ಬೆಂಗಳೂರು: ಹೆಣ್ಣೂರು ಬಂಡೆ ಮುಖ್ಯ ರಸ್ತೆಯಲ್ಲಿ ಶನಿವಾರ ರಾತ್ರಿ ಸಂಭವಿಸಿದ ಅಪಘಾತಕ್ಕೆ (Accident) 10 ವರ್ಷದ ಬಾಲಕ ಬಲಿಯಾಗಿದ್ದಾನೆ.
ದ್ವಿಚಕ್ರ ವಾಹನದಲ್ಲಿ ಅಣ್ಣನ ಜೊತೆ ಹೋಗುತ್ತಿದ್ದಾಗ ಹಿಂಬದಿಯಿಂದ ಏಕಾಏಕಿ ಟ್ರಕ್ ಡಿಕ್ಕಿ ಹೊಡೆದಿದೆ. ತಲೆಯ ಮೇಲೆ ಟ್ರಕ್‌ನ ಎರಡು ಚಕ್ರ ಹರಿದ ಪರಿಣಾಮ ಬಾಲಕನ (Boy) ಶಿರಭಾಗ ಛಿದ್ರಛಿದ್ರವಾಗಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಹೆಣ್ಣೂರು ಬಂಡೆಯ (Hennuru Bande) ಕ್ಲಾಸಿಕ್ ರಾಯಲ್ ಗಾರ್ಡನ್ ಮುಂಭಾಗದಲ್ಲಿ ಅಪಘಾತ ಸಂಭವಿಸಿದೆ . ಟ್ರಕ್ ಅತೀ ವೇಗವೇ ಕಾರಣ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಹೇಳಿದ್ದಾರೆ. ಇದನ್ನೂ ಓದಿ: ಮಂಡ್ಯ ರೈತರ ಬೆನ್ನುಬಿದ್ದ ವಕ್ಫ್ ಭೂತ – ಪುರಾತತ್ವ ಇಲಾಖೆ ಆಸ್ತಿ ಮೇಲೂ ಕಣ್ಣು
ಅಂಬೇಡ್ಕರ್ ಆಸ್ಪತ್ರೆಗೆ ಮೃತ ಬಾಲಕನ ದೇಹ ರವಾನೆ ಮಾಡಲಾಗಿದೆ. ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಬಾಲಕನ ಅಣ್ಣನಿಗೆ ಗಾಯವಾಗಿದ್ದು ಅಂಬೇಡ್ಕರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಹೆಣ್ಣೂರು ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.