ಚಿಕ್ಕಬಳ್ಳಾಪುರ: ಎರಡು ಟ್ರಕ್ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಓರ್ವ ಚಾಲಕ ಮೃತ ಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಹುಲಿಕುಂಟೆ ಸಮೀಪದ ದ್ಯಾವಸಂದ್ರ ಗೇಟ್ ಬಳಿ ನಡೆದಿದೆ.
ತುಮಕೂರಿನ ಕಡೆಗೆ ಸಾಗುತ್ತಿದ್ದ ಜಾರ್ಖಂಡ್ ಮೂಲದ ಟಾಟಾ ಟ್ರಕ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮತ್ತೊಂದು ಟ್ರಕ್ ನವತಾ ಟ್ರಾನ್ಸ್ಪೋರ್ಟ್ ವಾಹನದ ಸವಾರ ತೀವ್ರವಾಗಿ ಗಾಯಗೊಂಡಿದ್ದಾರೆ. ಇದನ್ನೂ ಓದಿ : ಯಶ್ ಮುಂದಿನ ಸಿನಿಮಾ ನರ್ತನ್ ಜೊತೆ ಫಿಕ್ಸ್ : ಘೋಷಣೆಯೊಂದೇ ಬಾಕಿ
ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಇನ್ಸ್ಪೆಕ್ಟರ್ ಜ್ಞಾನಮೂರ್ತಿ ನೇತೃತ್ವದಲ್ಲಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಕ್ರೇನ್ ಬಳಸಿ ಅಪಘಾತಕ್ಕೆ ಒಳಗಾಗಿದ್ದ ಟ್ರಕ್ಗಳನ್ನು ರಸ್ತೆಯಿಂದ ತೆರವುಗೊಳಿಸಿದ್ದಾರೆ.