Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಿಎಸ್‌ಟಿ ಸಂಗ್ರಹಣೆಯಲ್ಲಿ ಪ್ರಥಮ ಸ್ಥಾನ ಗಳಿಸಿ – ವಾಣಿಜ್ಯ ತೆರಿಗೆ ಅಧಿಕಾರಿಗಳಿಗೆ ಸಿಎಂ ಕರೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜಿಎಸ್‌ಟಿ ಸಂಗ್ರಹಣೆಯಲ್ಲಿ ಪ್ರಥಮ ಸ್ಥಾನ ಗಳಿಸಿ – ವಾಣಿಜ್ಯ ತೆರಿಗೆ ಅಧಿಕಾರಿಗಳಿಗೆ ಸಿಎಂ ಕರೆ

Bengaluru City

ಜಿಎಸ್‌ಟಿ ಸಂಗ್ರಹಣೆಯಲ್ಲಿ ಪ್ರಥಮ ಸ್ಥಾನ ಗಳಿಸಿ – ವಾಣಿಜ್ಯ ತೆರಿಗೆ ಅಧಿಕಾರಿಗಳಿಗೆ ಸಿಎಂ ಕರೆ

Public TV
Last updated: May 17, 2025 9:04 pm
Public TV
Share
2 Min Read
Siddaramaiah 9
SHARE
  • ಗ್ಯಾರಂಟಿ ಯೋಜನೆಗಳ ಯಶಸ್ಸಿನಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿಗಳ ಶ್ರಮವಿದೆ

ಬೆಂಗಳೂರು: ಜಿಎಸ್‌ಟಿ (GST) ಸಂಗ್ರಹಣೆಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿ ದ್ವಿತೀಯ ಸ್ಥಾನದಲ್ಲಿದೆ. ಮುಂದಿನ ದಿನಗಳಲ್ಲಿ ಮೊದಲನೇ ಸ್ಥಾನಕ್ಕೆ ಬರಲು ಪ್ರಯತ್ನಿಸಬೇಕು ಎಂದು ಸಿಎಂ ಸಿದ್ದರಾಮಯ್ಯ (Siddaramaiah)  ಅವರು ವಾಣಿಜ್ಯ ತೆರಿಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕರ್ನಾಟಕ ವಾಣಿಜ್ಯ ತೆರಿಗೆಗಳ ಸೇವಾ ಸಂಘ ಬೆಂಗಳೂರು ವತಿಯಿಂದ ಆಯೋಜಿಸಲಾಗಿದ್ದ ಸುವರ್ಣ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಈ ವೇಳೆ, ಸಂಘವು 50 ವರ್ಷಗಳ ಮೈಲಿಗಲ್ಲನ್ನು ಸಾಧಿಸಿದ್ದು, ಇದಕ್ಕಾಗಿ ಶ್ರಮಿಸಿದ ಸಂಘದ ಎಲ್ಲ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ನಿಮ್ಮೆಲ್ಲರ ಸಹಕಾರದಿಂದ ನಾನು ಆರ್ಥಿಕ ಇಲಾಖೆಯ ಜವಾಬ್ದಾರಿಯನ್ನು ದೀರ್ಘ ಕಾಲದವರೆಗೆ ನಿಭಾಯಿಸಲು ಸಾಧ್ಯವಾಯಿತು. ನಾನು ಹಣಕಾಸು ಮಂತ್ರಿಯಾಗಿ, ಉಪಮುಖ್ಯಮಂತ್ರಿಯಾಗಿ ಹಾಗೂ ಮುಖ್ಯಮಂತ್ರಿಯಾಗಿ ಹಣಕಾಸು ಇಲಾಖೆಯ ಕಾರ್ಯಭಾರವನ್ನು ನಿರ್ವಹಿಸಿದ್ದೇನೆ. ಈಗ ಸರ್ಕಾರದ ಯಶಸ್ವಿ ಆಡಳಿತಕ್ಕೆ ಎರಡು ವರ್ಷ ಪೂರೈಸಿದ್ದು, ಮೇ 20 ರಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಸಮಾವೇಶವನ್ನು ಏರ್ಪಡಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕೊತ್ತೂರು ಮಂಜುನಾಥ್ ಅನುಮಾನ ಸೇನೆ ಬಗ್ಗೆ ಅಲ್ಲ, ಬಿಜೆಪಿ ನಾಯಕರ ಬಗ್ಗೆ: ರಾಮಲಿಂಗಾ ರೆಡ್ಡಿ

ಜಿಎಸ್‌ಟಿ ಸಂಗ್ರಹಣೆಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿ ದ್ವಿತೀಯ ಸ್ಥಾನದಲ್ಲಿದ್ದು, ಮುಂದಿನ ದಿನಗಳಲ್ಲಿ ಪ್ರಥಮ ಸ್ಥಾನಕ್ಕೆ ಬರಲು ಪ್ರಯತ್ನಿಸಬೇಕು.

