Truck- Bus

ಎರಡು ವಾಹನಗಳು ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದವು. ಈ ವೇಳೆ ರಸ್ತೆ ಮಧ್ಯೆ ಹಸು ಇತ್ತು, ಹಸುವನ್ನು ರಕ್ಷಿಸಲು ಹೋಗಿ ಎರಡು ವಾಹನಗಳು ಮುಖಾಮುಖಿ ಡಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: 12 ಲಕ್ಷ ಮೌಲ್ಯದ ಅಕ್ಕಿ, ಲಾರಿಯ ಫೈನಾನ್ಸ್ ಹಣ ವಂಚನೆಗೆ ಸಂಚು ಮಾಡಿದ್ದ ಮಾಲೀಕ ಅರೆಸ್ಟ್

ಈ ಸಂಬಂಧ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ ಮತ್ತು ಸಂತ್ರಸ್ಥರಿಗೆ ಅಗತ್ಯವಾದ ಸಹಾಯ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜೊತೆಗೆ ಮೃತ ಕುಟುಂಬಸ್ಥರಿಗೆ ತಲಾ ಎರಡು ಲಕ್ಷ ರೂ. ಮತ್ತು ಗಾಯಗೊಂಡವರಿಗೆ ತಲಾ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ.

Click to comment

Leave a Reply

Your email address will not be published. Required fields are marked *

Advertisement
Advertisement