Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾರತದ ಮೇಲಿನ ಸುಂಕ 18% ಗೆ ಇಳಿಕೆ – 500 ಶತಕೋಟಿ ಡಾಲರ್‌ ಒಪ್ಪಂದ ಘೋಷಿಸಿದ ಟ್ರಂಪ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಭಾರತದ ಮೇಲಿನ ಸುಂಕ 18% ಗೆ ಇಳಿಕೆ – 500 ಶತಕೋಟಿ ಡಾಲರ್‌ ಒಪ್ಪಂದ ಘೋಷಿಸಿದ ಟ್ರಂಪ್‌

Latest

ಭಾರತದ ಮೇಲಿನ ಸುಂಕ 18% ಗೆ ಇಳಿಕೆ – 500 ಶತಕೋಟಿ ಡಾಲರ್‌ ಒಪ್ಪಂದ ಘೋಷಿಸಿದ ಟ್ರಂಪ್‌

Public TV
Last updated: February 3, 2026 6:57 am
Public TV
Share
3 Min Read
Narendra Modi Donald Trump
SHARE

– ಪ್ರಧಾನಿ ಮೋದಿ ಸಂತಸ

ವಾಷಿಂಗ್ಟನ್‌/ನವದೆಹಲಿ: ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೂರವಾಣಿಯಲ್ಲಿ ಮಾತುಕತೆ ನಡೆಸಿದ ಬಳಿಕ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಬೃಹತ್‌ ವ್ಯಾಪಾರ ಒಪ್ಪಂದ ಘೋಷಣೆ ಮಾಡಿದ್ದಾರೆ. ಜೊತೆಗೆ ಭಾರತದ ಮೇಲಿನ ಪ್ರತಿ ತೆರಿಗೆ ಭಾರವನ್ನ 25% ನಿಂದ 18% ಗೆ ಇಳಿಸಿರುವುದಾಗಿ ತಿಳಿಸಿದ್ದಾರೆ.

Wonderful to speak with my dear friend President Trump today. Delighted that Made in India products will now have a reduced tariff of 18%. Big thanks to President Trump on behalf of the 1.4 billion people of India for this wonderful announcement.

When two large economies and the…

— Narendra Modi (@narendramodi) February 2, 2026

ಹೌದು. ಪ್ರಧಾನಿ ಮೋದಿ ಜೊತೆಗಿನ ಮಾತುಕತೆ ಬಳಿಕ ತನ್ನ ಸೋಷಿಯಲ್‌ ಮೀಡಿಯಾ ವೇದಿಕೆ ಟ್ರುತ್‌ ಸೋಷಿಯಲ್‌ನಲ್ಲಿ ಟ್ರಂಪ್‌ ಸುದೀರ್ಘ ಮಾಹಿತಿ ಹಂಚಿಕೊಂಡಿದ್ದಾರೆ. ಅಮೆರಿಕ ಭಾರತದ ಮೇಲಿನ ಸುಂಕವನ್ನ 25% ನಿಂದ 18% ಗೆ ಇಳಿಕೆ ಮಾಡಿದೆ. ವ್ಯಾಪಾರ ಒಪ್ಪಂದ, ರಷ್ಯಾ ಉಕ್ರೇನ್‌ ಯುದ್ಧ ಸೇರಿದಂತೆ ಹಲವಾರು ವಿಷಯಗಳನ್ನು ಚರ್ಚಿಸಿದ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಟ್ರಂಪ್‌ ಹೇಳಿದ್ದಾರೆ.

Trump

ಅಲ್ಲದೇ, ಪ್ರಧಾನಿ ಮೋದಿ ಜೊತೆಗೆ ಮಾತನಾಡುವುದು ಗೌರವದ ಸಂಗತಿ. ಅವರು ನನ್ನ ಆಪ್ತರಲ್ಲಿ ಒಬ್ಬರು. ಮೋದಿ ಭಾರತದ ಪ್ರಬಲ ಮತ್ತು ಗೌರವಾನ್ವಿತ ನಾಯಕ. ವ್ಯಾಪಾರ ಮತ್ತು ರಷ್ಯಾ-ಉಕ್ರೇನ್ ಯುದ್ಧ ಕೊನೆಗೊಳಿಸುವುದು ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ನಾವು ಇಂದು ಚರ್ಚಿಸಿದ್ದೇವೆ ಎಂದು ತಿಳಿಸಿದ್ದಾರೆ.

