ಮುಂಬೈ: ಅಪಘಾತವಾಗಿದ್ದ ಕಾರನ್ನು ತೆರವು ಮಾಡುತ್ತಿದ್ದವರ ಮೇಲೆ ಟ್ರಕ್ ಹರಿದು ಆರು ಜನರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ (Maharashtra) ಬೀಡ್ ಜಿಲ್ಲೆಯಲ್ಲಿ ನಡೆದಿದೆ.
ಮೃತರನ್ನು ಬೀಡ್‌ನ ಜಿಯೋರೈ ನಿವಾಸಿಗಳಾದ ಬಾಲು ಅಟ್ಕರೆ, ಭಾಗವತ್ ಪರಲ್ಕರ್, ಸಚಿನ್ ನನ್ನಾವ್ರೆ, ಮನೋಜ್ ಕರಂಡೆ, ಕೃಷ್ಣ ಜಾಧವ್ ಮತ್ತು ದೀಪಕ್ ಸುರಯ್ಯ ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಬಿಜೆಪಿಯಿಂದ ಎಸ್‌ಟಿ ಸೋಮಶೇಖರ್, ಶಿವರಾಂ ಹೆಬ್ಬಾರ್ ಉಚ್ಚಾಟನೆ
ಸೋಮವಾರ ರಾತ್ರಿ 8:30ರ ಸುಮಾರಿಗೆ ದೀಪಕ್ ಅಟ್ಕರೆ ಚಲಾಯಿಸಿಕೊಂಡು ಹೋಗುತ್ತಿದ್ದ ಕಾರು, ಬೀಡ್ ಗ್ರಾಮದಿಂದ 100 ಕಿ.ಮೀ ದೂರದಲ್ಲಿರುವ ರಾಷ್ಟ್ರೀಯ ಹೆದ್ದಾರಿ-52ರ ಡಿವೈಡರ್ ಬಳಿ ಅಪಘಾತಕ್ಕೀಡಾಯಿತು. ಅವಘಡವನ್ನು ನೋಡಿದ ಕೆಲವರು ಕಾರನ್ನು ರಸ್ತೆಯಿಂದ ತೆಗೆಯುತ್ತಿದ್ದರು. 11:30ರ ಸುಮಾರಿಗೆ ವೇಗವಾಗಿ ಬಂದ ಟ್ರಕ್, ತೆರವುಗೊಳಿಸುತ್ತಿದ್ದವರ ಮೇಲೆ ಹಾದು ಹೋಗಿದೆ. ಪರಿಣಾಮ ಆರು ಜನರು ಸಾವನ್ನಪ್ಪಿದ್ದು, ಒಬ್ಬರು ಗಾಯಗೊಂಡಿದ್ದಾರೆ.
ಸದ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ ಹಾಗೂ ಟ್ರಕ್ ಚಾಲಕನನ್ನು ಪತ್ತೆ ಹಚ್ಚುವಲ್ಲಿ ನಿರತರಾಗಿದ್ದಾರೆ.ಇದನ್ನೂ ಓದಿ: ಮ್ಯಾನೇಜರ್ ಮೇಲೆ ಹಲ್ಲೆ- ನಟ ಉನ್ನಿ ಮುಕುಂದನ್ ವಿರುದ್ಧ ಕೇಸ್