ಕರ್ನಾಟಕ ವಾಣಿಜ್ಯ ತೆರಿಗೆಗಳ ಸೇವಾ ಸಂಘವು 50 ವರ್ಷಗಳ ಮೈಲಿಗಲ್ಲನ್ನು ಸಾಧಿಸಿದ್ದು, ಇದಕ್ಕಾಗಿ ಶ್ರಮಿಸಿದ ಸಂಘದ ಎಲ್ಲ ಪದಾಧಿಕಾರಿಗಳಿಗೆ ಅಭಿನಂದನೆಗಳು. ನಿಮ್ಮೆಲ್ಲರ ಸಹಕಾರದಿಂದ ನಾನು… pic.twitter.com/ILj5gbtV1S

— Siddaramaiah (@siddaramaiah) May 17, 2025

ತೆರಿಗೆ ಸಂಗ್ರಹಣೆಯಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿಗಳ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಇದಕ್ಕಾಗಿ ಎಲ್ಲ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ಜವಾಬ್ದಾರಿಯುತ ಅಧಿಕಾರಿಗಳಿಂದ ಉತ್ತಮ ತೆರಿಗೆ ಸಂಗ್ರಹಣೆಯಾಗುತ್ತದೆ. ವಾಣಿಜ್ಯ ತೆರಿಗೆ ಇಲಾಖೆಯಿಂದ ಹೆಚ್ಚಿನ ಮೊತ್ತದ ತೆರಿಗೆ ಸಂಗ್ರಹಣೆ ಸಾಧ್ಯವಾಗುತ್ತದೆ. ಕಳೆದ ವರ್ಷ ತೆರಿಗೆ ಸಂಗ್ರಹಣೆಗೆ 1,03,000 ಕೋಟಿಗಳ ಗುರಿ ನಿಗದಿಪಡಿಸಲಾಗಿದ್ದು, ಹೆಚ್ಚುವರಿ 17,000 ಕೋಟಿ ರೂ. ತೆರಿಗೆ ಸಂಗ್ರಹಣೆಯನ್ನು ಸಾಧಿಸಲಾಗಿತ್ತು. ಈ ವರ್ಷ ತೆರಿಗೆ ಸಂಗ್ರಹಣೆಗೆ 1,20,000 ಕೋಟಿ ರೂ. ಗುರಿಯನ್ನು ನೀಡಲಾಗಿದೆ. ಅಧಿಕಾರಿಗಳು ಗುರಿಮೀರಿ ಸಾಧನೆ ಮಾಡಬೇಕಿದೆ ಎಂದಿದ್ದಾರೆ.

