ನವದೆಹಲಿ: ಪ್ರಜಾಪ್ರಭುತ್ವ ಉಳಿಸುವ ಹೋರಾಟದಲ್ಲಿ ಸತ್ಯವೇ ನನ್ನ ಅಸ್ತ್ರ, ಸತ್ಯವೇ ನನಗೆ ಆಶ್ರಯ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುಡುಗಿದ್ದಾರೆ.
ಮಾನಹಾನಿ ಪ್ರಕರಣದಲ್ಲಿ (Defamation Case) ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಸೂರತ್ ಜಿಲ್ಲಾ ನ್ಯಾಯಲಯದ ಆದೇಶ ಪ್ರಶ್ನಿಸಿ ಸೆಷನ್ಸ್ ನ್ಯಾಯಲಯಕ್ಕೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ. ಮೇಲ್ಮನವಿ ಅರ್ಜಿಯನ್ನು ಮೇ 3 ರಂದು ವಿಚಾರಣೆ ನಡೆಸಲಾಗುವುದು ಎಂದು ಕೋರ್ಟ್ ಹೇಳಿದೆ. ಅರ್ಜಿ ವಿಚಾರಣೆ ನಡೆಸಿದ ಸೆಷನ್ಸ್ ನ್ಯಾಯಾಲಯವು ಏಪ್ರಿಲ್ 13ರ ವರೆಗೂ ಜಾಮೀನು ವಿಸ್ತರಿಸಿದೆ.
Advertisement
#CORRECTION | WATCH: “Appeal was filed today and Court granted him (Rahul Gandhi) fresh bail on Rs 15,000. Now, the further hearing of the matter would be on 13th April. Complainant has to file his reply by 10th April. That is all the procedure that was adapted today. The further… pic.twitter.com/wmfOO1QUzT
— ANI (@ANI) April 3, 2023
Advertisement
ಜಾಮೀನು ಪಡೆದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ʻಸತ್ಯವೇ ನನ್ನ ಅಸ್ತ್ರʼ ಎಂದು ಗುಡುಗಿದ್ದಾರೆ. ಅಲ್ಲದೇ ಇದು ʻಮಿತ್ರಕಾಲʼದ ವಿರುದ್ಧ ಪ್ರಜಾಪ್ರಭುತ್ವ ಉಳಿಸುವ ಹೋರಾಟ. ಈ ಹೋರಾಟದಲ್ಲಿ ಸತ್ಯವೇ ನನ್ನ ಅಸ್ತ್ರ, ಸತ್ಯವೇ ನನಗೆ ಆಶ್ರಯ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸರ್ವಾಧಿಕಾರದ ವಿರುದ್ಧ ರಾಹುಲ್ ಗಾಂಧಿ ಕ್ರಾಂತಿ – ಜೈಲಿನಿಂದ ಬರ್ತಿದ್ದಂತೆ ಬಿಜೆಪಿ ವಿರುದ್ಧ ಸಿಧು ಕಿಡಿ
Advertisement
Advertisement
ಪ್ರಧಾನಿ ನರೇಂದ್ರ ಮೋದಿ (Narendra Modi) ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದೋಷಿ ಎಂದು ಸೂರತ್ ಜಿಲ್ಲಾ ಕೋರ್ಟ್ (Surat Court) ತೀರ್ಪು ನೀಡಿ 2 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಇದನ್ನೂ ಓದಿ: ಸ್ವಂತ ಮನೆಯಿಲ್ಲ ಎಂದಿದ್ದ ರಾಹುಲ್ ಗಾಂಧಿಗೆ 4 ಅಂತಸ್ತಿನ ಮನೆ ನೀಡಿದ ಕಾಂಗ್ರೆಸ್ ʻರಾಜಕುಮಾರಿʼ
ನಿರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಇವೆರೆಲ್ಲರ ಸರ್‌ನೇಮ್ ಒಂದೇ ಆಗಿದ್ದು, ಈ ಎಲ್ಲಾ ಕಳ್ಳರು ದೇಶವನ್ನು ಲೂಟಿ ಮಾಡಿದ್ದಾರೆ ಎಂದು ರಾಹುಲ್ ತಮ್ಮ ಭಾಷಣದಲ್ಲಿ ಹರಿಹಾಯ್ದಿದ್ದರು. ಈ ಹೇಳಿಕೆಯನ್ನು ಆಧಾರಿಸಿ ಬಿಜೆಪಿ ಶಾಸಕ ಮತ್ತು ಗುಜರಾತ್ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ಕ್ರಿಮಿನಲ್ ಮಾನಹಾನಿ ದೂರು ದಾಖಲಿಸಿದ್ದರು. ಈ ಮೊಕದ್ದಮೆಯ ಅನ್ವಯ ರಾಹುಲ್ ಗಾಂಧಿ ಅವರಿಗೆ ಶಿಕ್ಷೆ ವಿಧಿಸಿ, ಮೇಲ್ಮನವಿಗೆ ಅರ್ಜಿ ಸಲ್ಲಿಸಲು ಒಂದು ತಿಂಗಳ ಕಾಲಾವಕಾಶ ನೀಡಲಾಗಿತ್ತು.
ಮಾನನಷ್ಟ ಪ್ರಕರಣ ಸಂಬಂಧ ಸೂರತ್ ಕೋರ್ಟ್ 2 ವರ್ಷ ಜೈಲು ಶಿಕ್ಷೆ ವಿಧಿಸಿದ ಬೆನ್ನಲ್ಲೇ ಲೋಕಸಭೆ ಸಚಿವಾಲಯದ ಕಾರ್ಯದರ್ಶಿ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿ ಆದೇಶ ಹೊರಡಿಸಿದ್ದರು.