CrimeLatestMain PostNational

50 ಅಡಿ ಪ್ರಪಾತಕ್ಕೆ ಬಿದ್ದ ಟ್ರಕ್ – ಚಾಲಕ ಸಾವು

ಮುಂಬೈ: 50 ಅಡಿ ಆಳದ ಪ್ರಪಾತಕ್ಕೆ ಬಿದ್ದು ಟ್ರಕ್ ಚಾಲಕನೊಬ್ಬ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಕಾಸರ ಘಾಟ್‌ನಲ್ಲಿ ಈ ಘಟನೆ ನಡೆದಿದೆ. ನಾಸಿಕ್‌ನಿಂದ ಮುಂಬೈಗೆ ಜೋಳ ತುಂಬಿದ ಟ್ರಕ್ ಹೋಗುತ್ತಿದ್ದ ವೇಳೆ ಆಯತಪ್ಪಿ ಪ್ರಪಾತಕ್ಕೆ ಬಿದ್ದಿದೆ. ಅಪಘಾತದಲ್ಲಿ ಟ್ರಕ್‌ನ ಕ್ಲೀನರ್ ಗಂಭೀರ ಗಾಯಗೊಂಡಿದ್ದಾರೆ ಎಂದು ಕಾಸರ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಪಘಾತದ ಸುದ್ದಿ ತಿಳಿದು ಸ್ಥಳೀಯ ವಿಪತ್ತು ಸೆಲ್ ತಂಡ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ನಂತರ ಚಾಲಕನ ಮೃತ ದೇಹ ಹಾಗೂ ಗಾಯಗೊಂಡ ಕ್ಲೀನರ್ ಅನ್ನು ವಾಹನದಿಂದ ಹೊರತೆಗೆದಿದ್ದಾರೆ. ಗಂಭೀರ ಗಾಯಗೊಂಡ ಕ್ಲೀನರ್‌ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸ್ ಹಿರಿಯ ಅಧಿಕಾರಿ ಹೇಳಿದರು. ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆ ಬಳಿಕ ಲವ್ ಜಿಹಾದ್ ನಿಷೇಧ ಕಾಯ್ದೆ: ಸುನಿಲ್ ಕುಮಾರ್

ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಟ್ರಕ್ ಅನ್ನು ಪ್ರಪಾತದಿಂದ ಹೊರತೆಗೆಯಲು ಪ್ರಯತ್ನಗಳು ನಡೆಯುತ್ತಿವೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಉಭಯ ಸದನಗಳಲ್ಲೂ ‘ಅಪ್ಪು’ ಗುಣಗಾನ

Leave a Reply

Your email address will not be published.

Back to top button