ಈ ವರ್ಷ 4,09,000 ಕೋಟಿ ರೂ. ಗಳ ಬಜೆಟ್ ಮಂಡಿಸಲಾಗಿದ್ದು, ಇದರಲ್ಲಿ ಗ್ಯಾರಂಟಿ ಯೋಜನೆಗಳಿಗೆ 50,018 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ಈವರೆಗೆ 90,000 ಕೋಟಿ ರೂ.ಗಳನ್ನು ಗ್ಯಾರಂಟಿಯೋಜನೆಗಳಿಗೆ (Guarantee Scheme) ವೆಚ್ಚ ಮಾಡಲಾಗಿದೆ. ಗ್ಯಾರಂಟಿಗಳಿಗೆ ಹಣ ಪೂರೈಸಲಾಗದೇ ರಾಜ್ಯ ಆರ್ಥಿಕ ದಿವಾಳಿಯಾಗುತ್ತದೆ ಎಂದು ವಿರೋಧಪಕ್ಷದವರು ಟೀಕಿಸಿದ್ದರು. ಸರ್ಕಾರದ ಈ ಯಶಸ್ಸಿಗೆ ಇಲಾಖೆಯ ಅಧಿಕಾರಿಗಳ ಶ್ರಮ ಅಡಗಿದೆ. ನಾನು ಹಣಕಾಸಿನ ಮಂತ್ರಿಯಾಗಿದ್ದರೂ ಸಹ ತೆರಿಗೆ ಅಧಿಕಾರಿಗಳ ಕಾರ್ಯ ನಿರ್ವಹಣೆಯಲ್ಲಿ ಅನಗತ್ಯ ಮದ್ಯಪ್ರವೇಶ ಮಾಡಲು ಬಯಸುವುದಿಲ್ಲ. ಆದರೆ ಅಧಿಕಾರಿಗಳು ಇಲಾಖೆಗೆ ನೀಡಿರುವ ತೆರಿಗೆ ಸಂಗ್ರಹಣೆಯ ಗುರಿಯನ್ನು ಸಾಧಿಸಲು ಪ್ರಯತ್ನಿಸಬೇಕು ಎಂದು ಸಲಹೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ತೆರಿಗೆ ಸೋರಿಕೆ ಹೆಚ್ಚಿನ ಮಟ್ಟದಲ್ಲಿದೆ. ಕರ್ನಾಟಕ ತೆರಿಗೆ ಸಂಗ್ರಹಣೆಯಲ್ಲಿ ಮುಂಚೂಣಿಯಲ್ಲಿದೆ. ತೆರಿಗೆ ಪಾವತಿ ಪ್ರಕ್ರಿಯೆಯಲ್ಲಿ ಹೆಚ್ಚಿನ ಸುಧಾರಣೆಗಳನ್ನು ತರಲು ಸರ್ಕಾರ ಬದ್ಧವಾಗಿದೆ. ತೆರಿಗೆ ಅಧಿಕಾರಿಗಳ ಸಂಘದ ಬೇಡಿಕೆಗಳನ್ನು ಸರ್ಕಾರ ಪರಿಶೀಲಿಸಲಾಗುವುದು. ಸರ್ಕಾರಿ ನೌಕರರ ನ್ಯಾಯಯುತ ಬೇಡಿಕೆಗಳಿಗೆ ಸರ್ಕಾರ ಎಂದಿಗೂ ಸ್ಪಂದಿಸುತ್ತದೆ. ಅಂತೆಯೇ ಕರ್ತವ್ಯಲೋಪ ಎಸಗುವ ಅಧಿಕಾರಿ ನೌಕರರ ಮೇಲೆ ಶಿಸ್ತಿನ ಕ್ರಮವನ್ನೂ ಸರ್ಕಾರ ತೆಗೆದುಕೊಳ್ಳುತ್ತದೆ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಪಾಕ್‌ ಏಜೆಂಟರ ರೀತಿ ಕಾಂಗ್ರೆಸ್ ನಾಯಕರು ಮಾತಾಡ್ತಿದ್ದಾರೆ: ರವಿಕುಮಾರ್ ಕಿಡಿ

TAGGED:bengalurucongressgstGUARANTEE SCHEMEsiddaramaiahtax
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

Raghav Chadha
Latest

ರಾಘವ್‌ ಚಡ್ಡಾಗೆ AAP ಶಾಕ್‌ – ರಾಜ್ಯಸಭೆಯಲ್ಲಿ ಉಪನಾಯಕ ಸ್ಥಾನದಿಂದ ವಜಾ

Public TV
By Public TV
6 minutes ago
CRIME
Crime

ಮಗನ ರೋಗ ವಾಸಿಯಾಗಲು 12 ವರ್ಷದ ಮಗಳನ್ನೇ ಬಲಿಕೊಟ್ಟ ತಾಯಿ – ಬಳಿಕ ರೇಪ್ ಅಂತ ದೂರು

Public TV
By Public TV
19 minutes ago
religious waste
Dakshina Kannada

ಮಂಗಳೂರಿನಲ್ಲಿ 5.5 ಟನ್ ಧಾರ್ಮಿಕ ತ್ಯಾಜ್ಯ ಸಂಗ್ರಹ

Public TV
By Public TV
50 minutes ago
lovers suicide chamarajanagara
Chamarajanagar

ನೇಣು ಬಿಗಿದುಕೊಂಡು ಆದಿವಾಸಿ ಸಮುದಾಯದ ಪ್ರೇಮಿಗಳು ಆತ್ಮಹತ್ಯೆ

Public TV
By Public TV
2 hours ago
jain premier league goes big 12 teams auctioned for rs 31 crore
Cricket

ಜೈನ್ ಪ್ರೀಮಿಯರ್ ಲೀಗ್ – ಕೋಟಿ ಕೋಟಿಗೆ ಹರಾಜಾದ ತಂಡಗಳು

Public TV
By Public TV
2 hours ago
Rupee Value dollar down
Latest

12 ವರ್ಷಗಳ ಬಳಿಕ ಒಂದೇ ದಿನ ಡಾಲರ್‌ ಮುಂದೆ ಅತಿದೊಡ್ಡ ಏರಿಕೆ ದಾಖಲಿಸಿದ ರೂಪಾಯಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?