ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತಕ್ಕೆ ಅತ್ಯಾಧುನಿಕ ಯುದ್ಧ ವಿಮಾನಗಳನ್ನು ಮಾರಾಟ ಮಾಡಲು ಮುಂದಾಗಿದ್ದಾರೆ.
ಟ್ರಂಪ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ವ್ಯಾಪಾರವನ್ನು ಹೆಚ್ಚಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಪ್ರಧಾನಿ ಮೋದಿ ಮತ್ತು ಭಾರತದೊಂದಿಗೆ ವಿಶೇಷ ಬಾಂಧವ್ಯ ಹೊಂದಿದ್ದೇನೆ ಎಂದು ಟ್ರಂಪ್ ತಿಳಿಸಿದ್ದಾರೆ.
Advertisement
ಇತ್ತ ಚೀನಾ ವಿಶ್ವದಲ್ಲೇ ವೇಗವಾಗಿ ಬೆಳೆಯುತ್ತಿರುವ ರಾಷ್ಟ್ರವಾಗಿದೆ. ಅಮೆರಿಕದ ಆಡಳಿತವು ಭಾರತವನ್ನು ಸಮಾನ ಮನಸ್ಸಿನ ಹಿತಾಸಕ್ತಿಗಳೊಂದಿಗೆ ಪ್ರಮುಖ ಪಾಲುದಾರ ಎಂದು ನೋಡಿದೆ. ಟ್ರಂಪ್ ಹೊಸ ಆಡಳಿತವು ಅಮೆರಿಕದ ಉನ್ನತ ಮಿಲಿಟರಿ ವ್ಯವಸ್ಥೆಯಲ್ಲಿ ಒಂದಾದ F-35 ಯುದ್ಧ ವಿಮಾನಗಳನ್ನು ಮಾರಾಟ ಮಾಡಲು ಸಿದ್ಧವಾಗಿದೆ ಎಂದು ಟ್ರಂಪ್ ಘೋಷಿಸಿದ್ದಾರೆ.
Advertisement
ಭಾರತದ ಸುಂಕಗಳ ಬಗ್ಗೆ ಈ ಹಿಂದೆ ದೂರಿದ್ದ ಟ್ರಂಪ್, ಎರಡೂ ದೇಶಗಳು ವ್ಯಾಪಾರ ಒಪ್ಪಂದದಲ್ಲಿ ಒಟ್ಟಾಗಿ ಕೆಲಸ ಮಾಡುತ್ತವೆ ಎಂಬ ಪ್ರಧಾನಿ ಮೋದಿಯವರ ಮಾತಿಗೆ ಸಮ್ಮತಿಸಿದ್ದಾರೆ.