ಬೆಂಗಳೂರು: ಏನೇ ಸುಳ್ಳು ಕೇಸು ಹಾಕಿದರೂ ನ್ಯಾಯಾಲಯದಲ್ಲಿ ನ್ಯಾಯ ಸಿಗೋ ಭರವಸೆ ಇದೆ. ನ್ಯಾಯಾಲಯದ ಮೇಲೆ ನಂಬಿಕೆ ಇದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ.
ಸುಪ್ರೀಂಕೋರ್ಟ್ (Supremecourt) ನಿಂದ ಡಿಕೆಶಿವಕುಮಾರ್ ಗೆ ರಿಲೀಫ್ ವಿಚಾರ ಮಾತನಾಡಿದ ಅವರು, ನನಗೆ ಅದರ ಬಗ್ಗೆ ಗೊತ್ತಿಲ್ಲ. ನನಗೆ ಯಾರೂ ಮಾಹಿತಿ ಕೊಟ್ಟಿಲ್ಲ ಎಂದರು.
Advertisement
Advertisement
ಆದಾಯಕ್ಕೂ ಮೀರಿ ಆಸ್ತಿಗಳಿಕೆ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ತನಿಖೆಗೆ ಮಧ್ಯಂತರ ತಡೆ ನೀಡಿದ್ದ ಹೈಕೋರ್ಟ್ (Highcourt) ಆದೇಶ ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾ ಮಾಡಿದೆ. ಇದನ್ನೂ ಓದಿ: ಸಿಬಿಐ ಅರ್ಜಿ ವಜಾ – ಶಿವಕುಮಾರ್‌ಗೆ ಸುಪ್ರೀಂನಿಂದ ಬಿಗ್ ರಿಲೀಫ್
Advertisement
Advertisement
ಏನಿದು ಪ್ರಕರಣ?: 2017ರಲ್ಲಿ ಆದಾಯ ತೆರಿಗೆ ಇಲಾಖೆ ಡಿಕೆ ಶಿವಕುಮಾರ್ ಮೇಲೆ ದಾಳಿ ನಡೆಸಿತ್ತು. ಐಟಿ ಇಲಾಖೆ ನೀಡಿದ ಮಾಹಿತಿ ಆಧರಿಸಿ ಜಾರಿ ನಿರ್ದೇಶನಾಲಯ ವಿರುದ್ಧ ತನಿಖೆ ಆರಂಭಿಸಿತ್ತು. ಇಡಿ ತನಿಖೆಯನ್ನು ಆಧರಿಸಿ ಡಿಕೆಶಿ ವಿರುದ್ಧ ಎಫ್‍ಐಆರ್ ದಾಖಲಿಸಲು ಸಿಬಿಐ ರಾಜ್ಯ ಸರ್ಕಾರದಿಂದ ಅನುಮತಿ ಕೋರಿತ್ತು. ಸರ್ಕಾರ 2019ರ ಸೆ.25ರಂದು ಅನುಮತಿ ನೀಡಿದ ಬೆನ್ನಲ್ಲೇ 2020ರ ಅಕ್ಟೋಬರ್ 3 ರಂದು ಡಿಕೆ ಶಿವಕುಮಾರ್ ವಿರುದ್ಧ ಎಫ್‍ಐಆರ್ ದಾಖಲಾಗಿತ್ತು.
Web Stories