ನವದೆಹಲಿ: ರಾಜ್ಯದ (Karnataka) ಜಲ ವಿವಾದಗಳ ಬಗ್ಗೆ ಕಾನೂನು ತಂಡದ ವಕೀಲರ ಜೊತೆ ಚರ್ಚೆ ನಡೆಸಿದ್ದು ಸಾಧ್ಯವಾದಷ್ಟು ಬೇಗ ವಿವಾದಗಳನ್ನು ಇತ್ಯರ್ಥ ಪಡಿಸಲಾಗುವುದು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (D.K. Shivakumar) ತಿಳಿಸಿದ್ದಾರೆ.
ದೆಹಲಿಯಲ್ಲಿ ವಕೀಲರ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೀರು ಹಂಚಿಕೆ ವಿವಾದ ಸಂಬಂಧ ಕಾನೂನು ತಜ್ಞರ ಸಭೆ ಮಾಡಲಾಗಿದೆ. ಈವರೆಗೂ ನಾವು ಅಂತಿಮ ನಿರ್ಣಯಕ್ಕೆ ಬಂದಿಲ್ಲ. ಮಹದಾಯಿ, ಕಾವೇರಿ, ಕೃಷ್ಣಾ ನದಿ ನೀರು ಹಂಚಿಕೆ ಮತ್ತು ಮೇಕೆದಾಟು ಯೋಜನೆ ವಿಚಾರವಾಗಿ ಮಾಹಿತಿ ಪಡೆದಿದ್ದೇನೆ. ಉಳಿದ ವಿಚಾರವನ್ನು ಮುಖ್ಯಮಂತ್ರಿಗಳ ಬಳಿ ಚರ್ಚೆ ಮಾಡಲಾಗುತ್ತದೆ. ಬಳಿಕ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ ಉಳಿದ ನಿರ್ದೇಶನ ನೀಡಲಾಗುವುದು. ನಮಗೆ ಸಮಯ ವ್ಯರ್ಥ ಮಾಡಲು ಇಷ್ಟವಿಲ್ಲ. ಆದಷ್ಟು ಬೇಗ ಎಲ್ಲಾ ಸಮಸ್ಯೆ ಬಗೆಹರಿಸಲು ಪ್ರಯತ್ನಿಸುತ್ತಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: ಪತ್ನಿಯ ಬೆರಳನ್ನೇ ಕಚ್ಚಿ ತಿಂದ ಪತಿ
Advertisement
Advertisement
ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸಂಬಂಧಿಸಿದ ವಕೀಲರ ಜೊತೆಗೂ ಚರ್ಚೆ ಮಾಡಲಾಗಿದೆ. ಎಷ್ಟು ಪ್ರಕರಣಗಳು ಬಾಕಿ ಉಳಿದಿವೆ? ಎಷ್ಟು ಪ್ರಕರಣ ದಾಖಲಾಗಿತ್ತು? ಎಷ್ಟು ಗೆಲ್ಲಲಾಗಿದೆ? ಎಷ್ಟು ಸೋತಿದ್ದೇವೆ ಎಂಬ ಮಾಹಿತಿ ಕೇಳಿದ್ದೇನೆ. ಇಲ್ಲಿ ಪ್ರತಿಯೊಬ್ಬರ ಜವಾಬ್ದಾರಿ ಬಹಳ ಮುಖ್ಯ. ಸರ್ಕಾರದ ಆಡಳಿತ ಯಂತ್ರ ಬಲಿಷ್ಠವಾಗಿರುವಂತೆ ನೋಡಿಕೊಳ್ಳುತ್ತೇವೆ. ಸದ್ಯ 350 ಪ್ರಕರಣ ನಡೆಯುತ್ತಿದೆ ಎಂಬ ಮಾಹಿತಿ ಇದೆ. ಈ ವಿಚಾರವಾಗಿ ಮಾಹಿತಿ ಪಡೆದು, ಅವರ ಕಾರ್ಯವೈಖರಿ ನೋಡಿ ತೀರ್ಮಾನ ಮಾಡುತ್ತೇವೆ ಎಂದಿದ್ದಾರೆ.
Advertisement
Advertisement
2019-2023ರ ವರೆಗೆ ಬಿಬಿಎಂಪಿ (BBMP) ವ್ಯಾಪ್ತಿಯಲ್ಲಿ ನಡೆದಿರುವ ಕಾಮಗಾರಿಗಳ ಬಗ್ಗೆ ಮಾತನಾಡಿ, ಬಿಬಿಎಂಪಿ ಕಾಮಗಾರಿಗಳ ಅಕ್ರಮದ ಬಗ್ಗೆ ಕೆಂಪಣ್ಣ ಅವರು ಪತ್ರ ಬರೆದಿದ್ದರು. ಸದನದ ಒಳಗೆ ಬಿಜೆಪಿ ಶಾಸಕರು ಅನೇಕ ಹೇಳಿಕೆ ನೀಡಿದ್ದರು. ಲೋಕಾಯುಕ್ತ ಸಂಸ್ಥೆ ಕೂಡ ಕೆಲವು ಕಾಮಗಾರಿ ವಿಚಾರವಾಗಿ ತನ್ನದೇ ಆದ ವರದಿ ನೀಡಿದೆ ಎಂದು ಹೇಳಿದ್ದಾರೆ.
ಬಿಬಿಎಂಪಿ ಕಾಮಗಾರಿಗಳಲ್ಲಿ ನೈಜತೆ ಪರಿಶೀಲನೆ ಮಾಡಿ ಹಣ ಬಿಡುಗಡೆ ಮಾಡಬೇಕು ಎಂಬ ಸಲಹೆ ಬಂದಿವೆ. ಈ ಬಗ್ಗೆ ತನಿಖೆ ಮಾಡುವಂತೆ ಬಿಜೆಪಿ ಶಾಸಕರೇ ಸಲಹೆ ನೀಡಿದ್ದಾರೆ. ಅವರ ಸಲಹೆ ಗಮನದಲ್ಲಿಟ್ಟುಕೊಂಡು ವಾಸ್ತವ ಅಂಶ ಅರಿಯಲು ವರದಿ ಕೇಳಿದ್ದೇನೆ. ಅನೇಕರು ವರ್ಷಾನುಗಟ್ಟಲೆಯಿಂದ ಬಿಲ್‍ಗಾಗಿ ಕಾಯುತ್ತಿದ್ದಾರೆ. ಯಾರು ಕೆಲಸ ಕೊಟ್ಟಿದ್ದಾರೆ? ಯಾವ ಕೆಲಸ ಆಗಿದೆ, ಅದರ ಗುಣಮಟ್ಟ ಏನಿದೆ? ಎಂದು ಪರಿಶೀಲನೆ ಆಗಬೇಕು. ಈ ವರದಿ ಬಂದ ನಂತರ ವಿವರವಾಗಿ ಮಾತನಾಡುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬೆಂಗಳೂರು ಟ್ರಾಫಿಕ್ ನಿವಾರಣೆಗೆ ಎಕ್ಸ್‌ಪ್ರೆಷನ್ ಆಫ್ ಇ-ಟ್ರಸ್ಟ್ ಮೂಲಕ ಜಾಗತಿಕ ಟೆಂಡರ್: ಡಿಕೆಶಿ
Web Stories