500 ಶತಕೋಟಿ ಡಾಲರ್‌ ಒಪ್ಪಂದ
ಮುಂದುವರಿದು… ಭಾರತ ರಷ್ಯಾದಿಂದ ತೈಲ ಖರೀದಿ ಮಾಡುವುದನ್ನು ನಿಲ್ಲಿಸಿದೆ. ಪ್ರಧಾನಿ ಮೋದಿ ಕೂಡ ಒಪ್ಪಿಕೊಂಡಿದ್ದಾರೆ. ಭಾರತ ಇನ್ಮುಂದೆ ಅಮೆರಿಕ ಮತ್ತು ವೆನೆಜುವೆಲಾದಿಂದ ಹೆಚ್ಚಿನ ತೈಲ ಖರೀದಿ ಮಾಡಲಿದೆ. ಇದು ಉಕ್ರೇನ್‌ ವಿರುದ್ಧದ ಯುದ್ಧ ಕೊನೆಗೊಳಿಸಲು ಸಹಾಯ ಮಾಡುತ್ತದೆ. ಹೀಗಾಗಿ ಭಾರತದ ಮೇಲಿನ ಸುಂಕವನ್ನ 25% ನಿಂದ 18% ಗೆ ಇಳಿಕೆ ಮಾಡಿದೆ. ಜೊತೆಗೆ ಕೃಷಿ ಇಂಧನ, ಕಲ್ಲಿದ್ದಲು, ತಂತ್ರಜ್ಞಾನ ಸೇರಿದಂತೆ 500 ಶತಕೋಟಿ ಡಾಲರ್‌ ವ್ಯಾಪರಕ್ಕೆ ಒಪ್ಪಂದವಾಗಿದೆ. ಪ್ರತಿಯಾಗಿ ಭಾರತವು ಅಮೆರಿಕದ ಉತ್ಪನ್ನಗಳ ಮೇಲಿನ ತನ್ನ ಸುಂಕವನ್ನ ಶೂನ್ಯಕ್ಕೆ ಇಳಿಸುವ ನಿರೀಕ್ಷೆಯಿದೆ. ಜೊತೆಗೆ ಇತರ ಅಡೆತಡೆಗಳನ್ನೂ ನಿವಾರಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

trump tariffs

ಟ್ರಂಪ್ ಹಾಕಿದ್ದ ಸುಂಕಗಳು ಯಾವುದು?
10% ಮೂಲ ಸುಂಕ:
ಏಪ್ರಿಲ್ 2025 ರಿಂದ ಬಹುತೇಕ ಎಲ್ಲಾ ಅಮೆರಿಕದ ಆಮದುಗಳಿಗೆ ಅನ್ವಯಿಸಲಾದ ಸಾಮಾನ್ಯ ಸುಂಕ.

15% ಪ್ರತಿ ಸುಂಕ:
ಅಮೆರಿಕ ಉತ್ಪನ್ನಗಳ ಮೇಲೆ ಭಾರತವು ತನ್ನದೇ ಆದ ಹೆಚ್ಚಿನ ಸುಂಕ ಹಾಕಿದ್ದಕ್ಕೆ ವಿಧಿಸಿದ ಸುಂಕ.

25% ದಂಡ ಸುಂಕ:
ಆಗಸ್ಟ್ 27, 2025 ರಂದು ಹೆಚ್ಚುವರಿ ಸುಂಕವನ್ನು ಹಾಕಲಾಗುತ್ತಿದೆ. ನಿರ್ದಿಷ್ಟವಾಗಿ ರಷ್ಯಾದ ತೈಲ ಆಮದುಗಳನ್ನು ನಿಲ್ಲಿಸಲು ಭಾರತ ನಿರಾಕರಿಸಿದ್ದಕ್ಕೆ ದಂಡದ ರೂಪದಲ್ಲಿ ಹಾಕಲಾಗುತ್ತಿದೆ. ಹೀಗಾಗಿ ಒಟ್ಟು 50% ಸುಂಕವನ್ನು ಅಮೆರಿಕ ಭಾರತದ ಕೆಲ ವಸ್ತುಗಳಿಗೆ ವಿಧಿಸಿತ್ತು.

