ಭಾರತ-ಪಾಕ್ ಸಂಘರ್ಷ ತ್ವರಿತ ಶಮನಕ್ಕೆ ಟ್ರಂಪ್ ಒತ್ತಾಯ

Public TV
1 Min Read
donald trump

– ಶಾಂತಿಯುತವಾಗಿ ಸಮಸ್ಯೆ ಬಗೆಹರಿಸಿಕೊಳ್ಳಿ: ಅಮೆರಿಕ ಅಧ್ಯಕ್ಷ ಸಲಹೆ

ವಾಷಿಂಗ್ಟನ್: ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷ ತ್ವರಿತವಾಗಿ ಶಮನಗೊಳಿಸಿ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಒತ್ತಾಯಿಸಿದ್ದಾರೆಂದು ಶ್ವೇತಭವನ ತಿಳಿಸಿದೆ.

ಆಪರೇಷನ್‌ ಸಿಂಧೂರ ಕಾರ್ಯಾಚರಣೆ ನಡೆಸಿದ್ದ ಭಾರತ ಪಾಕಿಸ್ತಾನ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದಕ ನೆಲೆಗಳನ್ನು ಧ್ವಂಸಗೊಳಿಸಿತು. ಈ ಬೆಳವಣಿಗೆ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ತೀವ್ರಗೊಂಡಿತು. ಪರಿಸ್ಥಿತಿ ಅವಲೋಕಿಸುತ್ತಿರುವ ಅಮೆರಿಕ ಶಾಂತಿ ಮಾತುಕತೆಯಿಂದ ಸಮಸ್ಯೆ ಬಗೆಹರಿಸಿಕೊಳ್ಳಿ ಎಂದು ಎರಡೂ ದೇಶಗಳಿಗೆ ಸಲಹೆ ನೀಡಿದೆ.

ಅಮೆರಿಕ ಅಧ್ಯಕ್ಷರು ಈ ಉದ್ವಿಗ್ನತೆಯನ್ನು ಆದಷ್ಟು ಬೇಗ ಶಮನಗೊಳಿಸಲು ಬಯಸುತ್ತಾರೆ ಎಂದು ಶ್ವೇತಭವನ ತಿಳಿಸಿದೆ.

ಈಚೆಗೆ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ರೂಬಿಯೊ, ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರೊಂದಿಗೆ ಪ್ರತ್ಯೇಕವಾಗಿ ಮಾತನಾಡಿ, ಉದ್ವಿಗ್ನತೆಯನ್ನು ಶಮಗೊಳಿಸುವ ಅಗತ್ಯವನ್ನು ಒತ್ತಿ ಹೇಳಿದ್ದರು. ಭಯೋತ್ಪಾದಕ ಗುಂಪುಗಳಿಗೆ ಬೆಂಬಲವನ್ನು ಕೊನೆಗೊಳಿಸಲು ಪಾಕಿಸ್ತಾನವು ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದರು.

Share This Article