ಬೀದರ್: ತುಳಜಾಪುರ ಅಂಬಾಭವಾನಿ ದೇವಿ ದರ್ಶನಕ್ಕೆ ಪಾದಯಾತ್ರೆ ಹೊರಟಿದ್ದ ಇಬ್ಬರು ಮಹಿಳಾ ಭಕ್ತಾರ ಮೇಲೆ ಲಾರಿ ಹರಿದು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹುಮ್ನಾಬಾದ್ ಪಟ್ಟಣದ ಹೊರ ವಲಯದ ಎನ್‍ಎಚ್-9ರಲ್ಲಿ ನಡೆದಿದೆ.
ಲಕ್ಷ್ಮೀ ವೆಂಕಟಗೌಡ (40), ಗೌರಮ್ಮ ಸಂಗಮೇಶ್ (30) ಸಾವನ್ನಪ್ಪಿದ ಮಹಿಳಾ ಭಕ್ತಾದಿಗಳು. ರಸ್ತೆ ಪಕ್ಕದಲ್ಲಿ ಹೊರಟಿದ್ದ ಭಕ್ತಾದಿಗಳ ಮೇಲೆ ಲಾರಿ ಹರಿದಿದೆ. ಪರಿಣಾಮ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ ನಾಲ್ಕು ಜನರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದ ಬಳಿಕ ಚಾಲಕ ಲಾರಿಯನ್ನು ನಿಲ್ಲಿಸದೇ ಪರಾರಿಯಾಗಿದ್ದಾನೆ. ಮೃತರು ತೆಲಂಗಾಣ ರಾಜ್ಯದವರು ಎಂದು ತಿಳಿದುಬಂದಿದೆ. ಈ ಸಂಬಂಧ ಹುಮ್ನಾಬಾದ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.