trump modi

ಹೆಚ್ಚುವರಿ ಸುಂಕ ವಿಧಿಸಿದ್ದು ಏಕೆ?
ಭಾರತವು ರಷ್ಯಾದಿಂದ ಕಚ್ಚಾತೈಲ ಖರೀದಿ ಮಾಡುವ ಮೂಲಕ ಉಕ್ರೇನ್‌ ವಿರುದ್ಧದ ಯುದ್ಧಕ್ಕೆ ಫಂಡಿಂಗ್‌ ಮಾಡುತ್ತಿದೆ ಅನ್ನೋದು ಟ್ರಂಪ್‌ ಅವರ ಬಲವಾದ ಆರೋಪ ಆಗಿತ್ತು. ಅದಕ್ಕಾಗಿಯೇ ಮೊದಲು 25% ಸುಂಕ ವಿಧಿಸಿ, ನಂತರ 50% ಗೆ ಏರಿಸಿದ್ದರು ಟ್ರಂಪ್‌. ಪಾಕಿಸ್ತಾನಕ್ಕೆ 19% ಸುಂಕ ವಿಧಿಸಿದ್ದರು. ಇದೀಗ ಪಾಕ್‌ಗಿಂತಲೂ 1% ಸುಂಕವನ್ನ ಇಳಿಕೆ ಮಾಡಿದ್ದಾರೆ.

TAGGED:American Ambassadordonald trumpindialowers tariffsnarendra modiSergio GorTrade dealUS Presidentಅಮೆರಿಕಡೊನಾಲ್ಡ್ ಟ್ರಂಪ್ನರೇಂದ್ರ ಮೋದಿಶ್ವೇತಭವನ
Share This Article
Facebook Whatsapp Whatsapp Telegram

Cinema news

Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories

You Might Also Like

Hezbollah new chief Sheikh Naim Qassem
Latest

ಇಸ್ರೇಲ್ ದಾಳಿಗೆ ಹಿಜ್ಬುಲ್ಲಾ ಮುಖ್ಯಸ್ಥನ ಸಹಾಯಕ ಮಟಾಶ್

Public TV
By Public TV
30 minutes ago
pm modi
Latest

ಬಂಗಾಳದ ಜನತೆಗೆ ಪ್ರಧಾನಿ ಮೋದಿ 6 ಗ್ಯಾರಂಟಿ ಘೋಷಣೆ

Public TV
By Public TV
59 minutes ago
David Miller
Latest

ಸಿಕ್ಸ್‌ ಬದಲು ಬೌಂಡರಿ ನೀಡಿದ್ದರಿಂದ ಡೆಲ್ಲಿಗೆ ಸೋಲು – ಏನಿದು ವಿವಾದ?

Public TV
By Public TV
1 hour ago
R.Ashwin David Miller
Cricket

ನಿಮ್ಮ ನಿರ್ಧಾರ ತಂಡದ ಆತ್ಮವಿಶ್ವಾಸ ಕುಗ್ಗಿಸಿದೆ: ಮಿಲ್ಲರ್‌ ವಿರುದ್ಧ ಆರ್‌.ಅಶ್ವಿನ್‌ ಬೇಸರ

Public TV
By Public TV
1 hour ago
mentally ill woman spends 10 days with husbands decomposing body in chikkamagaluru
Chikkamagaluru

ಚಿಕ್ಕಮಗಳೂರಲ್ಲೊಂದು ಮನಕಲಕುವ ಘಟನೆ – ಪತಿ ಮೃತದೇಹದ ಜೊತೆ 10 ದಿನ ಕಳೆದ ಮಾನಸಿಕ ಅಸ್ವಸ್ಥ ಮಹಿಳೆ

Public TV
By Public TV
2 hours ago
Traffic fine 1
Kalaburagi

ಕಲಬುರಗಿಯಲ್ಲಿ ಪುದುಚೇರಿ ವಾಹನ ನೋಂದಣಿಗೆ 2 ಕೋಟಿ ದಂಡ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?