ವಾಷಿಂಗ್ಟನ್: ಅಮೆರಿಕ ಅಧ್ಯಕ್ಷರಾದ ಬಳಿಕ ಡೊನಾಲ್ಡ್ ಟ್ರಂಪ್ (Donald Trump) ಮೊದಲ ಬಾರಿಗೆ ರಂಜಾನ್ ಹಬ್ಬದ ಪ್ರಯುಕ್ತ ಇಫ್ತಾರ್ ಕೂಟ ಆಯೋಜಿಸಿದ್ದರು. ಆದ್ರೆ ಇಫ್ತಾರ್ ಕೂಟಗಳಲ್ಲಿ ಅಮೆರಿಕನ್ ಮುಸ್ಲಿಂ ಸಂಸದರು ಹಾಗೂ ಸಮುದಾಯದ ಮುಖಂಡರಿಗೆ ಆಹ್ವಾನ ನೀಡಿಲ್ಲ ಎಂದು ಟ್ರಂಪ್ ವಿರುದ್ಧ ಅಮೆರಿಕದ ಮುಸ್ಲಿಮರು (US Muslims) ಆಕ್ರೋಶ ಹೊರಹಾಕಿದ್ದಾರೆ.
ಶ್ವೇತಭವನದಲ್ಲಿ ಇಫ್ತಾರ್ ಕೂಟ ಆಯೋಜಿಸಿದ್ದ ಟ್ರಂಪ್, ಇಸ್ಲಾಂ ಧರ್ಮದ ಪವಿತ್ರ ತಿಂಗಳು ರಂಜಾನ್ ಅನ್ನು ಆಚರಿಸುತ್ತಾ ಬಂದಿದ್ದೇವೆ. ಇದು ವಿಶ್ವದಾದ್ಯಂತ ಮುಸ್ಲಿಂ ಬಾಂಧವರಿಗೆ ಪುಣ್ಯ ಸಂಪಾದಿಸುವ ಮಾಸವಾಗಿದೆ. ಅದಕ್ಕಾಗಿ ವಿಶ್ವದ ಅತ್ಯುತ್ತಮ ಧರ್ಮಗಳಲ್ಲಿ ಒಂದಾಗಿರುವ ಮುಸ್ಲಿಂ ಧರ್ಮವನ್ನು ಗೌರವಿಸುತ್ತೇವೆ ಎಂದರಲ್ಲದೇ ಮುಸ್ಲಿಮರಿಗೆ ರಂಜಾನ್ ಪ್ರಯುಕ್ತ ಶುಭ ಕೋರಿದ್ದಾರೆ. ಇದನ್ನೂ ಓದಿ: ಅಮೆರಿಕ ಜೊತೆಗಿನ ಹಳೆಯ ಸಂಬಂಧಗಳು ಮುಗಿದಿವೆ – ಸುಂಕದ ಬರೆ ಬೆನ್ನಲ್ಲೇ ಕೆನಡಾ ಪ್ರಧಾನಿ ಹೇಳಿಕೆ
ಶ್ವೇತಭವನದಲ್ಲಿ ಇಫ್ತಾರ್ ಕೂಟ ಆಯೋಜಿಸುವುದಕ್ಕೆ ಎರಡು ದಶಕಗಳ ಹಿಂದಿನ ಸಂಪ್ರದಾಯವಿದೆ. ಈ ಬಾರಿ ಆಯೋಜಿಸಿದ್ದ ಇಫ್ತಾರ್ ಕೂಟ ವಿವಾದಕ್ಕೆ ಕಾರಣವಾಗಿದೆ. ಕೂಟದಲ್ಲಿ ಅಮೆರಿಕನ್ ಮುಸ್ಲಿಂ ಸಂಸದರು, ಸಮುದಾಯಕ್ಕೆ ಸಂಬಂಧಿಸಿದ ಮುಖಂಡರನ್ನು ಆಹ್ವಾನಿಸಿಲ್ಲ. ಬದಲಾಗಿ ಮುಸ್ಲಿಂ ರಾಷ್ಟ್ರಗಳ ವಿದೇಶಿ ರಾಯಭಾರಿಗಳನ್ನು ಇಫ್ತಾರ್ ಕೂಟಕ್ಕೆ ಆಹ್ವಾನಿಸಲಾಗಿತ್ತು ಎಂದು ಆಕ್ರೋಶ ವ್ಯಕ್ತವಾಗಿದೆ. ಇದನ್ನೂ ಓದಿ: ವಿದೇಶಿ ಕಾರುಗಳ ಮೇಲೆ ಶೇ.25 ಸುಂಕ – ಟ್ರಂಪ್ ಮತ್ತೆ ಹೊಸ ಬಾಂಬ್
