ಹಷ್‌ ಮನಿ ಪ್ರಕರಣದಲ್ಲಿ ಅಮೆರಿಕ ಮಾಜಿ ಅಧ್ಯಕ್ಷ ಟ್ರಂಪ್‌ ದೋಷಿ: ಕೋರ್ಟ್‌ ತೀರ್ಪು

Public TV
1 Min Read
Donald Trump 2

– ಅಪರಾಧ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಮೊದಲ ಅಮೆರಿಕ ಮಾಜಿ ಅಧ್ಯಕ್ಷ

ನ್ಯೂಯಾರ್ಕ್‌: ಹಷ್‌ ಮನಿ (Hush Money Case) ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಅವರನ್ನು ದೋಷಿ ಎಂದು ನ್ಯೂಯಾರ್ಕ್‌ ನ್ಯಾಯಾಲಯ ಘೋಷಿಸಿದೆ. ಅಪರಾಧ ಪ್ರಕರಣವೊಂದರಲ್ಲಿ ಶಿಕ್ಷೆಗೊಳಗಾದ ಮೊದಲ ಯುಎಸ್‌ ಮಾಜಿ ಅಧ್ಯಕ್ಷ ಎಂಬ ಅಪಖ್ಯಾತಿಗೆ ಟ್ರಂಪ್‌ ಒಳಗಾಗಿದ್ದಾರೆ.

ಪ್ರಕರಣದಲ್ಲಿ ಎಲ್ಲಾ 34 ಆರೋಪಗಳಲ್ಲಿಯೂ ಟ್ರಂಪ್‌ ದೋಷಿ ಎಂದು ನ್ಯೂಯಾರ್ಕ್‌ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಜಾಮೀನು ಇಲ್ಲದೇ ಬಿಡುಗಡೆಯಾಗಿದ್ದ ಟ್ರಂಪ್‌ ಈಗ ಅಪರಾಧಿಯಾಗಿದ್ದಾರೆ. ಇದನ್ನೂ ಓದಿ: ಸಿಕ್ಕಿಂನಿಂದ 150 ಕಿಮೀ ದೂರದ ಗಡಿಯಲ್ಲಿ ಚೀನಾ ಅತ್ಯಾಧುನಿಕ ಫೈಟರ್ ಜೆಟ್ ನಿಯೋಜನೆ!

Donald Trump 3

ಅಮೆರಿಕ ಅಧ್ಯಕ್ಷೀಯ ಚುನಾವಣೆ ಸಮೀಪಿಸುತ್ತಿದೆ. ರಿಪಬ್ಲಿಕನ್‌ ಪಕ್ಷದ ನಾಯಕ ಮತ್ತೆ ಅಧ್ಯಕ್ಷ ಸ್ಥಾನಕ್ಕೆ ಏರಬಹುದು ಎನ್ನಲಾಗಿತ್ತು. ಈ ಸಂದರ್ಭದಲ್ಲಿ ಪ್ರಕರಣವೊಂದರಲ್ಲಿ ದೋಷಿಯಾಗಿದ್ದಾರೆ. ‘ನಾನು ತುಂಬಾ ಮುಗ್ಧ ಮನುಷ್ಯ. ನಿಜವಾದ ತೀರ್ಪು ಮತದಾರರಿಂದ ಬರಲಿದೆ’ ಎಂದು ಟ್ರಂಪ್‌ ಪ್ರತಿಕ್ರಿಯಿಸಿದ್ದಾರೆ.

ಟ್ರಂಪ್‌ ಅವರು ನಟಿ ಸ್ಟಾರ್ಮಿ ಡೇನಿಯಲ್ಸ್‌ಗೆ ಹಣ ಪಾವತಿಸಿದ ಆರೋಪಕ್ಕೆ ಸಂಬಂಧಿಸಿ ‘ಹಷ್‌ ಮನಿ’ ಪ್ರಕರಣದಲ್ಲಿ ಕಾನೂನು ಸಂಕಷ್ಟ ಎದುರಿಸುತ್ತಿದ್ದರು. ಗೌಪ್ಯತೆ ಕಾಪಾಡಲು ನೀಡಿದ ಹಣಕ್ಕೆ ಹಷ್‌ ಮನಿ ಎನ್ನಲಾಗುತ್ತದೆ. ಇದನ್ನೂ ಓದಿ: ಬಲೂನ್‌ಗಳಿಗೆ ಕಸ ಕಟ್ಟಿ ದಕ್ಷಿಣ ಕೊರಿಯಾಗೆ ರವಾನಿಸಿದ ಉತ್ತರ ಕೊರಿಯಾ!

ಸ್ಟಾರ್ಮಿ ಜೊತೆಗೆ 2006 ರಲ್ಲಿ ಟ್ರಂಪ್‌ ಲೈಂಗಿಕ ಸಂಬಂಧ ಹೊಂದಿದ್ದರು. ಈ ಸಂಬಂಧ ಮೌನವಾಗಿರಲು ಸ್ಟಾರ್ಮಿ ಅವರಿಗೆ ಟ್ರಂಪ್‌ ತಮ್ಮ ವಕೀಲರ ಮೂಲಕ ಹಣ ನೀಡಿದ್ದರು ಎಂಬ ಆರೋಪ ಇತ್ತು. ಈ ಸಂಬಂಧ ವಿಚಾರಣೆ ಮಾಜಿ ಅಧ್ಯಕ್ಷ ಎದುರಿಸುತ್ತಿದ್ದರು.

2016 ರ ಅಧ್ಯಕ್ಷೀಯ ಚುನಾವಣೆ ಮೇಲೆ ಈ ಪ್ರಕರಣ ಪ್ರಭಾವ ಬೀರಬಹುದು ಎಂಬ ಕಾರಣಕ್ಕೆ ನಟಿಗೆ ಟ್ರಂಪ್‌ ಹಣ ನೀಡಿದ್ದರು ಎಂದು ಆರೋಪಿಸಲಾಗಿತ್ತು. ಈ ಆರೋಪಗಳನ್ನು ಅವರು ನಿರಾಕರಿಸಿದ್ದರು.

Share This Article