ಲಕ್ನೋ: ಮಹಾತ್ಮ ಗಾಂಧಿಯನ್ನು (Mahatma Gandhi) ಗುಂಡಿಕ್ಕಿ ಕೊಂದ ನಾಥುರಾಮ್ ಗೋಡ್ಸೆಯನ್ನು ಆರಾಧಿಸುವವರನ್ನು ಎಂದಿಗೂ ನಂಬಲು ಸಾಧ್ಯವಿಲ್ಲ. ಹೀಗಾಗಿ ಮುಸ್ಲಿಮರು ಎಂದಿಗೂ ಬಿಜೆಪಿಗೆ ಮತ ಹಾಕಲು ಸಾಧ್ಯವಿಲ್ಲ ಎಂದು ಸಮಾಜವಾದಿ ಪಕ್ಷದ (Samajwadi Party) ಸಂಭಾಲ್ (Sambhal) ಶಾಸಕ ಇಕ್ಬಾಲ್ ಮೊಹಮೂದ್ (Iqbal Mehmood) ಹೇಳಿದ್ದಾರೆ.
ಇದೇ ವೇಳೆ ಅಸಾದುದ್ದೀನ್ ಓವೈಸಿ (Asaduddin Owaisi) ನೇತೃತ್ವದ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (All India Majlis-e-Ittehadul Muslimeen) (ಎಐಎಂಐಎಂ) ಅನ್ನು ಬಿಜೆಪಿಯ ಬಿ ಟೀಮ್ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಬೆಲೆ ನಿಗದಿ ಪಡಿಸಿ ಎಂದು ಸರ್ಕಾರವನ್ನು ಒತ್ತಾಯಿಸಿದ 100ಕ್ಕೂ ಅಧಿಕ ರೈತರು ವಶಕ್ಕೆ
ಇತ್ತೀಚೆಗಷ್ಟೇ ಲಕ್ನೋದಲ್ಲಿ ಪಸ್ಮಾಂಡ ಮುಸ್ಲಿಮರೊಂದಿಗೆ ಬಿಜೆಪಿ ಸಭೆ ನಡೆಸಿತ್ತು. ಈ ಕುರಿತಂತೆ ಪ್ರತಿಕ್ರಿಯಿಸಿದ ಅವರು, “ನಿಜವಾದ ಮುಸ್ಲಿಂ ಎಂದಿಗೂ ಬಿಜೆಪಿಗೆ ಮತ ಹಾಕಲು ಸಾಧ್ಯವಿಲ್ಲ. ಏಕೆಂದರೆ ಬಿಜೆಪಿ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಎಂದಿಗೂ ಮುಸ್ಲಿಮರಾಗಲು ಸಾಧ್ಯವಿಲ್ಲ. ಮಹಾತ್ಮ ಗಾಂಧಿಯ ಕೊಂದ ನಾಥುರಾಮ್ ಗೋಡ್ಸೆಯನ್ನು (Nathuram Godse) ಆರಾಧಿಸುವ ಜನರನ್ನು ಮುಸ್ಲಿಮರು ಎಂದಿಗೂ ನಂಬುವುದಿಲ್ಲ ಎಂದು ಹೇಳಿದ್ದಾರೆ.
ಬಹುಜನ ಸಮಾಜ ಪಕ್ಷದ (ಬಿಎಸ್‍ಪಿ) ಮುಖ್ಯಸ್ಥೆ ಮಾಯಾವತಿ ಅವರು ಸಿಬಿಐ ಮತ್ತು ಇಡಿಯಂತಹ ಕೇಂದ್ರೀಯ ಸಂಸ್ಥೆಗಳಿಗೆ ಹೆದರುತ್ತಿದ್ದಾರೆ. ಹಾಗಾಗಿ ಅವರು ಬಿಜೆಪಿ ವಿರುದ್ಧ ಎಂದಿಗೂ ಮಾತನಾಡುವುದಿಲ್ಲ. ಆದರೆ ಬಿಜೆಪಿ ವಿರುದ್ಧ ಹೋರಾಡುತ್ತಿರುವ ಏಕೈಕ ಪಕ್ಷ ಎಂದರೆ ಅದು ಸಮಾಜವಾದಿ ಪಕ್ಷ ಎಂದು ಪ್ರತಿಪಾದಿಸಿದ್ದಾರೆ. ಇದನ್ನೂ ಓದಿ: ಸಮಾಜದಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡ್ತಿದ್ದಾರೆ – ಚೇತನ್ ವಿರುದ್ಧ ಮಡಿಕೇರಿಯಲ್ಲಿ ದೂರು ದಾಖಲು