ಇಲ್ಲಿನ ಮುಸ್ಲಿಂ ನಾಗರಿಕ ಹಕ್ಕುಗಳ ಗುಂಪುಗಳು ಶ್ವೇತಭವನದ ಎದುರು ಪ್ರತಿಭಟನೆ ನಡೆಸಿದ್ದು ತೀವ್ರ ಅಸಮಾಧಾನ ಹೊರಹಾಕಿವೆ. ಇದು ಟ್ರಂಪ್ ಅವರ ಬೂಟಾಟಿಕೆ. ಒಂದೆಡೆ ಮಸ್ಲಿಂ ದೇಶಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಮತ್ತೊಂದೆಡೆ ಇಫ್ತಾರ್ ಕೂಟ ಆಯೋಜಿಸುತ್ತಾರೆ ಎಂದು ಕಿಡಿ ಕಾರಿವೆ. ಇದನ್ನೂ ಓದಿ: ಭಾರತಕ್ಕಿಂತಲೂ ನಾವು ಹಿಂದಿದ್ದೇವೆ – ಚುನಾವಣಾ ವ್ಯವಸ್ಥೆಯನ್ನೇ ಬದಲಿಸಲು ಮುಂದಾದ ಟ್ರಂಪ್
1996 ರಲ್ಲಿ ಅಂದಿನ ಯುಎಸ್ ಅಧ್ಯಕ್ಷ ಬಿಲ್ ಕ್ಲಿಂಟನ್ ಅವರ ಅಧಿಕಾರಾವಧಿಯಲ್ಲಿ, ಶ್ವೇತಭವನದಲ್ಲಿ ಇಫ್ತಾರ್ ಕೂಟ ಪ್ರಾರಂಭಿಸಲಾಯಿತು, ಇದನ್ನು ನಂತರದ ಅಧ್ಯಕ್ಷರಾದ ಜಾರ್ಜ್ ಬುಷ್ ಮತ್ತು ಬರಾಕ್ ಒಬಾಮಾ ಕೂಡ ಮುಂದುವರಿಸಿದ್ದರು. ಈ ಇಫ್ತಾರ್ ಕೂಟದಲ್ಲಿ ಮುಸ್ಲಿಂ ಸಮುದಾಯದ ಗಣ್ಯರು ಹಾಗೂ ಮುಸ್ಲಿಂ ರಾಷ್ಟ್ರಗಳ ರಾಜತಾಂತ್ರಿಕರು ಮತ್ತು ಸೆನೆಟರ್‌ಗಳು ಭಾಗವಹಿಸುವುದು ಪದ್ಧತಿ. ಆದ್ರೆ ಟ್ರಂಪ್ ತಮ್ಮ ಮೊದಲ ಅಧ್ಯಕ್ಷೀಯ ಅವಧಿಯಲ್ಲಿ 2017ರಲ್ಲಿ ಶ್ವೇತಭವನದ ಇಫ್ತಾರ್ ಕೂಟವನ್ನು ರದ್ದುಗೊಳಿಸಿದ್ದರು. ಇದೀಗ ಮತ್ತೆ ಆಯೋಜಿಸಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಬಾಂಗ್ಲಾ ವಿಮೋಚನಾ ದಿನ – 1971ರ ಯುದ್ಧ ನೆನಪಿಸಿ ಯೂನುಸ್‌ಗೆ ಪತ್ರ ಬರೆದ ಪ್ರಧಾನಿ ಮೋದಿ