ಮುಂಬೈ: ಪಾದಯಾತ್ರೆ ವೇಳೆ ಯಾತ್ರಾರ್ಥಿಗಳಿಗೆ ಜೀಪ್ ಡಿಕ್ಕಿಯಾಗಿ ಗಂಭೀರವಾಗಿರುವ ಘಟನೆ ಪುಣೆಯ ವಡಗಾವ್ ಮಾವೆಲ್ ಪ್ರದೇಶದಲ್ಲಿ ಮುಂಜಾನೆ ಸಂಭವಿಸಿದೆ.
ಆಳಂದಿಯಲ್ಲಿರುವ ವಿಠ್ಠಲನ ದರ್ಶನಕ್ಕೆ ಪಾದಯಾತ್ರೆ ಮೂಲಕ ತೆರಳುತ್ತಿದ್ದ ಭಕ್ತರ ಗುಂಪಿಗೆ ಜೀಪೊಂದು ಡಿಕ್ಕಿ ಹೊಡೆದ ಪರಿಣಾಮ ಇಪ್ಪತ್ತು ಮಂದಿ ಯಾತ್ರಾರ್ಥಿಗಳು ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆದಿದ್ದಾರೆ. ಇದನ್ನೂ ಓದಿ: ಹೊಸ ರೂಪಾಂತರಿ ವೈರಸ್ ಪೀಡಿತ ದೇಶಗಳಿಂದ ವಿಮಾನ ಹಾರಾಟ ನಿಲ್ಲಿಸಿ – ಮೋದಿಗೆ ಕೇಜ್ರಿವಾಲ್ ಮನವಿ
Advertisement
Advertisement
ಪುಣೆಯಿಂದ ಇಪ್ಪತೈದು ಕಿಲೋಮೀಟರ್ ದೂರದಲ್ಲಿರುವ ಆಳಂದಿ ವಿಠ್ಠಲ ದೇವಸ್ಥಾನಕ್ಕೆ ಭಕ್ತರ ತಂಡವೊಂದು ಪಾದಯಾತ್ರೆಯ ಮೂಲಕ ತೆರಳುತ್ತಿತ್ತು. ಈ ವೇಳೆ ರಸ್ತೆ ಬದಿ ನಡೆದುಕೊಂಡು ತೆರಳುತ್ತಿದ್ದ ಯಾತ್ರಾರ್ಥಿಗಳ ಗುಂಪಿಗೆ ಹಿಂದಿನಿಂದ ಬಂದ ಜೀಪೊಂದು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಸುಮಾರು 20 ಮಂದಿ ಗಾಯಗೊಂಡಿದ್ದಾರೆ. ಇವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಜೀಪ್ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ ಎಂದು ವಡ್ಗಾಂವ್ ಮಾವಲ್ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಕೊರೊನಾ ಹೊಸ ವೈರಸ್ B.1.1.529 ಪತ್ತೆ – ಭಾರತದಲ್ಲಿ ಆತಂಕ