ಕೆನಡಾ ಮೇಲೆ 35% ಸುಂಕ ವಿಧಿಸಿದ ಟ್ರಂಪ್ – ಪ್ರತೀಕಾರಕ್ಕೆ ಮುಂದ್ರಾದ್ರೆ ಇನ್ನಷ್ಟು ಸುಂಕ ವಿಧಿಸುವುದಾಗಿ ವಾರ್ನಿಂಗ್‌

Public TV
1 Min Read
Mark Carney Trump

ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಸುಂಕ ಸಮರ (Tariffs War) ಮತ್ತೆ ಮುಂದುವರಿದಿದೆ. ಮುಂದಿನ ತಿಂಗಳು ಕೆನಡಾದಿಂದ (Canada) ಆಮದು ಮಾಡಿಕೊಳ್ಳುವ ವಸ್ತುಗಳ ಮೇಲೆ 35% ರಷ್ಟು ಸುಂಕ ವಿಧಿಸುವುದಾಗಿ ಟ್ರಂಪ್ (Donald trump) ಘೋಷಣೆ ಮಾಡಿದ್ದಾರೆ. ಅಲ್ಲದೇ ಇತರ ಹೆಚ್ಚಿನ ವ್ಯಾಪಾರ ಪಾಲುದಾರರ ಮೇಲೆ 15 ರಿಂದ 20% ಸಂಪೂರ್ಣ ಸುಂಕ ವಿಧಿಸಲು ಯೋಜಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

Donald Trump 1

ಈ ಕುರಿತ ಪತ್ರವನ್ನು ಟ್ರಂಪ್‌ ತಮ್ಮ ಸೋಷಿಯಲ್‌ ಮೀಡಿಯಾ ವೇದಿಕೆಯಲ್ಲಿ ಟ್ರೂತ್ ಸೋಶಿಯಲ್‌ನಲ್ಲಿ ಹಂಚಿಕೊಂಡಿದ್ದಾರೆ. ಬಿಡುಗಡೆ ಮಾಡಿದ ಪತ್ರದಲ್ಲಿ, ಟ್ರಂಪ್ ಕೆನಡಾದ ಪ್ರಧಾನಿ ಮಾರ್ಕ್ ಕಾರ್ನಿ (Mark Carney) ಅವರಿಗೆ ಹೊಸ ದರ ಆಗಸ್ಟ್ 1 ರಿಂದ ಜಾರಿಗೆ ಬರಲಿದೆ. ಹೊಸ ಸುಂಕವು (Tariff) ಅಮೆರಿಕಕ್ಕೆ ಪ್ರವೇಶಿಸುವ ಕೆನಡಾದ ಉತ್ಪನ್ನಗಳಿಗೆ ಅನ್ವಯಿಸುತ್ತದೆ ಎಂದು ತಿಳಿಸಿದ್ದಾರೆ. ಮುಂದುವರಿದು.. ಉಳಿದ ವ್ಯಾಪಾರ ಪಾಲುದಾರರ ಮೇಲೆ ಶೇ.15 ಅಥವಾ ಶೇ.20 ರಷ್ಟು ಸುಂಕ ವಿಧಿಸಲು ಯೋಜಿಸುತ್ತಿರುವುದಾಗಿ ಹೇಳಿದ್ದಾರೆ.

ಸುಂಕ ಏರಿಕೆಗೆ ಕಾರಣವನ್ನೂ ಟ್ರಂಪ್‌ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಕೆನಡಾ ಪ್ರಮುಖ ವಿಷಯಗಳಲ್ಲಿ ಸಹಕರಿಸಲು ವಿಫಲವಾಗಿದೆ. ಈ ಕಾರಣದಿಂದಾಗಿ ಸುಂಕ ವಿಧಿಸಲಾಗುತ್ತಿದೆ. ಒಂದು ವೇಳೆ ಕೆನಡಾ ಪ್ರತೀಕಾರ ತೀರಿಸಿಕೊಳ್ಳಲು ಮುಂದಾದ್ರೆ ದುಪ್ಪಟ್ಟು ಸುಂಕ ವಿಧಿಸಿಸುವುದಾಗಿಯೂ ಬೆದರಿಕೆ ಹಾಕಿದ್ದಾರೆ.

Mark Carney 1

ಇಲ್ಲಿಯವರೆಗೆ, ಟ್ರಂಪ್ 22 ದೇಶಗಳಿಗೆ ಹೊಸ ಸುಂಕ ವಿಧಿಸುವ ಪತ್ರಗಳನ್ನು ಬಿಡುಗಡೆ ಮಾಡಿದ್ದಾರೆ. ಜಪಾನ್, ಸೌತ್ ಕೊರಿಯಾ, ಮಯನ್ಮಾರ್, ಲಾವೋಸ್, ಥಾಯ್ಲೆಂಡ್, ಸೌತ್ ಆಫ್ರಿಕಾ, ಬಾಂಗ್ಲಾದೇಶ, ಕಜಕಸ್ತಾನ್, ಇಂಡೋನೇಷ್ಯಾ, ಟುನಿಶಿಯಾ, ಮಲೇಷ್ಯಾ, ಸರ್ಬಿಯಾ, ಕಾಂಬೋಡಿಯಾ, ಬೋಸ್ನಿಯಾ ಹರ್ಜೆಗೊವಿನಾ ದೇಶಗಳಿಗೆ ಅಮೆರಿಕ ಹೊಸ ಆಮದು ಸುಂಕಗಳನ್ನು ಪ್ರಕಟಿಸಿದೆ. ಆಗಸ್ಟ್ 1ರಿಂದ ಇದು ಅಧಿಕೃತವಾಗಿ ಜಾರಿಗೆ ಬರಲಿದೆ. ಅಲ್ಲದೇ ಇದು ಷೇರು ಮಾರುಕಟ್ಟೆಯ ಮೇಲೂ ಪರಿಣಾಮ ಬೀರಿದೆ.

Share This Article