ತುಮಕೂರು: ವಿದ್ಯುತ್ ಕಂಬ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ, ಟ್ರೈಲರ್ ನಲ್ಲಿ ಕುಳಿತ್ತಿದ್ದ ಇಬ್ಬರು ಮೃತಪಟ್ಟ ಘಟನೆ ತುಮಕೂರು ತಾಲೂಕಿನ ನಾಮದಚಿಲುಮೆ ರಸ್ತೆಯಲ್ಲಿ ನಡೆದಿದೆ.
ಕೊರಟಗೆರೆ ತಾಲೂಕಿನ ಕಲ್ಲುಗುಟ್ಟರಹಳ್ಳಿಯ ಚಿಕ್ಕಣ್ಣ (50) ಹಾಗೂ ಜಗದೀಶ್ (49) ಮೃತ ದುರ್ದೈವಿಗಳು. ಮೂವರು ಗಂಭೀರವಾಗಿ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬುಧವಾರ ತುಮಕೂರಿನ ನಂದಿಹಳ್ಳಿಗೆ ವಿದ್ಯುತ್ ಕಂಬಗಳನ್ನು ಟ್ರ್ಯಾಕ್ಟರ್ ನಲ್ಲಿ ಸಾಗಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ.
ಚಿಕ್ಕಣ್ಣ ಹಾಗೂ ಜಗದೀಶ್ ಅವರ ತಲೆ, ಕಾಲುಗಳ ಮೇಲೆ ಕಂಬಗಳು ಬಿದ್ದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ನಡು ರಸ್ತೆಯಲ್ಲಿಯೇ ಅವಘಡ ಸಂಭವಿಸಿದ್ದರಿಂದ ಕೆಲ ಹೊತ್ತು ಸಂಚಾರ ಅಸ್ತವ್ಯಸ್ತಗೊಂಡಿತ್ತು. ಈ ಕುರಿತು ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

