ಭೋಪಾಲ್: ನಿಲ್ಲಿಸಿದ್ದ 2 ಬಸ್‍ಗಳಿಗೆ (Bus) ಹಿಂಬದಿಯಿಂದ ಟ್ರಕ್ (Truck) ಡಿಕ್ಕಿ ಹೊಡೆದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡ ಘಟನೆ ಮಧ್ಯಪ್ರದೇಶದ (Madhya Pradesh) ಸಿಧಿಯಲ್ಲಿ ನಡೆದಿದೆ.
ಮೊಹಾನಿಯಾ ಸುರಂಗದ ಸಮೀಪ ಬರ್ಖಾಡ ಗ್ರಾಮದ ಬಳಿ ಈ ಘಟನೆ ನಡೆದಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರ ರ್ಯಾಲಿಯಿಂದ ಹಿಂದಿರುಗುತ್ತಿದ್ದ ಜನರು ಬಸ್‍ನಲ್ಲಿದ್ದರು.
ಆ ಎರಡು ಬಸ್ಸುಗಳು ನಿಂತಿದ್ದವು. ಹಿಂದಿನಿಂದ ಬರುತ್ತಿದ್ದ ಟ್ರಕ್‍ನ ಟೈರ್ ಸ್ಫೋಟಗೊಂಡಿದೆ. ಈ ವೇಳೆ ಟ್ರಕ್ ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ. ಈ ವೇಳೆ ಸುಮಾರು 50 ಮಂದಿ ಗಾಯಗೊಂಡಿದ್ದು, 8 ಮಂದಿ ಸಾವನ್ನಪ್ಪಿದ್ದಾರೆ.
ಅಪಘಾತದಲ್ಲಿ ಗಾಯಗೊಂಡವನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ಸಾಗಿಸಲಾಯಿತು. ಟ್ರಕ್‍ನಲ್ಲಿ ಟೈರ್ ಸ್ಫೋಟಗೊಂಡಿದ್ದರಿಂದ ಈ ದುರ್ಘಟನೆ ಸಂಭವಿಸಿದೆ. ಘಟನೆ ಕುರಿತು ಪೊಲೀಸರ ತನಿಖೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ವೃದ್ಧರಿಗೆ ಸಹಕರಿಸುವ ನೆಪದಲ್ಲಿ ವಂಚಿಸುತ್ತಿದ್ದ ಆರೋಪಿ ಬಂಧನ
सीधी (म.प्र) में हुआ सड़क हादसा अत्यंत दुःखद है। इस हादसे में जान गंवाने वाले लोगों के परिजनों के प्रति गहरी संवेदना व्यक्त करता हूँ। ईश्वर उन्हें यह दुःख सहने की शक्ति दें। प्रशासन द्वारा घायलों को उपचार उपलब्ध कराया जा रहा है। घायलों के शीघ्र स्वस्थ होने की प्रार्थना करता हूँ।
— Amit Shah (@AmitShah) February 24, 2023
ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮೀನು ಮೃತಪಟ್ಟಿದ್ದಕ್ಕೆ ಮನನೊಂದು 13ರ ಬಾಲಕ ಆತ್ಮಹತ್ಯೆ