ಚಲಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕ ಬೆಂಕಿ- ಸುಟ್ಟು ಭಸ್ಮ

Public TV
1 Min Read
Truck Hassan fire

ಹಾಸನ: ಚಲಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ, ಲಾರಿ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಜಿಲ್ಲೆಯ ಸಕಲೇಶಪುರ ತಾಲೂಕಿನ ದೋಣಿಗಾಲ್ ಬಳಿ ನಡೆದಿದೆ.

ಮಂಗಳೂರು-ಬೆಂಗಳೂರು ಮಾರ್ಗದಲ್ಲಿ ಆಯಿಲ್ ತುಂಬಿಕೊಂಡು ಹೋಗಿತ್ತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಕಂಡ ತಕ್ಷಣ ಚಾಲಕ ಕೂಡಲೇ ಲಾರಿ ನಿಲ್ಲಿಸಿದ್ದಾನೆ. ಈ ವೇಳೆ ನೋಡ ನೋಡುತ್ತಿದ್ದಂತೆ ಲಾರಿಗೆ ಬೆಂಕಿ ತೀವ್ರವಾಗಿ ವ್ಯಾಪಿಸಿದ್ದು, ಸುಟ್ಟು ಹೋಗಿದೆ. ಪಬ್ಲಿಕ್‌ ಟಿವಿ ನೇರ ಪ್ರಸಾರ ವೀಕ್ಷಿಸಿ.

truck fire 2 e1629366537302

ಸ್ಥಳಕ್ಕೆ ಸಕಲೇಶಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಕಿಗೆ ಕಾರಣವೇನೆಂಬುದರ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಕಿ ಕಾಣಿಸಿಕೊಂಡ ತಕ್ಷಣ ಚಾಲಕ ಲಾರಿ ನಿಲ್ಲಿಸಿ, ಕೆಳಗೆ ಇಳಿದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

Share This Article
Leave a Comment

Leave a Reply

Your email address will not be published. Required fields are marked *